ಧಾರವಾಡ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಮಹಿಳಾ ಉದ್ದೇಶಿತ ಆಯವ್ಯಯದಡಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಪ್ರೆಂಟಿಸ್ ತರಬೇತಿ ಅವಧಿಯು ಹತ್ತು ತಿಂಗಳದ್ದಾಗಿದ್ದು, ತಾತ್ಕಾಲಿಕವಾಗಿರುತ್ತದೆ.ಪತ್ರಿಕೋದ್ಯಮ (Journalism Apprentice Training) ದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ,ಕಂಪ್ಯೂಟರ್ ಜ್ಞಾನ, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರುವ 40 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರ ರೂ.ಸ್ಟೈಫಂಡ್ ನೀಡಲಾಗುವುದು.
ಇದನ್ನೂ ಓದಿ: ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಧಾರವಾಡ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಜಿಲ್ಲೆಯಲ್ಲಿ ಅರ್ಹ ಅಭ್ಯರ್ಥಿಗಳು ಸಿಗದಿದ್ದಲ್ಲಿ ಅಕ್ಕ ಪಕ್ಕದ ಜಿಲ್ಲೆಯಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಧಾರವಾಡ ಕಚೇರಿಯಲ್ಲಿ ಪಡೆದುಕೊಂಡು ಭರ್ತಿ ಮಾಡಿ ಇದೇ ಜ.25ರೊಳಗೆ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಇದನ್ನೂ ಓದಿ: ಹಿರಿಯ ಪತ್ರಕರ್ತ ರವೀಶ್ ಕುಮಾರ್ ಗೆ ಪ್ರತಿಷ್ಠಿತ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ
ಅರ್ಜಿ ನಮೂನೆ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಧಾರವಾಡ ಅಥವಾ ದೂ:0836- 2447469 ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಡಿ.ಡೊಳ್ಳಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.