ಬೆಂಗಳೂರಿಗರಿಗೆ ಬಿಗ್ ಶಾಕ್: ‘ನ್ಯೂ ಇಯರ್’ ಮೋಜು ಮಸ್ತಿಗೆ BBMP ಬ್ರೇಕ್..!

ಎಂ.ಜಿ.ರಸ್ತೆಯಲ್ಲಿ ನಡೆಯುವ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ತೀರ್ಮಾನ

Last Updated : Nov 12, 2020, 03:03 PM IST
  • ಎಂ.ಜಿ.ರಸ್ತೆಯಲ್ಲಿ ನಡೆಯುವ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬಿಬಿಎಂಪಿ ತೀರ್ಮಾನ
  • ಕೊರೊನಾ ಸೋಂಕಿನ ಭೀತಿಯಿಂದ ಹೊಸ ವರ್ಷಾಚರಣೆಗೆ ಅವಕಾಶವಿಲ್ಲಾ
  • ಸೋಂಕು ಎರಡನೆ ಹಂತದ ಭೀತಿ ಇರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಬ್ರೇಕ್
ಬೆಂಗಳೂರಿಗರಿಗೆ ಬಿಗ್ ಶಾಕ್: ‘ನ್ಯೂ ಇಯರ್’ ಮೋಜು ಮಸ್ತಿಗೆ BBMP ಬ್ರೇಕ್..! title=

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ವರ್ಷ ನಗರದ ಎಂ.ಜಿ.ರಸ್ತೆಯಲ್ಲಿ ನಡೆಯುವ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತೀರ್ಮಾನಿಸಿದೆ. ಪ್ರತಿ ವರ್ಷ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾವಿರಾರು ಮಂದಿ ಎಂ.ಜಿ.ರಸ್ತೆಯಲ್ಲಿ ಜಮಾಯಿಸಿ ಮೋಜು ಮಸ್ತಿ ನಡೆಸುವ ಮೂಲಕ ಹೊಸ ವರ್ಷಕ್ಕೆ ಸ್ವಾಗತ ಕೋರುವುದು ವಿಶೇಷವಾಗಿದೆ.

ಇದೇ ಫಸ್ಟ್ ಟೈಮ್ ರಾಜ್ಯರಾಜಧಾನಿಗೆ ‘8 ಸಚಿವ ಸ್ಥಾನ’..!?

ಆದರೆ ಈ ಬಾರಿ ಕೊರೊನಾ ಸೋಂಕಿನ ಭೀತಿಯಿಂದ ಎಂ.ಜಿ.ರಸ್ತೆಯ ಹೊಸ ವರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದರೂ ಎರಡನೆ ಹಂತದ ಭೀತಿ ಇರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆ ಅವಕಾಶ ನೀಡಬಾರದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿದೆ.

ಹಬ್ಬದ ಸಂಭ್ರಮಕ್ಕೆ ಗ್ರಾಹಕರಿಗೆ ಶಾಕ್! ಈರುಳ್ಳಿ, ಟೊಮೇಟೋಗೂ ತಟ್ಟಿದ ಬೆಲೆ ಏರಿಕೆ ಬಿಸಿ

ಇದರ ಬೆನ್ನಲ್ಲೇ ಚಳಿಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಡಿ.31ರ ಮಧ್ಯರಾತ್ರಿಯ ಸಂಭ್ರಮಾಚರಣೆಗೆ ಅವಕಾಶ ನೀಡಿದರೆ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವರ್ಷಾಚರಣೆಗೆ ತಡೆ ನೀಡುವ ಕುರಿತಂತೆ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಬಿಬಿಎಂಪಿ ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ನಮ್ಮದು ಜಾತಿ ರಾಜಕಾರಣವಲ್ಲ ಕಾಯಕದ ರಾಜಕಾರಣ: ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ

ಈ ಕುರಿತಂತೆ ಪೊಲೀಸ್ ಇಲಾಖೆಯೊಂದಿಗೆ ಮಾತುಕತೆ ನಡೆಸಿ ತಜ್ಞರ ವರದಿಯನ್ನು ಸರ್ಕಾರದ ಗಮನಕ್ಕೆ ತಂದು ವರ್ಷಾಚರಣೆಗೆ ಬ್ರೇಕ್ ಹಾಕುವುದು ಬಿಬಿಎಂಪಿ ಪ್ಲ್ಯಾನ್ ಆಗಿದೆ. ಬೀದಿಗೆ ಬಂದು ಸಂಭ್ರಮಾಚರಣೆ ನಡೆಸಿ ಕೊರೊನಾ ಮಹಾಮಾರಿಯನ್ನು ಮೈಮೇಲೆ ಎಳೆದುಕೊಳ್ಳುವ ಬದಲು ಮನೆಯಲ್ಲೇ ಸರಳವಾಗಿ ಆಚರಣೆ ಮಾಡಿ ಆರೋಗ್ಯ ಕಾಪಾಡಿಕೊಳ್ಳುವಂತೆ ಬಿಬಿಎಂಪಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

Trending News