ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿಗೆ ರಾಜ್ಯದ ಆರ್ಥಿಕ ವ್ಯವಸ್ಥೆ ಬುಡಮೇಲು: ಬೊಮ್ಮಾಯಿ

Congress Government Guarantee Schemes: ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ ಎಂದು ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Aug 1, 2023, 05:12 PM IST
  • ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ
  • ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆ ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆ ಬುಡಮೇಲು
  • ಕಾಂಗ್ರೆಸ್ ಸರ್ಕಾರದ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ
ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಜಾರಿಗೆ ರಾಜ್ಯದ ಆರ್ಥಿಕ ವ್ಯವಸ್ಥೆ ಬುಡಮೇಲು: ಬೊಮ್ಮಾಯಿ  title=
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿದ್ದು ಗ್ಯಾರಂಟಿ ಯೋಜನೆಗಳ ಜಾರಿ ವಿಚಾರವಾಗಿ ಕಿಡಿಕಾರಿದ್ದಾರೆ.

‘ರಾಜ್ಯ ಸರ್ಕಾರವು ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕತೆ ಅಯೋಮಯವಾಗಲಿದೆ’ ಎಂದು ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ. ‘SCSP/TSP ಕಾಯ್ದೆಯಡಿ SC/ST ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, SC/ST ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ’ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 'ಗೋ ಬ್ಯಾಕ್ ಮಿಸ್ಟರ್ ಕ್ರೈಮ್ ಮಿನಿಸ್ಟರ್’: ಪ್ರಧಾನಿ ಮೋದಿ ಟೀಕಿಸಿದ ಕಾಂಗ್ರೆಸ್

‘ರಾಜ್ಯ  ಸರ್ಕಾರ SCSP/TSP ಯೋಜನೆಗೆ 34 ಸಾವಿರ ಕೋಟಿ ರೂ. ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದ್ದು, ಇದು SCSP ಕಾಯ್ದೆಯ ಉಲ್ಲಂಘನೆಯ ಜೊತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ರೋಹವಾಗಿದೆ’ ಎಂದು ಅವರು ಕಿಡಿಕಾರಿದ್ದಾರೆ.

‘ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪನವರು ಮನಸಿಲ್ಲದೇ SCSP/TSP ಹಣ ವರ್ಗಾವಣೆಗೆ ಒಪ್ಪಿಕೊಂಡಿರುವುದಾಗಿ ಅಸಹಾಯಕತೆ ತೋರಿಸಿರುವುದು ಸರ್ಕಾರದ ನಡೆಯ ಬಗ್ಗೆ SC/ST ಸಮುದಾಯದ ಅಸಮಾಧಾನ ತೋರಿಸುತ್ತದೆ. ಇನ್ನೊಂದೆಡೆ SC/ST ಸಮುದಾಯದ ಬಗ್ಗೆ ಕಾಂಗ್ರೆಸ್‍ಗೆ ಇರುವ ನಿರ್ಲಕ್ಷ್ಯ ಧೋರೆಣೆ ಎತ್ತಿ ತೋರಿಸುತ್ತದೆ’ ಎಂದು ಬೊಮ್ಮಾಯಿ ಟೀಕಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ!

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಯೋಜನೆ ಎಲ್ಲಾ ವಸ್ತುಗಳ ಬೆಲೆಗಳ ಏರಿಕೆಯಾಗಿದೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ. ವಿದ್ಯುತ್ ದರ ಏರಿಕೆಯ ಶಾಕ್, ಟೊಮೇಟೊ ಸಮೇತ ಎಲ್ಲಾ ತರಕಾರಿಗಳ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು ಮತ್ತು ಮಜ್ಜಿಗೆಯ ಬೆಲೆ ಏರಿಕೆ, ಹೋಟೆಲ್‍ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್‍ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟಾರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆ ಹೀಗೆ ಇವು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾದ ಸೃಷ್ಟಿ. ಜನಸಾಮಾನ್ಯರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ’ ಎಂದು ಕುಟುಕಿದ್ದಾರೆ.

ಇದನ್ನೂ ಓದಿ: Crime: ವಾಟ್ಸಾಪ್‌, ಫೇಸ್‌ಬುಕ್‌ನಲ್ಲಿ ಹುಡುಗಿಯರಿಗೆ ಹಾರ್ಟ್‌ ಎಮೋಜಿ ಕಳಿಸಿದ್ರೆ ಜೈಲ್‌ ಗ್ಯಾರಂಟಿ..!  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News