ಬೆಂಗಳೂರು : ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ. ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈ ಕಮಾಂಡ್ ಮೆಚ್ಚಿಸಲೊ ಎಂದು ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ.
1/5— Basavaraj S Bommai (@BSBommai) June 4, 2023
ಇದನ್ನೂ ಓದಿ: “ಹಸು ಏಕೆ ಕಡಿಯಬಾರದು..?” ಪಶುಸಂಗೋಪನಾ ಸಚಿವ ವೆಂಕಟೇಶ್ ಹೇಳಿಕೆಗೆ ಪ್ರಭು ಚೌಹಾಣ್ ಕೆಂಡಾಮಂಡಲ
ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960 ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾನೂನು ಬಾಹಿರ ಕಾರ್ಖಾನೆಗಳು ತಲೆ ಎತ್ತಲಿವೆ.
ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ ಎಂದು ತಿಳಿಸಿದ್ದಾರೆ. ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ಸಿಎಂ ಸಚಿವರಿಗೆ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ