ಸಂಗೀತದ ಕುರಿತ ಪುಸ್ತಕಕ್ಕೆ ಬಹುಮಾನ ನೀಡಲು ಅರ್ಜಿ ಆಹ್ವಾನ

ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ, ಗಮಕ ಕಲಾಪ್ರಕಾರಗಳಲ್ಲಿ 2020-21ನೇ ಸಾಲಿಗಾಗಿ 2019 ಜನೇವರಿಯಿಂದ 2019 ಡಿಸೆಂಬರ್ ಒಳಗೆ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ  ಅರ್ಜಿ ಆಹ್ವಾನಿಸಲಾಗಿದೆ. 

Last Updated : Sep 18, 2020, 03:20 PM IST
ಸಂಗೀತದ ಕುರಿತ ಪುಸ್ತಕಕ್ಕೆ ಬಹುಮಾನ ನೀಡಲು ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ, ಗಮಕ ಕಲಾಪ್ರಕಾರಗಳಲ್ಲಿ 2020-21ನೇ ಸಾಲಿಗಾಗಿ 2019 ಜನೇವರಿಯಿಂದ 2019 ಡಿಸೆಂಬರ್ ಒಳಗೆ ಪ್ರಕಟಿಸಿರುವ ಪುಸ್ತಕಗಳಿಗೆ ಬಹುಮಾನ ನೀಡಲು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ  ಅರ್ಜಿ ಆಹ್ವಾನಿಸಲಾಗಿದೆ. 

 ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ದಪಡಿಸಿರಬಾರದು. ಸಂಪಾದಿತ ಕೃತಿಯಾಗಿರಬಾರದು. ಸ್ವ-ರಚಿತವಾಗಿರಬೇಕು. ಪ್ರಥಮ ಮುದ್ರಾಣಾವೃತ್ತಿ ಯಾಗಿರಬೇಕು. ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ರಿಜಿಸ್ಟಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ  ಸೆಪ್ಟೆಂಬರ್ 30, 2020 ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಳುಹಿಸ ಬೇಕು.

ಅರ್ಜಿಯನ್ನು ಅಕಾಡೆಮಿ ಕಚೇರಿಯಿಂದ ಪಡೆಯಬಹುದು ಹಾಗೂ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿಯೂ ಪಡೆಯಬಹುದಾಗಿದೆ. ಹಾಗೂ ಅಕಾಡೆಮಿ ಅಂರ್ತಜಾಲತಾಣ  https://karnatakasangeetanrityaacademy.com  ಮೂಲಕ ಸಹ ಪಡೆಯಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News