ಬಿಬಿಎಂಪಿ ಅಧಿಕಾರಿ ಮತ್ತು ನೌಕರರು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ!

BBMP officer: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 15ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ  ಅಗ್ರಹಿಸಿ ಬಿಬಿಎಂಪಿ ಕೆಲಸ ಕಾರ್ಯಗಳಿಗೆ ಸಾಮೂಹಿಕ ರಜೆ ಹಾಕುವ ಮೂಲಕ  ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

Written by - Savita M B | Last Updated : Mar 1, 2024, 03:03 PM IST
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ
  • 15ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಅಗ್ರಹಿಸಿ ಬಿಬಿಎಂಪಿ ಕೆಲಸ ಕಾರ್ಯಗಳಿಗೆ ಸಾಮೂಹಿಕ ರಜೆ ಹಾಕುವ ಮೂಲಕ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ
ಬಿಬಿಎಂಪಿ ಅಧಿಕಾರಿ ಮತ್ತು ನೌಕರರು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ! title=

ಅಧ್ಯಕ್ಷರಾದ ಎ.ಅಮೃತ್ ರಾಜ್ ರವರ ನೇತೃತ್ವದಲ್ಲಿ  ಮುಖಂಡರಾದ ಸಾಯಿಶಂಕರ್, ಬಾಬಣ್ಣರವರು ಮತ್ತು  ಉಪಾಧ್ಯಕ್ಷರುಗಳಾದ ಡಾ.ಶೋಭಾ, ಡಿ.ರಾಮಚಂದ್ರ,  ಪ್ರಧಾನ ಕಾರ್ಯದರ್ಶಿ ಕೆ.ಜಿ.ರವಿ,  ಕಾರ್ಯಾಧ್ಯಕ್ಷರಾದ ರುದ್ರೇಶ್, ಸಾವಿರಾರು ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ನ್ಯಾಯಯುತ ಬೇಡಿಕೆಗಳ ಹೋರಾಟಕ್ಕೆ ಬೆಂಬಲಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಸಚಿವಾಲಯ ನೌಕರರ ಸಂಘ, ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ನೌಕರರ ಸಂಘ, ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ, ಮತ್ತು ಕರ್ನಾಟಕ ರಾಜ್ಯ ಮಹಾನಗರಪಾಲಿಕೆ ನೌಕರರ ಸಂಘ, ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೌಕರರ ಸಂಘ, ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳ ಹಾಗೂ ನೌಕರರ ಸಂಘ, ತುಮಕೂರು ಮಹಾನಗರ ಪಾಲಿಕೆ ಅಧಿಕಾರಿಗಳ ಮತ್ತು ನೌಕರರ ಸಂಘ, ಬೆಳಗಾವಿ ಮಹಾನಗರ ಪಾಲಿಕೆ ನೌಕರರ ಕ್ಷೇಮಾಭಿವೃದ್ದಿ ಸಂಘ, ದಾವಣಗೆರೆ ಮಹಾನಗರಪಾಲಿಕೆ ನೌಕರರ ಸಂಘ,  ಎಸ್.ಕೆ.ಮುನಿಸಿಪಲ್ ಎಂಪ್ಲಾಯಿಸ್ ಯೂನಿಯನ್ ,ಮಂಗಳೂರು ಹೋರಾಟದಲ್ಲಿ  ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ-ಉದ್ಯೋಗಾಕಾಂಕ್ಷಿಗಳಿಗೆ Good News: KPSCಯಿಂದ 264 ಭೂಮಾಪಕರ ನೇಮಕಾತಿಗೆ ಅಧಿಸೂಚನೆ

ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರ 15ಬೇಡಿಕೆಗಳನ್ನು ಸರಕಾರದ ಜೊತೆಯಲ್ಲಿ ಚರ್ಚಿಸಿ ಈಡೇರಿಸುವ ಭರವಸೆ ನೀಡಿದರು.
 ಅಧಿಕಾರಿ ಮತ್ತು ನೌಕರರಿಗೆ ಯಾವುದೇ ಸಮಸ್ಯೆ ಎದುರದಂತೆ ಕ್ರಮ ಕೈಗೊಳ್ಳಲಾಗುವುದು ಪ್ರತಿಭಟನೆಯನ್ನ ಕೈಬಿಡಿ ಎಂದು ಮನವಿ ಮಾಡಿದರು

ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ ಕಂದಾಯ ಇಲಾಖೆ ವರ್ಷದಿಂದ ವರ್ಷಕ್ಕೆ ತೆರಿಗೆ ಸಂಗ್ರಹ ಹೆಚ್ಚಳವಾದರು ಅಧಿಕಾರಿ, ನೌಕರರ ಮೇಲೆ ವಿನಾಕಾರಣ ಕಿರುಕುಳ ಅಮಾನತು ಮಾಡುತ್ತಿದ್ದಾರೆ .2022-20ನೇ ಸಾಲಿನಲ್ಲ 3339ಕೋಟಿ ಮತ್ತು 2023-24ರ ಸಾಲಿನಲ್ಲಿ 3598ಕೋಟಿ ಸಂಗ್ರಹ ಮಾಡಲಾಗಿದೆ.

*ಸಹಾಯಕ ಕಂದಾಯ ಅಧಿಕಾರಿ ಲಕ್ಷ್ಮಿರವರ ವಿರುದ್ದ 5ವರ್ಷದಿಂದ ಇಲಾಖೆ ವಿಚಾರಣೆ ಅಂತಿಮ ಆದೇಶ ನೀಡದೇ ಅಮಾನತು ಮಾಡಿರುವುದು.
*ಆರ್.ಆರ್.ನಗರ ವಲಯದಲ್ಲಿ ಆರೋಗ್ಯಧಿಕಾರಿ ದೇವಿಕಾರಾಣಿರವರಿಗೆ ಸ್ಥಳ ನಿಯೋಜನೆ ಮಾಡದೇ ಇರುವುದು.
*ಅಂಗ್ಲ ಭಾಷೆ ಫಲಕಕ್ಕೆ ಅನಾಮಧೇಯ ಕಲ್ಲು ತೂರಿ ಹಾನಿ ಮಾಡಿದ ಪ್ರಕರಣದಲ್ಲಿ ವಿನಾಕಾರಣದಿಂದ ಹಿರಿಯ ಆರೋಗ್ಯ ಪರಿವಿಕ್ಷಕ ಕೆ.ಎಲ್.ವಿಶ್ವನಾಥ್ ರವರನ್ನು ಅಮಾನತು ಮಾಡಿರುವುದು.
*ಪಾಲಿಕೆ ಅಧಿಕಾರಿ ಮತ್ತು ನೌಕರರ ಕಛೇರಿ ಹೊರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಹೆಚ್ಚು ಅದ್ದರಿಂದ ಬಯೋಮೆಟ್ರಿಕ್ ಮೂಲಕ ಬೆಳಗ್ಗೆ 10ಗಂಟೆಗೆ ಲಾಗ್ ಇನ್ ಮತ್ತು ಸಂಜೆ 5-30ಲಾಗ್ ಆಫ್ ನಿಭಂದನೆಯನ್ನ ತೆರವುಗೊಳಿಸಬೇಕು .
*ಬಿಬಿಎಂಪಿ ಕಿರಿಯ ಅಭಿಯಂತರುಗಳ 108ಹುದ್ದೆಗಳ ನೇಮಕಾತಿ ಮತ್ತು ಮುಂಬಡ್ತಿಗಾಗಿ ಅಧೀಕ್ಷಕ ಅಭಿಯಂತರರ ಹುದ್ದೆ 10, ಕಾರ್ಯಪಾಲಕ ಅಭಿಯಂತರ ಹುದ್ದೆ 20 ಸರ್ಕಾರಕ್ಕೆ ಪ್ರಸ್ಥಾವನೆ
*ಇಂಜನಿಯರ್ ವಿಭಾಗಕ್ಕೆ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಸರ್ಕಾರಕ್ಕೆ ಪ್ರಸ್ತಾವನೆ ಕೊಡಲೆ ಕಳುಹಿಸಬೇಕು.
*ಬಿಬಿಎಂಪಿ ಎ.ಶ್ರೇಣಿಯ ಅಧಿಕಾರಿಗಳ ಮುಂಬಡ್ತಿ ಪಡೆಯಲು ಸರ್ಕಾರಕ್ಕೆ ಅಧಿಕಾರ ನೀಡಲಾಗಿದೆ ಸರ್ಕಾರದ ಹಂತದಲ್ಲಿ ವಿಳಂಬವಾಗುತ್ತಿರುವುದರಿಂದ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಎ.ಶ್ರೇಣಿ ಅಧಿಕಾರಗಳಿಗೆ ಮುಂಬಡ್ತಿ ಅಧಿಕಾರ ನೀಡಬೇಕು.
*198ವಾರ್ಡ್ ನಿಂದ 225ವಾರ್ಡ್ ಅಧಿಕಾರಿ, ಸಿಬ್ಬಂದಿಗಳ ಕೊರತೆ ಇದೆ ಸಕಾಲಕ್ಕೆ ಸಿಬ್ಬಂದಿಗಳ ನೇಮಕ ಮಾಡಬೇಕು.
*ಬಿಬಿಎಂಪಿ 5219ಹುದ್ದೆಗಳು ಖಾಲಿ ಇದ್ದು , ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಮಂಜೂರಾತಿ ನೀಡಿಲ್ಲ.
*ಕಳೆದ ನಾಲ್ಕು ವರ್ಷಗಳಿಂದ ನಾಡಪ್ರಭು ಕೆಂಪೇಗೌಡ ದಿನಾಚರಣೆ  ಅಚರಣೆ ಮಾಡಿಲ್ಲ.
*ಬೆಂಗಳೂರುನಗರ 1ಕೋಟಿ 30ಲಕ್ಷ ಜನಸಂಖ್ಯೆ ಇದೆ. ಇದರ ಅನುಗುಣವಾಗಿ ಅಧಿಕಾರಿ, ಸಿಬ್ಬಂದಿಗಳು ಸಂಖ್ಯೆ ಇದ್ದಾಗ ಸುಲಭ ಕಾರ್ಯನಿರ್ವಹಣೆ ಮಾಡಬೇಕು.
*ಮಾನ್ಯ ಉಪಮುಖ್ಯಮಂತ್ರಿಗಳು ಬೆಂಗಳೂರು ಉಸ್ತುವಾರಿ ಡಿ.ಕೆ.ಶಿವಕುಮಾರ್ ರವರು, ಬಿಬಿಎಂಪಿ ಮುಖ್ಯ ಆಯುಕ್ತರು ಈ ಕೊಡಲೆ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ-ಜಾತಿ ಗಣತಿ ವರದಿ ನೋಡಿ ಅಂತಿಮ ನಿರ್ಧಾರ: ಸಚಿವ ಎಂ ಬಿ ಪಾಟೀಲ್

ಸಂಘದ ಪದಾಧಿಕಾರಿಗಳು ಸೋಮಶೇಖರ್, ಕೆ.ನರಸಿಂಹ, ಹೆಚ್.ಕೆ.ತಿಪ್ಪೇಶ್, ರೇಣುಕಾಂಬ, ಕೆ.ಮಂಜೇಗೌಡ, ಎಸ್.ಜಿ.ಸುರೇಶ್, ಮಂಜುನಾಥ್, ಉಮೇಶ್ ವಿ, ಸಂತೋಷ್ ಕುಮಾರ್ ನಾಯ್ಕ್, ಸಂತೋಷ್ ಕುಮಾರ್,ಹೆಚ್.ಬಿ.ಹರೀಶ್ ರವರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News