/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬಳ್ಳಾರಿ: ಕಾರ್ಮಿಕ ಇಲಾಖೆಯಿಂದ ಕುರುಗೋಡು ಪಟ್ಟಣದಲ್ಲಿ ವಿವಿಧೆಡೆ ದಾಳಿ ನಡೆಸಿ ಸೋಮವಾರ 4 ಬಾಲಕಾರ್ಮಿಕರು ಹಾಗೂ 2 ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ತಿಳಿಸಿದ್ದಾರೆ.

ಪಟ್ಟಣದ ಬಾದನಹಟ್ಟಿ ರಸ್ತೆ, ತಾಲ್ಲೂಕು ಕಚೇರಿ ಮುಂಭಾಗ, ತೇರು ಬೀದಿ ಹಾಗೂ ಕಂಪ್ಲಿ ರಸ್ತೆ ಮಂತಾದ ಸ್ಥಳಗಳಲ್ಲಿ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ ಇತ್ಯಾದಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ 04 ಬಾಲಕಾರ್ಮಿಕರು ಮತ್ತು 2 ಕಿಶೋರ ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ರಕ್ಷಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ ಫಿಕ್ಸ್ :ಈ ಶುಭದಿನ ನೆರವೇರಲಿದೆ ‘ಪಟ್ಟಾಭಿಷೇಕ’

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ,  ಪೋಲಿಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ ಮತ್ತು ಬಿಡಿಡಿಎಸ್ ಚೈಲ್ಡ್‍ಲೈನ್ ಸಹಯೋಗದೊಂದಿಗೆ ನಗರದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ರಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಗಿದೆ.ದಾಳಿಯಲ್ಲಿ ರಕ್ಷಿಸಲಾದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರಲು ಕ್ರಮವಹಿಸಲಾಗಿದೆ ಹಾಗೂ ಮಕ್ಕಳ ವಯಸ್ಸಿನ ದಾಖಲೆಗಳನ್ನು ಪಡೆದ ನಂತರ ಮಾಲೀಕರ ವಿರುದ್ಧ ಬಾಲಕಾರ್ಮಿಕ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: "ನಿಮ್ಮ ಮಾಮನ್ನ ನಂಬಬೇಡಿ, ಈಗ ಚಾಚಾನ್ನ ನಂಬಿ"

ಈ ಟಾಸ್ಕ್‍ಪೋರ್ಸ್ ಸಮಿತಿಯಲ್ಲಿ ತಹಶೀಲ್ದಾರ ರಾಘವೇಂದ್ರ ರಾವ್, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್, ಕಾರ್ಮಿಕ ನಿರೀಕ್ಷಕ ರವಿದಾಸ್, ಬೆಂಗಳೂರು ಬಚಪನ್ ಬಚವೋ ಅಂದೋಲನದ ರಾಜ್ಯ ಸಂಯೋಜಕ ವರ್ಗಿಸ್, ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಯುವರಾಜ್, ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಲೋಕರಾಜ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಭೋಜರಾಜ್ ಸೇರಿದಂತೆ ಚೈಲ್ಡ್‍ಲೈನ್ ಸಿಬ್ಬಂದಿಗಳಾದ ಸುಲೋಚನ ಮತ್ತು ಚಂದ್ರಕಲಾ ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Section: 
English Title: 
Attacks at various places in Bellary; 4 protection of child labour, 2 child labour
News Source: 
Home Title: 

ಬಳ್ಳಾರಿಯಲ್ಲಿ ವಿವಿಧೆಡೆ ದಾಳಿ; 4 ಬಾಲಕಾರ್ಮಿಕರು, 2 ಕಿಶೋರ ಕಾರ್ಮಿಕರ ರಕ್ಷಣೆ

ಬಳ್ಳಾರಿಯಲ್ಲಿ ವಿವಿಧೆಡೆ ದಾಳಿ; 4 ಬಾಲಕಾರ್ಮಿಕರು, 2 ಕಿಶೋರ ಕಾರ್ಮಿಕರ ರಕ್ಷಣೆ
Yes
Is Blog?: 
No
Tags: 
Facebook Instant Article: 
Yes
Highlights: 

ಆಕಸ್ಮಿಕ ದಾಳಿ ನಡೆಸಿ 04 ಬಾಲಕಾರ್ಮಿಕರು ಮತ್ತು 2 ಕಿಶೋರ ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ರಕ್ಷಿಸಲಾಗಿದೆ.

ಮಕ್ಕಳ ವಯಸ್ಸಿನ ದಾಖಲೆಗಳನ್ನು ಪಡೆದ ನಂತರ ಮಾಲೀಕರ ವಿರುದ್ಧ ಬಾಲಕಾರ್ಮಿಕ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

Mobile Title: 
ಬಳ್ಳಾರಿಯಲ್ಲಿ ವಿವಿಧೆಡೆ ದಾಳಿ; 4 ಬಾಲಕಾರ್ಮಿಕರು, 2 ಕಿಶೋರ ಕಾರ್ಮಿಕರ ರಕ್ಷಣೆ
Manjunath N
Publish Later: 
Yes
Publish At: 
Tuesday, August 22, 2023 - 17:15
Created By: 
Manjunath Naragund
Updated By: 
Manjunath Naragund
Request Count: 
1
Is Breaking News: 
No
Word Count: 
227