ಬೆಂಗಳೂರು : ಮೊನ್ನೆ ತಾನೆ ರಾಜಧಾನಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಕುಟುಂಬದ 13 ಜನ ಭೀಕರವಾಗಿ ಗಾಯಗೊಂಡಿದ್ದರು. ಈ ಘಟನೆ ಮಾಸುವ ಮೊದಲೇ ಇದೀಗ ಅಂಗಡಿಯೊಂದರಲ್ಲಿ ಸಿಲಿಂಡರ್ ರಿಫಿಲ್ಲಿಂಗ್ ಮಾಡುವಾಗ ಉಂಟಾದ ಸ್ಫೋಟದಿಂದ ಬಾಲಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಹೆಬ್ಬಾಳದ ಗುಡ್ಡದಹಳ್ಳಿಯ ಸಿಲಿಂಡರ್ ಅಂಗಡಿಯೊಂದರಲ್ಲಿ ನಡೆದಿದ್ದು ಘಟನೆಯಲ್ಲಿ 13 ವರ್ಷದ ಮಹೇಶ್ ಸಾವನ್ನಪ್ಪಿದ್ದಾನೆ. ಯಾದಗಿರಿಯ ರಾಮಸಮುದ್ರ ಮೂಲದ ಮಲ್ಲಪ್ಪ ಹಾಗೂ ಸರಸ್ಪತಿ ದಂಪತಿ ಎರಡನೇ ಮಗ ಮಹೇಶ್, ಚೋಳನಾಯನಕಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮೃತನ ದಂಪತಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡುತ್ತಿದ್ದರು. ದೇವರಾಜ್ ಎಂಬುವರಿಗೆ ಸೇರಿದ ಸಿಲಿಂಡರ್ ಅಂಗಡಿಯೊಂದರಲ್ಲಿ ಲಿಯಾಕತ್ ಎಂಬಾತ ಸಿಲಿಂಡರ್ ರಿಫಿಲ್ಲಿಂಗ್ ಮಾಡುವಾಗ ಉಂಟಾದ ಅನಿಲ ಸೋರಿಕೆಯಿಂದ ಸ್ಫೋಟಗೊಂಡಿದೆ.
ಇದನ್ನೂ ಓದಿ: H3N2 virus : ಕೋವಿಡ್ ಬಳಿಕ ಮತ್ತೊಂದು ವೈರಸ್ ಹಾವಳಿ : ದೇಶಾದ್ಯಂತ ಹೈಅಲರ್ಟ್!
ಅಂಗಡಿ ಬಳಿ ಆಟವಾಡುತ್ತಿದ್ದ ಮಹೇಶ್ ಗೆ ಸ್ಫೋಟದ ರಭಸಕ್ಕೆ ಬಾಲಕನ ದೇಹ ಛಿದ್ರಗೊಂಡಿದೆ.ಕೂಡಲೇ ಸ್ಥಳೀಯರು ನೆರವಿನಿಂದ ಪೋಷಕರು ಖಾಸಗಿ ಆಸ್ಪತ್ರೆಯಲ್ಲಿ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತದೇಹದ ಮುಂದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಸಂಬಂಧ ರಿಯಾಕತ್ ಎಸ್ಕೇಪ್ ಆಗಿದ್ದು ಆತನ ವಿರುದ್ಧ ಹೆಬ್ಬಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.