ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನ ನಾಶಗೊಳಿಸಿ ಮನುಸ್ಮೃತಿ ಜಾರಿಗೆ ಹುನ್ನಾರ: ಸಿಎಂ ಸಿದ್ದರಾಮಯ್ಯ

‘We the people of India’ ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Sep 15, 2023, 05:14 PM IST
  • ಸಂವಿಧಾನ ವಿರೋಧಿ ಶಕ್ತಿಗಳಿಂದ ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ
  • ಸಂವಿಧಾನದ ನಾಶ & ಮನುಸ್ಮೃತಿಯ ಜಾರಿ ಎಂದರೆ ಶೇ.90ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ
  • ಸಂವಿಧಾನದ ಆಶಯ ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ
ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನ ನಾಶಗೊಳಿಸಿ ಮನುಸ್ಮೃತಿ ಜಾರಿಗೆ ಹುನ್ನಾರ: ಸಿಎಂ ಸಿದ್ದರಾಮಯ್ಯ  title=
ಮನುಸ್ಮೃತಿ ಜಾರಿಗೆ ಹುನ್ನಾರ!

ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಮಾತನಾಡಿರುವ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಿಎಂ ಕಚೇರಿ ಟ್ವೀಟ್ ಮಾಡಿದ್ದು, ‘ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ.90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ’ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ನ 6ನೇ ಗ್ಯಾರಂಟಿಗಾಗಿ ಇಂದು ಬೃಹತ್ ಪ್ರತಿಭಟನೆ

‘We the people of India’ ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವಣ್ಣನವರ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ. ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿದೆ’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ವಿವಾದ: ರಾಜ್ಯ ಬಿಜೆಪಿ ಕಚೇರಿಯಲ್ಲಿ ಹೈವೋಲ್ಟೆಜ್ ಮೀಟಿಂಗ್

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News