ಹಿಂದೂ ವಿರೋಧಿ ಬರಹ: ನಟ ಚೇತನ್ ಗೆ 14 ದಿನ‌ ನ್ಯಾಯಾಂಗ ಬಂಧನ

ಬೆಂಗಳೂರು:  ಹಿಂದೂ ವಿರೋಧಿ ಟ್ವೀಟ್ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಇಂದು ಬೆಳಗ್ಗೆ ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಸದ್ಯ ಪೊಲೀಸರ ಎಫ್‍ಐಆರ್ ಆಧರಿಸಿ ಬೆಂಗಳೂರಿನ 32ನೇ ಎಸಿಂಎಂ ನ್ಯಾಯಾಲಯವು  ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಕೋರ್ಟ್ ಮುಂದೆ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.   

Written by - VISHWANATH HARIHARA | Last Updated : Mar 21, 2023, 02:30 PM IST
  • ಶಿವಕುಮಾರ್ ಎನ್ನುವವರು ಚೇತನ್ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
  • 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು.
  • ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿಕೊಂಡಿದ್ದರು.
ಹಿಂದೂ ವಿರೋಧಿ ಬರಹ: ನಟ ಚೇತನ್ ಗೆ 14 ದಿನ‌ ನ್ಯಾಯಾಂಗ ಬಂಧನ title=

ವಾದ ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಶಿವಕುಮಾರ್ ಎನ್ನುವವರು ಚೇತನ್ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಚೇತನ್ ತಮ್ಮ ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರಿಗೌಡ ನಂಜೇಗೌಡ ಸುಳ್ಳು, ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ, ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 

ಇದನ್ನೂ ಒದಿ-Chetan Ahimsa: ಹಿಂದೂ ವಿರೋಧಿ, ಉರಿಗೌಡ,ನಂಜೇಗೌಡ ವಿರುದ್ಧ ಬರಹ: ನಟ ಅಂಹಿಸಾ ಚೇತನ್ ಬಂಧನ 

1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ ಕುರಿತು ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಪೋಸ್ಟ್ ನಲ್ಲಿ ಬರೆದಿಕೊಂಡಿದ್ದರು. ಸದ್ಯ ಚೇತನ್ ಗೆ ಈ ಪೋಸ್ಟ್ ನಿಂದ ಸಂಕಷ್ಟ ಎದುರಾಗಿದೆ.

​ಇದನ್ನೂ ಒದಿ-ಕಾಂಗ್ರೆಸ್ ಸೋಲಿನ ಹತಾಶೆಯಿಂದ ಬೋಗಸ್ ಕಾರ್ಡಿನ ಗ್ಯಾರಂಟಿ ಸರಣಿ ಮುಂದುವರಿಸಿದೆ: ಸಿಎಂ ಬೊಮ್ಮಾಯಿ  

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News