Karnataka Election 2023: ಚುನಾವಣೆ ನಿರ್ವಹಣೆಗೆ ವೈದ್ಯಕೀಯ ಸಿಬ್ಬಂದಿ ನೇಮಕ.. ರೋಗಿಗಳ ಪರದಾಟ

Karnataka Election 2023: ವಿಧಾನಸಭಾ ಚುನಾವಣೆಯ ನಿರ್ವಹಣೆಗೆ ಆಯೋಗ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಿಕೊಂಡಿದೆ. ಹೀಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಾಗಿ ರೋಗಿಗಳು ಪರದಾಡುವಂತೆ ಆಗಿದೆ. ಸರಿಯಾದ ಸಮಯಕ್ಕೆ ಚಿಕತ್ಸೆ ಸಿಗದೆ ರೋಗಿಗಳು ಹೈರಾಣಗಿದ್ದಾರೆ.   

Written by - Zee Kannada News Desk | Last Updated : Apr 26, 2023, 05:59 PM IST
  • ಕರ್ನಾಟಕ ವಿಧಾನಸಭೆ ಚುನಾವಣೆ 2023
  • ಚುನಾವಣೆ ನಿರ್ವಹಣೆಗೆ ವೈದ್ಯಕೀಯ ಸಿಬ್ಬಂದಿ ನೇಮಕ
  • ಸರಿಯಾದ ಸಮಯಕ್ಕೆ ಚಿಕತ್ಸೆ ಸಿಗದೆ ರೋಗಿಗಳ ಪರದಾಟ
Karnataka Election 2023: ಚುನಾವಣೆ ನಿರ್ವಹಣೆಗೆ ವೈದ್ಯಕೀಯ ಸಿಬ್ಬಂದಿ ನೇಮಕ.. ರೋಗಿಗಳ ಪರದಾಟ  title=

ಬೆಂಗಳೂರು: ಜಿಲ್ಲಾ ಚುನಾವಣಾಧಿಕಾರಿಗಳು ಬೆಂಗಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ಸರ್ಕಾರಿ ಆಸ್ಪತ್ರೆಗಳ ವೈದ್ಯಕೀಯ ಹಾಗೂ ಅರೆವೈದ್ಯಕೀಯ ಸಿಬ್ಬಂದಿಯನ್ನ ಚುನಾವಾಣಾ ಕೆಲಸಕ್ಕೆ ನಿಯೋಗಿಸಿ ಆದೇಶಿಸಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆಯಾಗಿದ್ದು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗದಂತೆ ಆಗಿದೆ. ಅಲ್ಲದೆ ಇಂದಿರಾನಗರದ ಸರ್ ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆ ಹಾಗೂ ಜಯನಗರದ ಆಸ್ಪತ್ರೆಗಳಲ್ಲಿ ಶೇಕಡಾ 90ರಷ್ಟು ಸಿಬ್ಬಂದಿ ಚುನಾವಣಾ ಕಾರ್ಯಕ್ಕೆ ನಿಯೋಜನೆ‌ ಮಾಡಲಾಗಿದೆ. 

ಜಯನಗರ ಆಸ್ಪತ್ರೆಯೊಂದರಲ್ಲಿಯೇ 75 ಸ್ಟಾಫ್ ನರ್ಸ್ ಗಳನ್ನು ನೇಮಕ‌ ಮಾಡಿಕೊಳ್ಳಲಾಗಿದೆ. ಹೀಗಾಗಿ ಚಿಕಿತ್ಸೆಗೆ ತೊಂದರೆಯಾಗುತ್ತೆ ಅಂತ ಆರೋಗ್ಯ ಇಲಾಖೆ ಆಯುಕ್ತರಿಗೆ ಹಾಗೂ ಚುನಾವಣಾಧಿಕಾರಿಗಳ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: "ರೈತರ ಹತ್ತಿರ ಕೊಡ್ತೀವಿ ಅನ್ನುವುದು ಅದಕ್ಕಿಂತ ಜಾಸ್ತಿ ಕಿತ್ತುಕೊಳ್ಳುವುದು ಡಬಲ್ ಎಂಜಿನ್ ಸರ್ಕಾರದ ಬಹುದೊಡ್ಢ ಸಾಧನೆ"

ಬೆಂಗಳೂರಿನ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಉಂಟಾಗಿದೆ. ಜೊತೆಗೆ ರೋಗಿಗಳು ಗಂಭೀರ ಸ್ಥಿತಿಯಲ್ಲಿ ಬಂದರೆ ಸಕಾಲದಲ್ಲಿ ಚಿಕಿತ್ಸೆ ಸಿಗದೆ ಸಂಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಹೊರರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ಸಿಗದೆ ರೋಗಿಗಳು ಗಂಟೆಗಟ್ಟಲೆ ಕಾಯುವಂತೆ ಆಗಿದೆ.

ಕಳೆದೊಂದು ವಾರದಿಂದ ಜ್ವರ ಸೇರಿ ಸಾಂಕ್ರಾಮಿಕ ರೋಗಗಳು ಅಧಿಕವಾಗಿವೆ.  ಇನ್ನೂ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡುವಂತೆ ಆರೋಗ್ಯ ಇಲಾಖೆ ಆಯುಕ್ತರು ಪತ್ರ‌ ಬರೆದಿದ್ದಾರೆ. ಮುಖ್ಯ ಚುನಾವಣಾ ಅಧಿಕಾರಿಗಳು ಹಾಗೂ ಜಿಲ್ಲಾ ಚುಣಾವಣಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಸದ್ಯ ವೈದ್ಯರನ್ನು ಮಾತ್ರ ಚುನಾವಣಾ ಕರ್ತವ್ಯದಿಂದ ಹೊರಗಿಟ್ಟರೂ ಇನ್ನುಳಿದ ಸಿಬ್ಬಂದಿಗೆ ವಿನಾಯಿತಿ ನೀಡಿಲ್ಲ. 

ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡರೆ ತರಬೇತಿ, ಚುನಾವಣಾ ದಿನ  ಮತ್ತು ಮತ ಎಣಿಕೆ ದಿನ ಸೇರಿ ನಾಲ್ಕು ದಿನದ ಕೆಲಸದಿಂದ ಸಿಬ್ಬಂದಿ ಹೊರಗುಳಿಯಬೇಕಾಗುತ್ತದೆ. ಬಡ ಹಾಗೂ ಮಧ್ಯಮ ವರ್ಗದವರೇ ಸರ್ಕಾರಿ ಆಸ್ಪತ್ರೆಗೆ ಬರ್ತಾರೆ. ಸಾಮಾನ್ಯ ದಿನದಲ್ಲೇ ಸಮಸ್ಯೆ ಇರುತ್ತೆ. ಹಾಗಾಗಿ ಪರಿಸ್ಥಿತಿ ಕಷ್ಟವಾದ್ರೆ ನಿಭಾಯಿಸುವುದು ಕಷ್ಟ ಅಂತಿದ್ದಾರೆ ವೈದ್ಯರು.

ಇದನ್ನೂ ಓದಿ: ರಾಹುಲ್, ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಬಂದಷ್ಟು ನಮಗೆ ಲಾಭ: ಸಿಎಂ ಬೊಮ್ಮಾಯಿ‌

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News