ಕಾನೂನು ಪದವೀದರರಿಗಾಗಿ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ

2020-21ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಲ್ಲಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪಧವೀದರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Last Updated : Jul 7, 2020, 04:55 PM IST
ಕಾನೂನು ಪದವೀದರರಿಗಾಗಿ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಕೋಲಾರ: 2020-21ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಲ್ಲಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾನೂನು ಪಧವೀದರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಅರ್ಜಿಗಳನ್ನು ಕೊನೆಯ ದಿನಾಂಕ ನವೆಂಬರ್ 30 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು 40 ವರ್ಷ ವಯೋ ಮಿತಿಯಲ್ಲಿರಬೇಕು. ತರಬೇತಿ ಅವಧಿ 2 ವರ್ಷಗಳಾಗಿದ್ದು ಮಾಸಿಕ ರೂ 10.000 ರೂಗಳ ಶಿಷ್ಯವೇತನವನ್ನು ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಯನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಹಿರಿಯ ವಕೀಲರಲ್ಲಿ ತರಬೇತಿಗೆ ನಿಯೋಜಿಸಲಾಗುತ್ತದೆ. ಕೋಲಾರ ಜಿಲ್ಲೆಯ ಬಾರ್ ಕೌನ್ಲಿಲ್‍ನಲ್ಲಿ ಹಾಗೂ ಅಭ್ಯರ್ಥಿಯು ಕೋಲಾರ ಜಿಲ್ಲೆಯಲ್ಲಿ ತರಬೇತಿಯನ್ನು ನೋಂದಾಯಿತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ.

ಪರಿಶಿಷ್ಟ ಜಾತಿ ಕಾನೂನು ಪಧವೀದರರಿಗೆ ಆನ್‍ಲೈನ್ ವೆಬ್‍ಸೈಟ್ ವಿಳಾಸ: www.sw.kar.in ಮೂಲಕ ಸಲ್ಲಿಸಬೇಕಾಗಿರುತ್ತದೆ. ಮ್ಯಾನ್ಯೂಯಲ್‍ನಲ್ಲಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಪರಿಶಿಷ್ಟ ವರ್ಗಗಳ ಸಂಬಂಧಪಟ್ಟವರು ಮ್ಯಾನ್ಯೂಯಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡ ಕಾಫಿಯೊಂದಿಗೆ ದಾಖಲೆಗಳನ್ನು ಕೋಲಾರ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ.

Trending News