Attibele Fire Accident: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿ ತನಿಖೆಗೆ ಸಿಎಂ ಆದೇಶ

Attibele Fire Accident: ಈ ದುರಂತದ ಪ್ರಕರಣವನ್ನು ಸಿಐಡಿಗೆ ತನಿಖೆಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಪರಿಹಾ ನೀಡಲಾಗುವುದು. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.   

Written by - Prashobh Devanahalli | Edited by - Puttaraj K Alur | Last Updated : Oct 8, 2023, 03:52 PM IST
  • ಅತ್ತಿಬೆಲೆ ಪಟಾಕಿ ದುರಂತ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ
  • ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿಕೆಶಿ
  • ಘಟನೆಯ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ ಸಿಎಂ
Attibele Fire Accident: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಿಐಡಿ ತನಿಖೆಗೆ ಸಿಎಂ ಆದೇಶ title=
ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿರುವ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಇದೀಗ ಈ ದುರಂತದ ಪ್ರಕರಣವನ್ನು ಸಿಐಡಿಗೆ ತನಿಖೆಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಪರಿಹಾ ನೀಡಲಾಗುವುದು. ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.   

ಅತ್ತಿಬೆಲೆಯಲ್ಲಿ ನಡೆದಿರುವ ಅಗ್ನಿದುರಂತದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಪಟಾಕಿ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಯಾವುದೇ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ. ಶನಿವಾರ(ಅ.7) ಮಧ್ಯಾಹ್ನ  3.15 ರಿಂದ 3.30ರ ವೇಳೆ ಬೆಂಕಿ ಅನಾಹುತ ನಡೆದಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ರಾಮುಸ್ವಾಮಿರೆಡ್ಡಿ ಎಂಬುವರು ಪರವಾನಗಿ ಪಡೆದು ಪಟಾಕಿ ಮಾರಾಟದ ವ್ಯವಹಾರ ಮಾಡುತ್ತಿದ್ದರು. ನಿನ್ನೆ 3 ಗಂಟೆ  ವೇಳೆ ತಮಿಳುನಾಡಿನಿಂದ ಟ್ರಕ್‍ಗಳಲ್ಲಿ ಪಟಾಕಿಗಳು ಬಂದಿದ್ದು, ಬೆಂಕಿ ಹೇಗೆ ಪಟಾಕಿಗಳ ಮೇಲೆ ಬಿತ್ತು ಎನ್ನುವ ನಿಖರ ಕಾರಣ ತಿಳಿದುಬಂದಿಲ್ಲ.  ಅಧಿಕಾರಿಗಳು ಇಲ್ಲಿ ಪರಿಶೀಲಿಸಿದ ಮೇಲೆ ಸ್ಫೋಟಕಗಳ ಮಾರಾಟ ಮಾಡುವ ಗೋದಾಮಿನಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲವೆಂದು ತಿಳಿದುಬಂದಿದೆ’ ಎಂದರು.

ಇದನ್ನೂ ಓದಿ: ಅಂಗವಿಕಲರಿಗೆ ನಮ್ಮ ಯಾತ್ರಿ ಆಧಾರಿತ ಆಟೋ ಸೇವೆ

ಪರವಾನಾಗಿಯನ್ನು ಇದೇ ಸೆಪ್ಟೆಂಬರ್ ತಿಂಗಳ 13ರಂದು ನವೀಕರಿಸಲಾಗಿದೆ. ಇದು 2028ರ ಅ.10 ರವರೆಗೆ ಜಾರಿಯಲ್ಲಿದೆ. ಮತ್ತೊಂದು ಪರವಾನಗಿ 2021ರ ಜನವರಿ 18ರಿಂದ 2026ರರ ಜನವರಿ 28ರವರೆಗೆ ಜಾರಿಯಲ್ಲಿದೆ. ಜಯಮ್ಮ, ಕೋಂ ದಿ.ಸಿದ್ದಾರೆಡ್ಡಿ, ಅನಿಲ್ ರೆಡ್ಡಿ ಬಿನ್ ಸಿದ್ದಾರೆಡ್ಡಿ ಎಂಬುವವರು ಈ ಸ್ಥಳದ ಮಾಲೀಕರು ಎಂದು ವಿವರಿಸಿದರು.

ನಿರ್ಲಕ್ಷ್ಯ ಎದ್ದು ಕಾಣುತ್ತಿದೆ..!

ಗೋದಾಮಿನ ಸ್ಥಳ ಬಹಳ ಕಿರಿದಾಗಿದ್ದು, ಇದರಲ್ಲಿ 14 ಜನರು ಮೃತಪಟ್ಟಿದ್ದಾರೆ. ಎಲ್ಲರೂ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿಯವರು. ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳು. ರಜಾ ಸಮಯದಲ್ಲಿ ಓದಿಗಾಗಿ ಹಣ ಸಂಪಾದನೆಗಾಗಿ ಬಂದವರು. ಒಬ್ಬ ಮ್ಯಾನೇಜರ್‍ನನ್ನು ಹೊರತುಪಡಿಸಿ ಯಾರೂ ಖಾಯಂ ನೌಕರರಿಲ್ಲ. ಸ್ಫೋಟಕಗಳಿಗೆ ಅಗತ್ಯವಾದ ಯಾವುದೇ ಸುರಕ್ಷಾ ಕ್ರಮಗಳನ್ನು ಕೈಗೊಂಡಿಲ್ಲ. ಗೋದಾಮು ಅಧಿಕೃತವೋ ಅಲ್ಲವೋ ಎಂಬುದನ್ನು ಪರಿಶೀಲಿಸಬೇಕು. ಹಿಂಭಾಗದಲ್ಲಿ 200 ಅಡಿಗಳವರೆಗೂ ಗೋದಾಮು ಇದೆ. ಎಲ್ಲೂ ಕೂಡ  ಅಗ್ನಿಶಾಮಕಗಳನ್ನು ಅಳವಡಿಸಿಲ್ಲ. ಒಟ್ಟಾರೆ ಮೇಲ್ನೋಟಕ್ಕೆ ಪರವಾನಗಿ ಹೊಂದಿದವರ ನಿರ್ಲಕ್ಷ್ಯ ಎದ್ದುಕಾಣುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರಯಾಣಿಕರಿಗೆ ಸಿಗಲಿದೆ ʻಪಲ್ಲಕ್ಕಿʼಯ ಮೆರಗು

ದೊಡ್ಡ ದುರಂತ

ಘಟನೆಯ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. 14 ಜನರು ಮೃತಪಟ್ಟಿರುವುದು ದೊಡ್ಡ ದುರಂತ. ಮೃತರ ಕುಟುಂಬಕ್ಕೆ  ಸಾಂತ್ವನ ಹೇಳಿ, ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರೆಲ್ಲರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದರು.

ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News