ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರುವ ಬಿ.ಎಸ್. ಯಡಿಯೂರಪ್ಪ ಬದುಕಿನ ಹೆಜ್ಜೆಗಳು!

ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಬಿ.ಎಸ್. ಯಡಿಯೂರಪ್ಪ.  

Last Updated : Jul 26, 2019, 01:25 PM IST
ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರುವ ಬಿ.ಎಸ್. ಯಡಿಯೂರಪ್ಪ ಬದುಕಿನ ಹೆಜ್ಜೆಗಳು! title=
File Image

ಬೆಂಗಳೂರು: ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇಂದು ಸಂಜೆ  6 ರಿಂದ 6:15 ರೊಳಗೆ ಬಿಎಸ್‌ವೈ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ಫೆಬ್ರವರಿ 27, 1943 ರಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ಜನಿಸಿದ ಬಿ.ಎಸ್.ಯಡಿಯೂರಪ್ಪ, ತಮ್ಮ ವಿದ್ಯಾಭ್ಯಾಸದ ಬಳಿಕ 1965ರಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ನೇಮಕಗೊಂಡರು. ಆನಂತರದಲ್ಲಿ ಕೆಲಸವನ್ನು ತೊರೆದು ಶಿಕಾರಿಪುರದಲ್ಲಿರುವ ಅವರ ಮಾವನ ರೈಸ್ ಮಿಲ್ನಲ್ಲಿ ಕೆಲಸಕ್ಕೆ ಸೇರಿದರು.  

70ರ ದಶಕದಲ್ಲಿ ರಾಜಕೀಯ ಪ್ರವೇಸಹಿಸಿದ ಬಿ.ಎಸ್. ಯಡಿಯೂರಪ್ಪ ಶಾಸಕರಾಗಿ ಮತ್ತು ಸಂಸದರಾಗಿ ಹಲವು ಬಾರಿ ಆಯ್ಕೆಯಾಗಿದ್ದಾರೆ. ಈ ಮೊದಲು ಮೂರು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿ.ಎಸ್. ಯಡಿಯೂರಪ್ಪ ಇಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 

ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರುವ ಬಿ.ಎಸ್. ಯಡಿಯೂರಪ್ಪ ಬದುಕಿನ ಹೆಜ್ಜೆಗಳು!

* 1943: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಜನನ.
* 1965: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಆಗಮನ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್​) ಪ್ರವೇಶ.
* 1967: ಮೈತ್ರಾದೇವಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಪದಾರ್ಪಣೆ.


* 1970: ಶಿಕಾರಿಪುರ ತಾಲೂಕಿನ ಆರ್‌ಎಸ್‌ಎಸ್​ ಕಾರ್ಯವಾಹಕರಾಗಿ ನೇಮಕ
* 1972: ಶಿಕಾರಿಪುರ ತಾಲೂಕಿನ ಜನಸಂಘದ ಅಧ್ಯಕ್ಷರಾಗಿ ನೇಮಕ.
* 1975: ಶಿಕಾರಿಪುರ ಪುರಸಭಾ ಸದಸ್ಯರಾಗಿ ರಾಜಕೀಯ ಪ್ರವೇಶ.
* 1975: ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ನಡೆಸಿ 45 ದಿನಗಳ ಜೈಲುವಾಸ.
* 1977: ಶಿಕಾರಿಪುರ ಪುರಸಭಾ ಅಧ್ಯಕ್ಷರಾಗಿ ಆಯ್ಕೆ.
* 1980: ಬಿಜೆಪಿ ತಾಲೂಕು ಘಟಕದ ಅಧ್ಯಕ್ಷರಾಗಿ ನೇಮಕ.
* 1981: ಜೀತದಾಳು ವಿಮುಕ್ತಿ ಹೋರಾಟದ ನಾಯಕತ್ವ ವಹಿಸಿ ಪಾದಯಾತ್ರೆ.
* 1983: ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆಗೆ ಪ್ರವೇಶ.
* 1985: ಶಿವಮೊಗ್ಗ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆ.
* 1988: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ.
* 1992: ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕ.
* 1994: ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆ.
* 1998: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಿಯೋಜನೆ.
* 2000: ವಿಧಾನ ಪರಿಷತ್(ಮೇಲ್ಮನೆ)ಗೆ ಆಯ್ಕೆ
* 2003: ಬಗರ್ ಹುಕುಂ ರೈತರ ಜೀನು ಸಕ್ರಮಕ್ಕೆ ಆಗ್ರಹಿಸಿ ಶಿಕಾರಿಪುರದಿಂದ ಬೆಂಗಳೂರಿಗೆ ಪಾದಯಾತ್ರೆ.
* 2004: 5ನೇ ಬಾರಿಗೆ ವಿಧಾನಸಭೆ ಪ್ರವೇಶ, ಪ್ರತಿಪಕ್ಷ ನಾಯಕನಾಗಿ ಆಯ್ಕೆ
* 2006: ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ, ಹಣಕಾಸು ಮತ್ತು ಅಬಕಾರಿ ಖಾತೆಗಳ ನಿರ್ವಹಣೆ.
* 2007: ನವೆಂಬರ್ 12, 2007ರಲ್ಲಿ  ಬಿ.ಎಸ್.ಯಡಿಯೂರಪ್ಪ ಕೇವಲ 7 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು.
* 2008:  ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿಗೆ. ಮೇ 30ರ ಶುಕ್ರವಾರ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.
* 2011: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ.
* 2014: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ.
* 2016: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಪುನರ್ ಆಯ್ಕೆ.
* 2018: ಮೇ 17 ರಂದು ಕರ್ನಾಟಕದ 29 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ.
* 2018: ಮೇ 19 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ.
* 2019: ಜುಲೈ 26ರಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ.

Trending News