ʻಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕʼ : ಸಚಿವ ಸಂಪುಟ ಒಪ್ಪಿಗೆ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   

Written by - Prashobh Devanahalli | Last Updated : Jan 18, 2024, 09:13 PM IST
  • ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ
  • ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ʻಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕʼ : ಸಚಿವ ಸಂಪುಟ ಒಪ್ಪಿಗೆ   title=

ಬೆಂಗಳೂರು : ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಗೌರವಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಲಾಲ್ ಬಾಗ್ ನ ಗಾಜಿನ ಮನೆಯಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ 2024 ಉದ್ಘಾಟಿಸಿದ ನಂತರ ಮಾತನಾಡಿದರು. ಬಸವಣ್ಣನವರ  ಹೆಸರು ಚಿರಸ್ಥಾಯಿಯಾಗಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು. 

ಶಿವಮೊಗ್ಗದಲ್ಲಿರುವ ಜೈಲಿನ 46 ಎಕರೆ ಪ್ರದೇಶದಲ್ಲಿ ಉದ್ಯಾನವನಕ್ಕೆ ಅಲ್ಲಮಪ್ರಭು ಉದ್ಯಾನವನ ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ಅಲ್ಲಮಪ್ರಭು ಹಾಗೂ  ಅಕ್ಕಮಹಾದೇವಿ   ಶಿಕಾರಿಪುರದವರಾದ್ದರಿಂದ  ಅವರ ಹೆಸರನ್ನೂ  ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಈ  ತೀರ್ಮಾನ ಮಾಡಲಾಗಿದೆ ಎಂದರು.  

ತೋಟಗಾರಿಕೆ ಇಲಾಖೆಯವರು ಬೆಳೆಯುವ ಹೂ, ಹಣ್ಣುಗಳು,ಇಲಾಖೆಯಲ್ಲಿ ಆಗಿರುವ ಬೆಳವಣಿಗೆಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮ ಇದು.  ಎಂದ ಮುಖ್ಯಮಂತ್ರಿಗಳು ತೋಟಗಾರಿಕೆ ಇಲಾಖೆಗೆ ಧನ್ಯವಾದಗಳನ್ನು ಹೇಳಿದರು.

ಇದನ್ನೂ ಓದಿ: ಜೀವನದಲ್ಲಿ ಮರೆಯಲಾರದ ಕ್ಷಣ ಎನ್ನುತ್ತಿರೋ ಪ್ರಶಾಂತ್

ಗಣರಾಜ್ಯೋತ್ಸವದ ಅಂಗವಾಗಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಇಂದು ಉದ್ಘಾಟಿಸಲಾಗಿದೆ. ಬಸವಾದಿ ಶರಣರ ವಚನ ಸಾಹಿತ್ಯ ಆಧಾರಿತವಾದ ಫಲಪುಷ್ಪ ಪ್ರದರ್ಶನ ಈ ಬಾರಿಯ ವಿಶೇಷತೆ. ಹನ್ನರಡನೆಯ ಶತಮಾನದಲ್ಲಿ ಜಾತಿರಹಿತ ಹಾಗೂ ಮೂಡನಂಬಿಕೆ ಕಂದಾಚಾರಗಳಿಂದ ಮುಖ್ತವಾದ ಸಮ ಸಮಾಜ  ನಿರ್ಮಾಣ  ಮಾಡಲು ಹೋರಾಟ ನಡೆಸಲಾಗಿತ್ತು ಎಂದರು. 

ಈ ವಚನ ಚಳವಳಿಯ ಬಗ್ಗೆ ಜನರಿಗೆ ಪ್ರಚುರಪಡಿಸಲು ಉದ್ದೇಶದಿಂದ ಈ ಬಾರಿಯ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಹಲವಾರು ಬಗೆಯ ಫಲಪುಷ್ಪಗಳ ಮೂಲಕ ಬಸವಾದಿ ಶರಣರ ಸಂದೇಶಗಳನ್ನು ಪ್ರಚುರಪಡಿಸಲಾಗುತ್ತಿದೆ. ಇಂದಿನಿಂದ 28 ನೇ ಜನವರಿ ವರೆಗೆ ಪ್ರದರ್ಶನ ನಡೆಯಲಿದ್ದು, ತೋಟಗಾರಿಕೆ ಇಲಾಖೆ ಮಾಡಿಕೊಟ್ಟಿರುವ ಈ ಅವಕಾಶವನ್ನು ಬೆಂಗಳೂರಿನ ನಾಗರಿಕರು ಸದುಪಯೋಗ ಪಡಿಸಿಕೊಳ್ಳಬೇಕು. ತೋಟಗಾರಿಕಾ ಇಲಾಖೆಯವರಿಂದ ವಿವಿಧ ಫಲ ಪುಷ್ಪಗಳನ್ನು ಬೆಳೆಯಲಾಗುತ್ತದೆ ಎಂಬ ವಿಸ್ತೃತ ಮಾಹಿತಿಯನ್ನು ಜನರು ಪಡೆಯಬಹುದಾಗಿದೆ ಎಂದರು.

ಇದನ್ನೂ ಓದಿ: ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News