ಮುಂಜಾಗ್ರತೆ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ರಾಜ್ಯಾದ್ಯಂತ ತಡೆಹಿಡಿಯಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Dinesh Gundurao: ರಿಂಗರ್ ಲ್ಯಾಕ್ಟೇಟ್ ಗ್ಲುಕೋಸ್ ಅನ್ನು ಈ ಹಿಂದಿನಿಂದಲು ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್‌ಗಳಲ್ಲಿ‌ ಐವಿ ದ್ರಾವಣ ಪೂರೈಕೆಯಾಗಿತ್ತು.

Written by - Prashobh Devanahalli | Last Updated : Nov 30, 2024, 03:59 PM IST
    • ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ
    • ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ
    • ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಮುಂಜಾಗ್ರತೆ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ರಾಜ್ಯಾದ್ಯಂತ ತಡೆಹಿಡಿಯಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ title=
Dinesh Gundurao

Bengaluru: ಮುಂಜಾಗ್ರತೆ ಕ್ರಮವಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವುಗಳ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಚಿವರು, ಐವಿ ದ್ರಾವಣ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಡಿವೋರ್ಸ್‌ ವದಂತಿ ಮಧ್ಯೆ ಐಶ್ವರ್ಯ ರೈ ಮದುವೆ ಫೋಟೋ ವೈರಲ್!‌ ಸ್ವರ್ಗವೇ ಧರೆಗಿಳಿದಂತಿದೆ ವೈಭವ

ರಿಂಗರ್ ಲ್ಯಾಕ್ಟೇಟ್ ಗ್ಲುಕೋಸ್ ಅನ್ನು ಈ ಹಿಂದಿನಿಂದಲು ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಾ ಬರಲಾಗುತ್ತಿದೆ. ಈ ಬಾರಿಯೂ ಔಷಧ ಸರಬರಾಜು ನಿಗಮಕ್ಕೆ 192 ಬ್ಯಾಚ್‌ಗಳಲ್ಲಿ‌ ಐವಿ ದ್ರಾವಣ ಪೂರೈಕೆಯಾಗಿತ್ತು. ಇದರ ಬಳಕೆ ಸಂದರ್ಭದಲ್ಲಿ ಎರಡು ಬ್ಯಾಚ್‌ಗಳ ಬಗ್ಗೆ ಕೆಲವು ಅನುಮಾನಗಳು ವ್ಯಕ್ತವಾದಾಗ ಮುಂಜಾಗ್ರತೆ ದೃಷ್ಟಿಯಿಂದ  ಸಂಪೂರ್ಣವಾಗಿ ಎಲ್ಲ 192 ಬ್ಯಾಚ್‌ಗಳ ದ್ರಾವಣವನ್ನ ಆಸ್ಪತ್ರೆಗಳಲ್ಲಿ ಬಳಸದಂತೆ ತಡೆಹಿಡಿಯಲಾಗಿತ್ತು. ಆ ಬಳಿಕ ಕಂಪನಿಯವರು ಹೈ ಕೋರ್ಟ್ ನಿಂದ ಆದೇಶ ಪಡೆದ ಹಿನ್ನೆಲೆಯಲ್ಲಿ ಸೆಂಟ್ರಲ್ ಡ್ರಗ್ ಲ್ಯಾಬರೋಟರಿಯಲ್ಲಿ ಟೆಸ್ಟಿಂಗ್ ನಡೆದಾಗ ದ್ರಾವಣ ಬಳಸಬಹುದು ಎಂಬ ವರದಿ ಬಂತು.  

ಸಿ.ಡಿ.ಎಲ್ ನವರ ವರದಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಜ್ಞರ ತಾಂತ್ರಿಕ ಸಮಿತಿ ರಚಿಸಿ ಟೆಸ್ಟಿಂಗ್ ನಡೆಸಿ ಸ್ಟ್ಯಾಂಡರ್ಡ್ ಕ್ವಾಲಿಟಿಯ ಕೆಲವು ಬ್ಯಾಚ್ ಗಳ ದ್ರಾವಣವನ್ನ ಬಳಸಲು ಅವಕಾಶ ಮಾಡಿಕೊಡಲಾಗಿತ್ತು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ದ್ರಾವಣದ ಬಳಕೆಯಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಅನುಮಾನಗಳು ವ್ಯಕ್ತವಾಗಿವೆ.‌

ಇದನ್ನೂ ಓದಿ: ತುಳಸಿ ಪಕ್ಕದಲ್ಲಿ ಈ ವಸ್ತುಗಳನ್ನು ಎಂದಿಗೂ ಇಡಬೇಡಿ ! ಹೊಕ್ಕಿ ಬಿಡುವುದು ದರಿದ್ರ ! ಕುಬೇರನ ಖಜಾನೆ ಕೂಡಾ ಬರಿದಾಗುವುದು

ಬಳ್ಳಾರಿ ಆಸ್ಪತ್ರೆಗೆ ಪೂರೈಕೆಯಾದ ಬ್ಯಾಚ್ ಗಳನ್ನ ಅನರೋಬಿಕ್ ಟೆಸ್ಟ್ ಗೆ ಕಳಿಸಿದ್ದೇವೆ. ಬಾಣಂತಿಯರ ಸಾವಿಗೆ  ಐವಿ ದ್ರಾವಣವೂ ಒಂದು ಕಾರಣವಾಗಿರಬಹುದಾ ಅಥವಾ  ಇಲ್ಲಾವಾ ಎಂಬುದು ಅನರೋಬಿಕ್ ಟೆಸ್ಟ್ ನಲ್ಲಿ ಸ್ಪಷ್ಟತೆ ಸಿಗಲಿದೆ.‌ ವಾರದಲ್ಲಿ ಈ ಟೆಸ್ಟಿಂಗ್ ವರದಿ ಬರಲಿದೆ. ಆ ಬಳಿಕ ಐವಿ ದ್ರಾವಣ ಬಳಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಅಲ್ಲಿಯ ವರೆಗೆ ಮುಂಜಾಗ್ರತೆ ಕ್ರಮವಾಗಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಕೆಯನ್ನ ರಾಜ್ಯಾದ್ಯಂತ ತಡೆಹಿಡಿಯಲಾಗಿದೆ. ನಮಗೆ ಪ್ರತಿಯೊಂದು ಜೀವವು ಮುಖ್ಯ. ಈ ರೀತಿಯ ಅನುಮಾನಗಳು ವ್ಯಕ್ತವಾದಾಗ ಮುನ್ನೆಚ್ಚೆರಿಕೆ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಐವಿ ರಿಂಗರ್ ಲ್ಯಾಕ್ಟೇಟ್ ಬಳಸದಂತೆ ಎಲ್ಲ‌ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News