ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್‌ ನಿಂದ ಸಿಎಂ ಇಬ್ರಾಹಿಂ ಅಮಾನತು

CM Ibrahim: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ರಾಜ್ಯದ ಜೆಡಿಎಸ್‌ ಘಟಕದ ಮಾಜಿ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.

Written by - Savita M B | Last Updated : Nov 17, 2023, 08:05 PM IST
  • ಇಬ್ರಾಹಿಂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಸಂಪೂರ್ಣ ನಿಷ್ಕ್ರಿಯರಾಗಿದ್ದರು
  • ಸಂಘಟನೆ ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿರುವುದಿಲ್ಲ, ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಂಡಿರುವುದಿಲ್ಲ
  • ಸಿ.ಎಂ.ಇಬ್ರಾಹಿಂ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್‌ ನಿಂದ ಸಿಎಂ ಇಬ್ರಾಹಿಂ ಅಮಾನತು title=

ಬೆಂಗಳೂರು: ಈ ಬಗ್ಗೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸಂವಿಧಾನ ಹಾಗೂ ನಿಯಮಗಳ ಅಡಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದ ಇಬ್ರಾಹಿಂ ಅವರನ್ನು ಸಸ್ಪಂಡ್‌ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ-ಜಮೀರ್ ಅಹಮದ್ ಹೇಳಿಕೆಗೆ ವಿಜಯೇಂದ್ರ‌ ಖಂಡನೆ

ಇಬ್ರಾಹಿಂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿರುವುದಿಲ್ಲ, ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಂಡಿರುವುದಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪಕ್ಷದ ನಿರ್ಣಯವನ್ನು ಅವರು ಸ್ಪಷ್ಟವಾಗಿ ಉಲ್ಲಂಘನೆ ಮಾಡಿರುತ್ತಾರೆ ಎಂದು ಅವರು ಹೇಳಿದ್ದಾರೆ.

ಅಮಾನತು ಹಿನ್ನೆಲೆ:
ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು ಹಾಗೂ ಮೈತ್ರಿಯ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಡೆದ ಎಲ್ಲಾ ಸಭೆಗಳಲ್ಲಿ ಇಬ್ರಾಹಿಂ ಅವರು ಹಾಜರಿದ್ದರು. ಆದರೂ ಅವರು ಪಕ್ಷಕ್ಕೆ ಹಾನಿ ಉಂಟು ಮಾಡುವ ವಿರೋಧಾಭಾಸದ ಹೇಳಿಕೆಗಳನ್ನು ನೀಡಿರುತ್ತಾರೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳದ ರಾಜ್ಯಾಧ್ಯಕ್ಷರನ್ನು ಒಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಪಕ್ಷದ ಸಂವಿಧಾನದ ಆರ್ಟಿಕಲ್‌ 10ರ ಅನ್ವಯ ಕಳೆದ ಅಕ್ಟೋಬರ್‌ 19ರಂದು ವಿಸರ್ಜನೆ ಮಾಡಿ ರಾಷ್ಟ್ರೀಯ ಅಧ್ಯಕ್ಷರು ಆದೇಶ ಹೊರಡಿಸಿದ್ದರು.

ತದ ನಂತರ ಇಬ್ರಾಹಿಂದ ಅವರು ನವೆಂಬರ್‌ 7ರಂದು ʼಚಿಂತನ ಮಂಥನʼ ಎನ್ನುವ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಮಾನಾಂತರ ಸಭೆ ಕರೆದು ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿ ಸುಳ್ಳು ಆರೋಪಗಳನ್ನು ಮಾಡಿದ್ದರು.

ಇದನ್ನೂ ಓದಿ-ಲವ್‌, ಸೆಕ್ಸ್‌, ದೋಖಾ..! ಬಳ್ಳಾರಿ ಸಂಸದನ ಮಗನ ವಿರುದ್ಧ ಎಫ್‌ಐಆರ್‌

ನವೆಂಬರ್‌ 7ರಂದು ನೀಡಿದ ಹೇಳಿಕೆಯಲ್ಲಿ, ನಾನಿನ್ನೂ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದೇನೆ ಎಂದು ತಿಳಿಸಿ, ಬಿಜೆಪಿ ಜತೆ ಮೈತ್ರಿಗೆ ಒಲವು ಇರುವವರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷ ವಿರೋಧಿ ಹೇಳಿಕೆಯನ್ನೂ ನೀಡಿರುತ್ತಾರೆ.

ನವೆಂಬರ್‌ 15ರಂದು ಕೇರಳದ ತಿರುವನಂತಪುರದಲ್ಲಿ ಸಿ.ಕೆ.ನಾನು ಅವರ ನೇತೃತ್ವದಲ್ಲಿ ಪಕ್ಷ ವಿರೋಧಿ ಸಭೆಯನ್ನು ನಡೆಸಿ, ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡಿರುತ್ತಾರೆ. ಇವೆಲ್ಲಾ ನಡವಳಿಕೆ, ಹೇಳಿಕೆಗಳ ಹಿನ್ನೆಲೆಯಲ್ಲಿ ಸಿಎಂ ಇಬ್ರಾಹಿಂ ಅವರು ಪಕ್ಷದ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷರು ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News