ಮತದಾನ ವಿಚಾರ : ಟಿಡಿಪಿ ವಿರುದ್ಧ ಯಡಿಯೂರಪ್ಪ ಕಿಡಿ

ತೆಲುಗು ಭಾಷಿಕರಿಗೆ ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳಲು ಅವರ್ಯಾರು? ಎಂದು ಯಡಿಯೂರಪ್ಪ ಖಾರವಾಗಿ ಪ್ರಶ್ನಿಸಿದ್ದಾರೆ. 

Last Updated : Apr 10, 2018, 12:27 PM IST
ಮತದಾನ ವಿಚಾರ : ಟಿಡಿಪಿ ವಿರುದ್ಧ ಯಡಿಯೂರಪ್ಪ ಕಿಡಿ  title=

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ ಎಂಬ ಟಿಡಿಪಿ ಕರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. 

ಆಂಧ್ರಪ್ರದೇಶದಿಂದ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದ ಜನ ಬಹಳಷ್ಟು ವರ್ಷಗಳಿಂದ ಇಲ್ಲೇ ವಾಸಿಸುತ್ತಿದ್ದಾರೆ. ಅವರಿಗೆ ಯಾವ ಪಕ್ಷಕ್ಕೆ ಮತ ಹಾಕಬೇಕು, ಬೇಡ ಎಂಬ ಅರಿವಿದೆ. ಅಷ್ಟಕ್ಕೂ ನಮ್ಮ ರಾಜ್ಯದ ಜನತೆಗೆ ಬಿಜೆಪಿಗೆ ಮತ ಹಾಕಬೇಡಿ ಎಂದು ಹೇಳಲು ಅವರ್ಯಾರು? ಎಂದು ಯಡಿಯೂರಪ್ಪ ಖಾರವಾಗಿ ಪ್ರಶ್ನಿಸಿದ್ದಾರೆ. 

ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಪ್ರಧಾನಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿ, ಮಾತಿಗೆ ತಪ್ಪಿದ್ದಾರೆ. ಮೋದಿ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಉತ್ತರ ಹಾಗೂ ದಕ್ಷಿಣ ಭಾರತ ನಡುವೆ ಕದಂಕ ಏರ್ಪಡುವಂತೆ ಮಾಡಿದ್ದಾರೆ. ಯಾಗಾಗಿ ಕರ್ನಾಟಕದ ತೆಲುಗು ಭಾಷಿಕರು ಯಾವ ಪಕ್ಷಕ್ಕೆ ಬೇಕಾದರೂ ಮತ ಹಾಕಿ, ಆದರೆ, ಬಿಜೆಪಿಗೆ ಮತ ಹಾಕಬೇಡಿ ಎಂದು ಅವರು ಹೇಳಿದ್ದರು.

Trending News