ಭ್ರಷ್ಟಾಚಾರದ ಬ್ರಹ್ಮ ಯಾರು ಅಂತ ಎಲ್ಲರಿಗೂ ಗೊತ್ತಾಗಿದೆ : ಬಸವರಾಜ ಬೊಮ್ಮಾಯಿ

ನನ್ನ ವಿರುದ್ದ ಮಾಡಿರುವ ಆರೋಪದಲ್ಲಿ ನಾ‌ನು ಎಪಿಎಂಸಿ ಸಚಿವನಾಗಿರಲಿಲ್ಲ ಆಗ ಗೃಹ ಸಚಿವನಾಗಿದ್ದೆ, ಎಪಿಎಂಸಿ ಪ್ರಕರಣದಲ್ಲಿ ತನಿಖೆ ನಡೆಸಿ ಬ್ಯಾಂಕಿನವರಿಂದ 48 ಕೋಟಿ ರೂ. ಜೊತೆಗೆ ಬಡ್ಡಿ ಸಮೇತ 52 ಕೋಟಿ ರೂ‌ ವಸೂಲಿ ಮಾಡಲಾಗಿತ್ತು. ಬೋವಿ ನಿಗಮದಲ್ಲಿ ಅವ್ಯವಹಾರ ಆಗಿದ್ದಾಗ ಅದನ್ನು ಸಿಐಡಿ ತನಿಖೆಗೆ ನಾವೇ ವಹಿಸಿದ್ದೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು..

Written by - Prashobh Devanahalli | Edited by - Krishna N K | Last Updated : Jul 21, 2024, 02:12 PM IST
    • ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರ್ಕಾರ ಸಿಲುಕಿಕೊಂಡಿದೆ
    • ಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ನೀಡಬೇಕಾಗುತ್ತದೆ
    • ಯಾವುದೇ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ದರಿದ್ದೇವೆ.
ಭ್ರಷ್ಟಾಚಾರದ ಬ್ರಹ್ಮ ಯಾರು ಅಂತ ಎಲ್ಲರಿಗೂ ಗೊತ್ತಾಗಿದೆ : ಬಸವರಾಜ ಬೊಮ್ಮಾಯಿ title=

ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರ್ಕಾರ ಸಿಲುಕಿಕೊಂಡಿದ್ದು, ಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ನೀಡಬೇಕಾಗುತ್ತದೆ ಎಂದು ರಕ್ಷಣೆಗೆ ಬಿಜೆಪಿ ವಿರುದ್ದ ಆರೋಪ ಮಾಡುತ್ತಿದ್ದಾರೆ. ಅವರು ಯಾವುದೇ ತನಿಖೆ ನಡೆಸಿದರೂ ನಾವು ಎದುರಿಸಲು ಸಿದ್ದರಿದ್ದೇವೆ. ಆದರೆ, ರಾಜಕೀಯ ದ್ವೇಷಕ್ಕಾಗಿ ಅಧಿಕಾರ ದುರುಪಯೋಗ ಆಗಬಾರದು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಇಡೀ ಸರ್ಕಾರ ಸಿಕ್ಕಿಕೊಂಡಿದೆ. ಅದರ ಹಣ ಚುನಾವಣಾ ರಾಜಕಾರಣಕ್ಕೆ, ಸಾರಾಯಿ ಖರೀದಿಗೆ ಹೋಗಿರುವುದು ಸಿಕ್ಕಿದೆ. ಈ ಬಗ್ಗೆ ಪೂರ್ಣ ತನಿಖೆಯಾದರೆ ಸಿಎಂ ರಾಜಿನಾಮೆ ಕೊಡಬೇಕಾಗುತ್ತದೆ ಎಂದು ಬಿಜೆಪಿಯ ಅವಧಿಯಲ್ಲಿ 21 ಹಗರಣ ಆಗಿದೆ ಎಂದು ಆರೋಪಿಸಿದ್ದಾರೆ. ಬಹಳ ಕಷ್ಟ ಪಟ್ಟು ಬಿಜೆಪಿಯ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಅಂತ ಈಗ ಕಣ್ಣು ತೆರೆದು ನೋಡುತ್ತಿದ್ದಾರೆ. ಅವರು ಅಧಿಕಾರದಲ್ಲಿ ಇದ್ದಾರೆ. ಯಾವುದೆ ತನಿಖೆ ನಡೆಸಲಿ ನಾವು ಎದುರಿಸಲು ಸಿದ್ದರಿದ್ದೇವೆ. ಆದರೆ, ತನಿಖೆ ಹೆಸರಲ್ಲಿ ಅಧಿಕಾರ ದುರ್ಬಳಕೆ ಆಗಬಾರದು, ಅವರು ಮಾಡಿರುವ ಆರೋಪಕ್ಕೆ ದಾಖಲೆ ನೀಡಬೆಕಿತ್ತು ಎಂದು ಹೇಳಿದರು.

ಇದನ್ನೂ ಓದಿ:ಭಾರೀ ಮಳೆಯಿಂದ ಬಹುತೇಕ ಭರ್ತಿಯಾದ ಮಂಡ್ಯದ KRS ಜಲಾಶಯ!

ನನ್ನ ವಿರುದ್ದ ಮಾಡಿರುವ ಆರೋಪದಲ್ಲಿ ನಾ‌ನು ಎಪಿಎಂಸಿ ಸಚಿವನಾಗಿರಲಿಲ್ಲ ಆಗ ಗೃಹ ಸಚಿವನಾಗಿದ್ದೆ, ಎಪಿಎಂಸಿ ಪ್ರಕರಣದಲ್ಲಿ ತನಿಖೆ ನಡೆಸಿ ಬ್ಯಾಂಕಿನವರಿಂದ 48 ಕೋಟಿ ರೂ. ಜೊತೆಗೆ ಬಡ್ಡಿ ಸಮೇತ 52 ಕೋಟಿ ರೂ‌ ವಸೂಲಿ ಮಾಡಲಾಗಿತ್ತು. ಬೋವಿ ನಿಗಮದಲ್ಲಿ ಅವ್ಯವಹಾರ ಆಗಿದ್ದಾಗ ಅದನ್ನು ಸಿಐಡಿ ತನಿಖೆಗೆ ನಾವೇ ವಹಿಸಿದ್ದೇವೆ. ಅದರ ತನಿಖೆ ನಡೆಯುತ್ತಿದೆ. ಗಂಗಾ ಕಲ್ಯಾಣ ಯೋಜನೆ ದುರುಪಯೋಗದ ಆರೋಪ ಕೇಳಿ ಬಂದಾಗ ನಾನೇ ಸದನದಲ್ಲಿ ಸಿಐಡಿ ತನಿಖೆಗೆ ನೀಡಿದ್ದೇನೆ. ಅದರ ತನಿಖೆ ಕೊನೆ ಹಂತಕ್ಕೆ ಬಂದಿದೆ. ನಮ್ಮ ವಿರುದ್ದ 40% ಆರೊಪವನ್ನು ಮಾಡಿದ್ದರು. ಇದವರೆಗೂ ಯಾವುದೇ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ನೊಟಿಸ್ ಕೊಟ್ಟಿಲ್ಲ. ರಾಜಕೀಯ ಉದ್ಯೇಶದಿಂದ ಆಯೊಗ ಮಾಡಿದರೆ, ತನಿಖೆ ನಡೆಸಿದರೆ ಹೀಗೆ ಆಗುವುದು ಎಂದು ತಿರುಗೇಟು ನೀಡಿದರು.

ಎಲ್ಲ ಹಗರಣ ಹೊರ ಬರುತ್ತಿವೆ : ಇವತ್ತು ವಾಲ್ಮೀಕಿ ನಿಗಮ ಒಂದೇ ಅಲ್ಲ ಎಲ್ಲ ಇಲಾಖೆಗಳಲ್ಲಿ ಹಗರಣ ಹೊರ ಬರುತ್ತಿವೆ‌ ಕೊಮುಲ್ ನಿಂದ‌ ಹಿಡಿದು ಪ್ರವಾಸೋದ್ಯಮ ಇಲಾಖೆ ಹಗರಣ ಎಲ್ಲವೂ ಹೊರ ಬರುತ್ತಿವೆ‌. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ ಅನ್ನುವಂತಾಗಿದೆ. ಸ್ವಾತಂತ್ರ್ಯಾ ನಂತರ ಭ್ರಷ್ಟಾಚಾರ ಹುಟ್ಟು ಹಾಕಿದ್ದೆ ಕಾಂಗ್ರೆಸ್.  ಅವರು ಯಾವುದೇ ತನಿಖೆ ನಡೆಸಲಿ ನಾವು ಎದುರಿಸುತ್ತೇವೆ. ನಾವು ಅವರ ರೀತಿ ಇಡಿ ಯಾಕೆ, ಸಿಬಿಐ ಯಾಕೆ ಬಂತು ಅಂತ ಕೇಳುವುದಿಲ್ಲ. ನಾವು ಅವರ ಹಾಗೆ ಅಂಜುಬುರುಕರಲ್ಲ. ಪೊಲಿಸ್ ಇಲಾಖೆಯನ್ನು ತಮ್ಮ ವಿರುದ್ದ ಬಂದಿರುವ ಆರೋಪದಿಂದ ರಕ್ಷಣೆ ಪಡೆಯಲು ದುರ್ಬಳಕೆ ಮಾಡಿಕೊಂಡರೆ ಆ ಹಗರಣವೂ ಶೀಘ್ರವೇ ಹೊರ ಬರಲಿದೆ ಎಂದು ಹೇಳಿದರು. 

ಇದನ್ನೂ ಓದಿ:ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ!

ಇಡಿ ತನಿಖೆ ಬಗ್ಗೆ ಇವರಿಗೆ ಯಾಕೆ ಭಯ. ಈಗಾಗಲೇ ಇವರ ವಿರುದ್ದ ಸುಮಾರು 40 ಕ್ಕಿಂತ ಹೆಚ್ಚು ಪ್ರಕರಣಗಳು ಲೋಕಾಯುಕ್ತದಲ್ಲಿ ತನಿಖೆ ನಡೆಯುತ್ತಿದೆ. ಬಿಬಿಎಂಪಿಯಲ್ಲಿ ಗುತ್ತಿಗೆದಾರಿಗೆ ಶೇ 68% ರಷ್ಟು ಹೆಚ್ಚಿಗೆ ನೀಡಿದ್ದಾರೆ. ಇವೆಲ್ಲವೂ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿ ಯವರು ಶುಕ್ರವಾರ ಅಧಿವೇಶನ ಕೊನೆ ಗಳಿಗೆಯಲ್ಲಿ ಆರೋಪ ಮಾಡಿ ವಿರೋಧ ಪಕ್ಷದವರು ಬಾಯಿ‌ಮುಚ್ಚಿಕೊಂಡಿದ್ದಾರೆ ಎನ್ನುತ್ತಾರೆ‌. ನಾವು ಬಾಯಿ ಮುಚ್ಚಿಕೊಂಡು ಕುಳಿತಿಲ್ಲ. ಸದನದಲ್ಲಿ ಪ್ರತಿಪಕ್ಷದ ಶಾಸಕರನ್ನು ಟಾರ್ಗೆಟ್ ಮಾಡಿದರೂ ಯಾರೂ ಬಗ್ಗುವುದಿಲ್ಲ. ಅವರ ಮುಖಕ್ಕೆ ಮಸಿ ಬಳಿದಿದೆ. ಅದಕ್ಕೆ ಎಲ್ಲರೂ ಒಂದು ಎಂದು ತೋರಿಸಲು ಹೊರಟಿದ್ದಾರೆ. ಭ್ರಷ್ಟಾಚಾರದ ಬ್ರಹ್ಮ ಯಾರು ಅಂತ ಎಲ್ಲರಿಗೂ ಗೊತ್ತಾಗಿದೆ. ಅವರು ಈಗ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ತನಿಖೆ ನಂತರ ಸತ್ಯ ಹೊರಬರಲಿದೆ. ಸರ್ಕಾರದ ಭ್ರಷ್ಟಾಚಾರದ ವಿರುದ್ದದ ಹೋರಾಟ ಸದನದ ಹೊರಗೆ ಹಾಗೂ ಒಳಗೆ ಮುಂದುವರೆಯಲಿದೆ ಎಂದು ಹೇಳಿದರು.

ಪ್ರವಾಹ ನಿರ್ಲಕ್ಷ್ಯ : ಇದೇ ವೇಳೆ, ರಾಜ್ಯದಲ್ಲಿ ಪ್ರವಾಹ ಬಂದರೂ ಮುಖ್ಯಮಂತ್ರಿ ಹಾಗೂ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದಿರುವ ಕುರಿತು ಕೇಳಿದ ಪ್ರಶ್ನೆಗೆ, ಬರ ಮತ್ತು ಪ್ರವಾಹದ ವಿಚಾರದಲ್ಲಿ ಈ ಸರ್ಕಾರ ನಿರ್ಲಕ್ಷ್ಯ ಮಾಡಿರುವುದು ಸ್ಪಷ್ಟವಾಗಿದೆ. ನಮ್ಮ ಕೇಂದ್ರ ಸಚಿವರು, ಪಕ್ಷದ ನಾಯಕರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿದ ನಂತರ ಸಿಎಂ ಭೇಟಿ ಮಾಡಿದ್ದಾರೆ. ಕೇಂದ್ರ ಸರ್ಕಾರ 700 ಕೋಟಿ ರೂ. ನೀಡಿದೆ. ಇವರು ರಾಜ್ಯ ಸರ್ಕಾರದಿಂದ ಬರ ಬಂದಾಗಲೂ ಹಣ ಬಿಡುಗಡೆ ಮಾಡಲಿಲ್ಲ. ಈಗಲೂ ಬಿಡುಗಡೆ ಮಾಡಿಲ್ಲ. ಈ ಸರ್ಕಾರಕ್ಕೆ ಒಳ್ಳೆಯ ಆಡಳಿತ ಕೊಡುವ ಉದ್ದೇಶ ಇಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಯಾವಾಗಲೂ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಾರೆ ಎಂದು ಆರೋಪಿಸಿದರು.

ಇದನ್ನೂ ಓದಿ:ಬೆಳಗಾವಿ ಪಾಲಿಕೆಯಲ್ಲಿ ಭೂಬಾಡಿಗೆ ವಸೂಲಿ ಹಗರಣದ ಆರೋಪ!

ರಾಜಕೀಯ ಬೆಳವಣಿಗೆಗೆ ನಾಂದಿ : ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕರು ಅಸಮಾಧಾನ ಹೊರ ಹಾಕಿರುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಶಾಸಕರ ಪರಿಸ್ಥಿತಿ ಏನಾಗಿದೆ ಅಂದರೆ, ಕ್ಷೇತ್ರಕ್ಕೆ ಅನುದಾನ, ಅಭಿವೃದ್ಧಿ ಇಲ್ಲದೇ ಜನರ ಸಮಸ್ಯೆ ಕೇಳಲು ಆಗುತ್ತಿಲ್ಲ. ಅತ್ತ ಸಚಿವರ ಬಳಿ ಹೋದರೆ ಶಾಸಕರ ಕಷ್ಟ ಕೇಳುತ್ತಿಲ್ಲ. ಅದಕ್ಕಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಕೇಳಿದ್ದಾರೆ. ಇವರ ಅಸಮಾಧಾನ ಮುಂದಿನ‌ ರಾಜಕೀಯ ಬದಲಾವಣೆಗೆ ನಾಂದಿ ಹಾಡಬಹುದು ಎಂದು ಹೇಳಿದರು.

ಇಡಿ ಬಗ್ಗೆ ಭಯ ಏಕೆ? : ರಾಜ್ಯ ಸರ್ಕಾರ ಇಡಿ ವಿರುದ್ಧ ಕಾನೂನು ಸಮರಕ್ಕೆ ಚಿಂತನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಿಂದೆಯೂ ಅವರು ಇಡಿ ವಿರುದ್ದ ದೂರು ಕೊಡುವ ಕೆಲಸ ಮಾಡಿದ್ದರು. ಇವರಿಗೆ ಯಾರ ಭಯ, ಯಾಕೆ ಭಯ. ಯಾರ ಹೆಸರು ಹೊರಗೆ ಬರುತ್ತದೆ ಅಂತ ಭಯ ಇವರಿಗೆ. ಹಗರಣಗಳನ್ನು ಮಾಡಿದ ಎಲ್ಲ ರಾಜಕಾರಣಿಗಳ ಸಾಮಾನ್ಯ ನಡೆ ಇದು. ಕುಂಬಳಕಾಯಿ ಕಳ್ಳ ಅಂದರೆ, ಇವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು. ಹಿಂದೆ ಕಾಂಗ್ರೆಸ್ ಶಾಸಕರು, ಸಚಿವರು ಎಲ್ಲೊ ಐಟಿ ದಾಳಿ ಆದರೆ ನಮ್ಮನೆ ಮೇಲೆ ಐಟಿ ದಾಳಿ ಆಗುತ್ತದೆ ಅಂತ ಹೇಳುತ್ತಿದ್ದರು.

ಇದನ್ನೂ ಓದಿ:ಇಂದು ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿಯಿಂದ ಕೃತಜ್ಞತಾ ಸಮಾವೇಶ

ಉಪ ಚುನಾವಣೆಗೆ ಸಿದ್ದ :  ಶಿಗ್ಗಾವಿ ಸೇರಿದಂತೆ ಉಪ ಚುನಾವಣೆಗೆ ನಾವು ಸಿದ್ದರಾಗಿದ್ದೇವೆ. ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಸಮಿತಿ ರಚನೆ ಮಾಡಿದ್ದಾರೆ‌. ಅವರು ಅಭಿಪ್ರಾಯ ಪಡೆದು ಅಭ್ಯರ್ಥಿ ಆಯ್ಕೆ ಮಾಡುತ್ತಾರೆ. ಯಾರೇ ಅಭ್ಯರ್ಥಿ ಮಾಡಿದರೂ ನಾವು ಮುಕ್ತವಾಗಿ ಕೆಲಸ ಮಾಡುತ್ತೇವೆ. ನನ್ನ ಮಗನನ್ನು ಅಭ್ಯರ್ಥಿ ಮಾಡುವಂತೆ ಯಾರೂ ಬಂದು ಕೇಳಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟನೆ ನೀಡಿದರು.
ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನ ಆಯ್ಕೆ ವಿಳಂಬದ ಕುರಿತ ಪ್ರಶ್ನೆಗೆ ಪಕ್ಷದಲ್ಲಿ ಸಮರ್ಥರು ಹೆಚ್ಚಿಗೆ ಇರುವುದರಿಂದ ಪ್ರತಿಪಕ್ಷದ ನಾಯಕನ ಆಯ್ಕೆ ವಿಳಂಬವಾಗುತ್ತಿರಬಹುದು. ಪಕ್ಷದ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು. 

ಬಜೆಟ್ ನಿರೀಕ್ಷೆ : ಕೇಂದ್ರದ ಬಜೆಟ್ ಕುರಿತು ಕೇಳಿದ ಪ್ರಶ್ನೆಗೆ ಕೇಂದ್ರದ ಬಜೆಟ್ ನಿಂದ ರಸ್ತೆ, ರೈಲ್ವೆ ಸೇರಿದಂತೆ ಮೂಲ ಸೌಕರ್ಯಕ್ಕೆ ಹೆಚ್ಚಿನ ಅನುದಾನ ಕೃಷಿ ವಲಯಕ್ಕೆ ಹೆಚ್ಚಿನ ಅನುದಾನ ಬರುವ ನಿರೀಕ್ಷೆ ಇದೆ ಎಂದು ಇದೆ ವೇಳೆ ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News