ಧಾರವಾಡ: ರೈತ ಮಕ್ಕಳಿಗೆ 2022-23 ನೇ ಸಾಲಿಗೆ,10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಗದಗದಲ್ಲಿ ತರಬೇತಿ ನೀಡಲಾಗುವುದು.
ಅಭ್ಯರ್ಥಿಗಳು ಅರ್ಜಿಗಳನ್ನು ಧಾರವಾಡ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು (ಜಿಲ್ಲಾ ಪಂಚಾಯತ) ಧಾರವಾಡ ಕಛೇರಿಯಲ್ಲಿ ನಿಗದಿತ ಶುಲ್ಕ ಹಾಗೂ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ : 'ಕೆಜಿಎಫ್-2' ಹಾಡಿಗೆ ಫ್ಯಾನ್ಸ್ ಫಿದಾ..! ಎಷ್ಟಾಯ್ತು ಗೊತ್ತಾ ವೀವ್ಸ್..?
ಅರ್ಜಿ ನಮೂನೆಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯವಲಯ) ಸ್ಟೇಷನ್ ರಸ್ತೆ, ಧಾರವಾಡ ಕಛೇರಿಯಲ್ಲಿ ಅಥವಾ ಇಲಾಖಾ ವೆಬ್‍ಸೈಟ್ https://horticulturedir.karnataka.gov.in ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳ ಸಲ್ಲಿಸಲು ಏಪ್ರೀಲ್ 16 ರ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ದೂ.ಸಂ. 0836-2957801 ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.