ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹರಿಹರ: ಇಂದು ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತಯಾಚಿಸಿ ಮಾತನಾಡಿದರು.

Written by - Prashobh Devanahalli | Last Updated : May 5, 2024, 07:39 PM IST
    • ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮ
    • ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ
    • ಬಿಜೆಪಿಗೆ ಸೋಲು ಖಂಡಿತ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ title=
File Photo

ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿಲ್ಲ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ ಸೋಲು ಖಂಡಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತಯಾಚಿಸಿ ಮಾತನಾಡಿದರು.

ಇದನ್ನೂ ಓದಿ: ಪಂದ್ಯ ಗೆಲ್ಲುತ್ತಿದ್ದಂತೆ ಪತ್ನಿ ಅನುಷ್ಕಾ ಶರ್ಮಾಗೆ ಸನ್ನೆ ಮಾಡಿ ಹೀಗಂದ ವಿರಾಟ್ ಕೊಹ್ಲಿ! ವಿಡಿಯೋ

ಬಿಜೆಪಿಯ 25 ಸಂಸದರು ರಾಜ್ಯಕ್ಕಾಗಿರುವ ಅನ್ಯಾಯವನ್ನು ಎಂದೂ ಪ್ರಶ್ನಿಸಲಿಲ್ಲ. ಅವರಲ್ಲಿ ಹಲವರನ್ನು ಈ ಬಾರಿ ಬಿಜೆಪಿಯವರೇ ಕೈಬಿಟ್ಟಿದ್ದಾರೆ.  ಈ ಹಿಂದೆ ಇದ್ದ ಬಿಜೆಪಿ ಸಂಸದರು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದೇ , ಬಿಜೆಪಿಯವರೇ ಈ ಬಾರಿ ಹಲವರನ್ನು ಕೈಬಿಟ್ಟಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ

ಹರಿಹರ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆ  ಹಾಗೂ  ಸುಮಾರು 5 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಒದಗಿಸುವ ಏತ ನೀರಾವರಿ ಯೋಜನೆಗೆ ಚುನಾವಣೆ ನಂತರ ಚಾಲನೆ ನೀಡಲಾಗುವುದು. ನಾನು ನುಡಿದ ಮಾತಿನಂತೆ ನಡೆಯುವವನು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆಂದು ತಿಳಿಸಿದಂತೆ 8 ತಿಂಗಳ ಒಳಗೆ  ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ,ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಜನರ ಪ್ರಶಂಸೆಯನ್ನು ಗಳಿಸಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ರೈತ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್, ಶೂ ಭಾಗ್ಯ, ಶಾದಿ ಭಾಗ್ಯಗಳಂತಹ ಜನಪರ ಯೋಜನೆಗಳನ್ನು ಕಾಂಗ್ರೆಸ್ ನೀಡಿದೆ ಎಂದರು.

ಬಿಜೆಪಿ ಜಾತಿಧರ್ಮಗಳನ್ನು ಪರಸ್ಪರ  ಎತ್ತಿಕಟ್ಟುವ  ಕೆಲಸಗಳನ್ನು ಮಾಡುತ್ತಾ ಬಂದಿದೆ. ದ್ವೇಷದ ರಾಜಕಾರಣವನ್ನು ಮಾಡುತ್ತಾ ಜನರ ಒಳಿತನ್ನು ಕಡೆಗಣಿಸಿದ್ದಾರೆ. ಮೋದಿಯವರು , ದಲಿತರ, ಹಿಂದುಳಿದವರ ಮೀಸಲಾತಿಯನ್ನು ಮುಸಲ್ಮಾನರಿಗೆ ಕಾಂಗ್ರೆಸ್ ನೀಡುತ್ತದೆ ಎಂದು ದೊಡ್ಡ ಸುಳ್ಳನ್ನು ಹೇಳಿದ್ದಾರೆ.  ಈ ಪ್ರಮಾಣದಲ್ಲಿ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮುಸಲ್ಮಾನರ ವಿರುದ್ಧ ದಲಿತರನ್ನು, ಹಿಂದುಳಿದವರ ವಿರುದ್ಧ ದಲಿತರು, ಅಲ್ಪಸಂಖ್ಯಾತರನ್ನು  ಎತ್ತಿಕಟ್ಟುವ ಕೆಲಸವನ್ನು ಮೋದಿಯವರು ಮಾಡುತ್ತಿದ್ದಾರೆ. ಸಂವಿಧಾನದ ಮೀಸಲಾತಿ ಪ್ರಮಾಣದಲ್ಲಿ ಶೇ. 10 ರಷ್ಟನ್ನು ಆರ್ಥಿಕವಾಗಿ ಹಿಂದುಳಿದವರಿಗೆ ಸೃಷ್ಟಿಸಿದರು. ಆದರೆ ಸಂವಿಧಾನದಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಮಾತ್ರ ಮೀಸಲಾತಿಯನ್ನು ಕೊಡಬಹುದಾಗಿದೆ. ಮೋದಿಯವರು ಸಂವಿಧಾನವನ್ನು ಪೂರ್ಣ ತಿಳಿದಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾವು ಅಧಿಕಾರಕ್ಕೆ ಬಂದರೆ ಒಟ್ಟಾರೆ ಮೀಸಲಾತಿ ಪ್ರಮಾಣವನ್ನು ಹೆಚ್ಚು ಮಾಡುತ್ತೇವೆ ಎಂದು ಹೇಳಿದ್ದೇವೆಯೇ ಹೊರತು. ಒಬ್ಬರ ಮೀಸಲಾತಿಯನ್ನು ಕಿತ್ತು ಮತ್ತೊಬ್ಬರಿಗೆ ಕೊಡುತ್ತೇವೆ ಎಂದು ಎಲ್ಲಿಯೂ ಹೇಳಿಯೇ ಇಲ್ಲ ಎಂದರು.

ಮೀಸಲಾತಿ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇಲ್ಲ

ಬಿಜೆಪಿ ಹಾಗೂ ಆರ್ ಎಸ್ ಎಸ್  ಮೀಸಲಾತಿಯನ್ನು ಬೆಂಬಲಿಸಲಿಲ್ಲ. ಆದ್ದರಿಂದ ಮೀಸಲಾತಿ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಮಂಡಲ್ ವರದಿಯಂತೆ ಉನ್ನತ ಶಿಕ್ಷಣಸಂಸ್ಥೆಗಳಲ್ಲಿ ಮೀಸಲಾತಿ ತರಲು ಬಿಜೆಪಿ ವಿರೋಧಿಸಿದರು. ಮಂಡಲ್ ಪಂಚಾಯತಿ, ನಗರ ಸಭೆಗಳಲ್ಲಿ  ಮಹಿಳೆಯರು, ದಲಿತರು, ಹಿಂದುಳಿದವರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ವಿರೋಧಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಮೀಸಲಾತಿ ನೀಡಿಕೆಯನ್ನು ಎತ್ತಿಹಿಡಿಯಿತು. ಚುನಾವಣೆ ಬಂದಾಗ ಮಾತ್ರ ಮೋದಿಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ ಎಂದು ಟೀಕಿಸಿದರು.

ಮೋದಿಯವರು ನೀಡಿದ ಭರವಸೆ ಈಡೇರಿಸಲಿಲ್ಲ

ಮೋದಿಯವರು ಹತ್ತು ವರ್ಷಗಳ ಕಾಲ ಜನರಿಗೆ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ರೈತರ ಸಾಲ ಮನ್ನಾ ಮಾಡದೇ ಅದಾನಿ ಹಾಗೂ ಅಂಬಾನಿ ಕೈಗಾರಿಕೋದ್ಯಮಿಗಳಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ಶ್ರೀಮಂತರ ಪರವಾಗಿರುವವರು. ಆದರೆ, ಇವರು ಬಡವರ ಪರವಾಗಿ ಇರುವವರು ಎಂದು ಮೋಸ ಹೋಗಿದ್ದಾಯ್ತು. ನಂಬಿಕೆ ದ್ರೋಹ ಎಸಗಿದ ಮೋದಿಯವರಿಗೆ ಮತ ಹಾಕಬೇಕೆ ? ಎಂದು ಪ್ರಶ್ನಿಸಿದರು.

ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದು ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ

ನಮ್ಮ ಸರ್ಕಾರ ಇರುವವರೆಗೆ ಜನತೆಯ ಆಶೋತ್ತರಗಳನ್ನು ಈಡೇರಿಸಲಾಗುವುದು.  ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವುದು ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ. ನಮಗೆ ತೊಂದರೆ ಕೊಡಲು ವಿನಯ್ ಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ನಿಂತಿದ್ದಾರೆ. ಅವರು ಗೆಲ್ಲುವುದಿಲ್ಲ. ಏಕೆಂದರೆ ಬಿಜೆಪಿ ಜೊತೆಗೆ ಶಾಮೀಲಾಗಿದ್ದಾರೆ.  ಕನಕ ಗುರುಪೀಠದ ನಿರಂಜನಾನಂದಾಪುರಿ ಸ್ವಾಮಿಗಳು ಮತ್ತು ನಾನು ವಿನಯ್ ಕುಮಾರ್ ಅವರೊಂದಿಗೆ ಮಾತನಾಡಿ, ನಿಲ್ಲುವುದು ಬೇಡ  ಸಲಹೆ ನೀಡಿದಾಗ ಒಪ್ಪಿಕೊಂಡ ಅವರು. ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಕರ್ನಾಟಕದಲ್ಲಿ ನಾನು ಬೇಕೋ, ವಿನಯ್ ಕುಮಾರ್ ಬೇಕೋ ನಿರ್ಧರಿಸಿ ಎಂದರು.

ನಾನೇ ಚುನಾವಣೆಗೆ ನಿಂತಿದ್ದೇನೆ ಎಂದು ತಿಳಿಯಬೇಕು. ಕಾಂಗ್ರೆಸ್ ಅಭ್ಯರ್ಥಿಗೆ ಕೊಡುವ ಮತ ಸಿದ್ದರಾಮಯ್ಯಗೆ ಕೊಡುವ ಮತ. ನನಗೆ ಶಕ್ತಿ ನೀಡಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಇದನ್ನೂ ಓದಿ: ಡಯೆಟ್’ನಲ್ಲಿ ಇರಲಿ ಈ ತರಕಾರಿ: ಅಪ್ಪಿತಪ್ಪಿಯೂ ಹೆಚ್ಚಾಗದಂತೆ ನಿಯಂತ್ರಣದಲ್ಲಿರುತ್ತೆ ಬ್ಲಡ್ ಶುಗರ್

ನಮ್ಮ ಅಭ್ಯರ್ಥಿ ವಿದ್ಯಾವಂತೆ. ಸಂಸತ್ತಿನಲ್ಲಿ ನಿಮ್ಮ ಪರವಾಗಿ ಮಾತನಾಡುವ ಶಕ್ತಿ ಇದೆ. ಅದಕ್ಕಾಗಿ ನಮ್ಮ ಅಭ್ಯರ್ಥಿಗೆ ಆಶೀರ್ವಾದ ಮಾಡಿ. ಅವರು ಗೆದ್ದರೆ, ನಾನೇ ಗೆದ್ದಂತೆ ಎಂದು ಮುಖ್ಯಮಂತ್ರಿ ಗಳು ಕರೆ ನೀಡಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News