ಬೆಂಗಳೂರು: 2020-21 ನೇ ಸಾಲಿಗೆ ಖಾದಿ ಗ್ರಾಮೋದ್ಯೋಗ ಆಯೋಗ, ಭಾರತ ಸರ್ಕಾರ ರವರು ಕೋಲಾರ ಜಿಲ್ಲೆಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯಡಿ ಉತ್ಪಾದನೆ ಮತ್ತು ಸೇವಾ ಚಟುವಟಿಕೆ ಪ್ರಾರಂಭಿಸಲು ಮತ್ತು ಸಾಲ ಪಡೆಯಲು ಪ್ರಸಕ್ತ ಸಾಲಿಗೆ ಒಟ್ಟು 75 ಭೌತಿಕ ಗುರಿ ನಿಗದಿಪಡಿಸಲಾಗಿದೆ.
ಈ ಯೋಜನೆಯು ಮೂರು ಇಲಾಖೆಗಳು ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ (ಆIಅ) ಸಂಬಂಧಿಸಿದಂತೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆ/ಸೇವಾ ಚಟುವಟಿಕೆ ಸ್ಥಾಪನೆಗೆ ಉದ್ದೇಶಿಸಿರುವ ಯೋಜನೆಗಳಿಗೆ 38 ಭೌತಿಕ ಗುರಿ ನಿಗದಿಪಡಿಸಿರುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸುವ ಯೋಜನೆಗಳಿಗೆ ಖಾದಿ ಗ್ರಾಮೋದ್ಯೋಗ ಮಂಡಳಿ (ಏಗಿIಃ) ಗೆ ಸಂಬಂಧಿಸಿದಂತೆ 19 ಮತ್ತು ಖಾದಿ ಗ್ರಾಮೋದ್ಯೋಗ ಆಯೋಗ (ಏಗಿIಅ)ರವಗೆ ಸಂಬಂದಿಸಿದಂತೆ 18 ಭೌತಿಕ ಗುರಿಯನ್ನು ನಿಗದಿಪಡಿಸಲಾಗಿದೆ.
ಈ ಯೋಜನೆಯಡಿ ಬ್ಯಾಂಕ್‍ಗಳಿಂದ ಸಾಲ ಪಡೆದು ಉತ್ಪಾದನೆ/ಸೇವಾ ಚಟುವಟಿಕೆಗಳನ್ನು ಪ್ರಾರಂಭಿಸಲು ಉದ್ದೇಶವುಳ್ಳ ಅರ್ಜಿದಾರರಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಪೋರ್ಟಲ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ವೆಬ್‍ಸೈಟ್ ವಿಳಾಸ https://www.kviconline.gov.in ಮೂಲಕ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.