ಬೆಂಗಳೂರು : ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಕಲಬುರಗಿ ವತಿಯಿಂದ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕಲಬುರಗಿಯಲ್ಲಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆ ನಡೆಸುತ್ತಿದ್ದು, ಈ ತರಬೇತಿ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ/ ಸಹಕಾರ ಇಲಾಖೆ/ ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಆರು ತಿಂಗಳಕಾಲ ಡಿಪ್ಲೋಮಾ ಇನ್ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್'' ತರಬೇತಿಯನ್ನು ನೀಡುತ್ತಿದೆ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಹಕಾರ ಸಂಘ/ ಸಹಕಾರ ಇಲಾಖೆ/ ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರನಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶೇ. 18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400/- ಗಳ #ಶಿಷ್ಯವೇತನವನ್ನು ನೀಡಲಾಗುವುದು.
ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆರು ತಿಂಗಳ ವಿಶೇಷ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಸಹ ನೀಡಲಾಗುವುದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಯನ್ನು #ಸೆಪ್ಟೆಂಬರ್_30_ರೊಳಗಾಗಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಕ್ಕೆ ಮೀರಿರಬಾರದು. ಈ ವರ್ಗಕ್ಕೆ ಮಾಹೆಯಾನ ರೂ. 500/-ಗಳ ಶಿಷ್ಯವೇತನವನ್ನು ನೀಡಲಾಗುವುದು.
ಡಿ.ಸಿ.ಎಂ ತರಬೇತಿಯ ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿAದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯುನಿಯನ್ (ಬೀದರ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ)ಗಳಲ್ಲಿ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಕಲಬುರಗಿ ತರಬೇತಿ ಸಂಸ್ಥೆಯಲ್ಲಿ ಸಲ್ಲಿಸಬೇಕು.
ಹೆಚ್ಚಿನ_ಮಾಹಿತಿಗಾಗಿ ಪ್ರಾಶುಂಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ ರಸ್ತೆ ಕಲಬುರಗಿ-585105, ದೂರವಾಣಿ ಸಂಖ್ಯೆ 08472-245340, ಮೊ.ಸಂ. 9742307153, 9113916753 ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.