ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ

 ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಿಂದ 2020ರ ಆಗಸ್ಟ್ 5ರಿಂದ 14ರವರೆಗೆ ಹತ್ತು ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

Last Updated : Jul 29, 2020, 10:17 PM IST
ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು : ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಿಂದ 2020ರ ಆಗಸ್ಟ್ 5ರಿಂದ 14ರವರೆಗೆ ಹತ್ತು ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ ಬಿಪಿಎಲ್ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಸಮಯದಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುತ್ತದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳಾದ ಆಧಾರ್ ಕಾರ್ಡ್, ಬಿಪಿಎಲ್ ಪಡಿತರ ಚೀಟಿ, ಅಕೌಂಟ್ ಪಾಸ್ ಬುಕ್ ತಲಾ 4 ಪ್ರತಿ ಹಾಗೂ 5 ಇತ್ತೀಚಿನ ಭಾವಚಿತ್ರಗಳನ್ನು ಲಗತ್ತಿಸಿ 2020ರ ಆಗಸ್ಟ್ 3ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಸಂದರ್ಶನ ದಿನಾಂಕ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9243602888 ಮತ್ತು 9886781239ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Trending News