Bangalore : ನೀರು ಸಮಸ್ಯೆ ಪರಿಹಾರಕ್ಕೆ ವಾರ್ಡ್‌ಗಳಿಗೆ ಪ್ರತ್ಯೇಕ ನೋಡೆಲ್ ಅಧಿಕಾರಿ ನೇಮಕ

Bangalore :  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಗೆ ಸರ್ಕಾರ 35 ವಾರ್ಡ್‌ಗಳಿಗೆ ಪ್ರತ್ಯೇಕ ಉಸ್ತುವಾರಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ.

Written by - Zee Kannada News Desk | Last Updated : Mar 4, 2024, 11:35 PM IST
  • ಇದರ ಪರಿಹಾರಾರ್ಥವಾಗಿ ಸರ್ಕಾರ 35 ವಾರ್ಡ್‌ಗಳಿಗೆ ಪ್ರತ್ಯೇಕ ಉಸ್ತುವಾರಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ.
  • ರಾಜ್ಯ ಸರ್ಕಾರದ ಸ್ಥಳೀಯ ನಾಗರಿಕ ಸಂಸ್ಥೆಗಳು ಸಮನ್ವಯತೆಯಿಂದ ಪರಿಹಾರ ಕ್ರಮ ಕೈಗೊಳ್ಳುತ್ತಿವೆ.
  • ಬಿಬಿಎಂಪಿ ಹೊರವಲಯ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ.
Bangalore : ನೀರು ಸಮಸ್ಯೆ ಪರಿಹಾರಕ್ಕೆ ವಾರ್ಡ್‌ಗಳಿಗೆ ಪ್ರತ್ಯೇಕ ನೋಡೆಲ್ ಅಧಿಕಾರಿ ನೇಮಕ title=

Appointment of separate nodal officer :  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಗೆ 2007ರಲ್ಲಿ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದೆ. ಬೆಂಗಳೂರು ನಗರ ಭಾಗದಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಇದರ ಪರಿಹಾರಾರ್ಥವಾಗಿ ಸರ್ಕಾರ 35 ವಾರ್ಡ್‌ಗಳಿಗೆ ಪ್ರತ್ಯೇಕ ಉಸ್ತುವಾರಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ.

ಶೀಘ್ರವೇ ಕುಡಿಯುವ ನೀರಿನ ಸಮಸ್ಯೆ ಆಲಿಸುವ ಸಲುವಾಗಿ ಪ್ರತ್ಯೇಕವಾಗಿ ಮೇಲುಸ್ತುವಾರಿಗಾಗಿ ಧರಣೇಂದ್ರ ಕುಮಾರ್, ಕಾರ್ಯಪಾಲಕ ಅಭಿಯಂತರರು(ದಾಸರಹಳ್ಳಿ), ಬಿಬಿಎಂಪಿ ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.ಬಿಬಿಎಂಪಿ ಹೊರವಲಯ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ.

ಇದನ್ನು ಓದಿ :ಸ್ಮೃತಿ ಮಂಧನಾ ಬಿರುಸಿನ ಹೊಡೆತಕ್ಕೆ ತತ್ತರಿಸಿದ ವಾರಿಯರ್ಸ್ :  RCBಯಿಂದ ಯುಪಿಗೆ ಬಿಗ್ ಟಾರ್ಗೆಟ್ 

ಬಿಬಿಎಂಪಿ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ಒದಗಿಸಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದು ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ರಾಜ್ಯ ಸರ್ಕಾರದ ಸ್ಥಳೀಯ ನಾಗರಿಕ ಸಂಸ್ಥೆಗಳು ಸಮನ್ವಯತೆಯಿಂದ ಪರಿಹಾರ ಕ್ರಮ ಕೈಗೊಳ್ಳುತ್ತಿವೆ. ಇಂದು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಬೆಂಗಳೂರು ನೀರು ಸಮಸ್ಯೆ ಪರಿಹಾರಕ್ಕಾಗಿ 500ಕೋಟಿಗೂ ಅಧಿಕ ಹಣ ನೀಡಲಾಗಿದೆ. ಬೋರ್ವೆಲ್, ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅದರ ಭಾಗವಾಗಿಯೇ ಉಸ್ತುವಾರಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಇದನ್ನು ಓದಿ :ಬೆಂಗಳೂರು ಮೂಲದ Gobuds Sports Earbuds ಬಿಡುಗಡೆ : ಈ ಕುರಿತು ಮಾಹಿತಿ ಇಲ್ಲಿದೆ

ಇನ್ನೂ ಬಿಬಿಎಂಪಿ ವ್ಯಾಪ್ತಿಯ ಇನ್ನುಳಿದ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯವಾಣಿ ಸಂಖ್ಯೆಯಾದ 1916 ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ನೀಡುವಂತೆ ಕೋರಲಾಗಿದೆ ಎಂದರು. ಬೆಂಗಳೂರು ನಗರದ ಹೊರ ವಲಯಗಳಲ್ಲಿ ಬರುವ 35 ವಾರ್ಡ್‌ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ  ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಯು 35 ವಾರ್ಡ್‌ಗಳಿಗೂ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News