ಬೆಂಗಳೂರು: ಬಿಬಿಎಂಪಿಯ ಮೇಯರ್ ಆಗಿ ಕಾಂಗ್ರೆಸ್ ಹಾಗೂ ಉಪಮೇಯರ್ ಆಗಿ ಜೆಡಿಎಸ್ ಅಭ್ಯರ್ಥಿಯ ಗೆಲುವು ರಾಜ್ಯ ಸಮ್ಮಿಶ್ರ ಸರಕಾರ ಸದೃಢವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಮೇಯರ್ ಆಗಿ ಆಯ್ಕೆಯಾದ ಗಂಗಾಂಬಿಕ ಮಲ್ಲಿಕಾರ್ಜುನ್ ಹಾಗೂ ಉಪಮೇಯರ್ ರಮಿಳಾ ಉಮಾಶಂಕರ್ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ಬಿಬಿಎಂಪಿ ಚುನಾವಣೆಯಲ್ಲಿ ಮೇಯರ್ಗೆ 130 ಹಾಗೂ ಉಪಮೇಯರ್ಗೆ 129 ಮತಗಳು ಪಡೆದು ಗದ್ದುಗೆ ಹಿಡಿದಿದ್ದೇವೆ. ಈ ಮೂಲಕ ಬಿಜೆಪಿಗೆ ಮುಖಭಂಗವಾಗಿದೆ ಎಂದರು.
ಪಕ್ಷೇತರ ಅಭ್ಯರ್ಥಿಗಳನ್ನು ಹೈಜಾಕ್ ಮಾಡುವ ಪ್ರಯತ್ನವನ್ನು ಬಿಜೆಪಿ ಮಾಡಿದರೂ ಕಾಂಗ್ರೆಸ್ ಜೆಡಿಎಸ್ಗೆ ಗೆಲುವು ಸಿಕ್ಕಿದೆ. ಇದಕ್ಕೆ ಯಾವುದೇ ಪೊಲೀಸ್ ಫೋರ್ಸ್ನನ್ನೂ ಬಳಸಿಲ್ಲ. ಬಿಜೆಪಿಯ ಆರೋಪದಲ್ಲಿ ಹುರುಳಿಲ್ಲ ಎಂದು ಅವರು ಹೇಳಿದರು.
ಅಂತಿಮವಾಗಿ ಬಿಬಿಎಂಪಿ ಮೇಯರ್ ಸ್ಥಾನ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಉಪಮೇಯರ್ ಸ್ಥಾನ ಜೆಡಿಎಸ್ಗೆ ಒಲಿಯುವ ಮೂಲಕ ರಾಜ್ಯ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ. ನೂತನ ಮೇಯರ್
ಗಂಗಾಂಬಿಕ ಮಲ್ಲಿಕಾರ್ಜುನ್, ಉಪಮೇಯರ್ ರಮಿಳಾ ಉಮಾಶಂಕರ್ ಅವರಿಗೆ ಅಭಿನಂದನೆಗಳು. pic.twitter.com/Rw1z6YRdXk— Dr. G Parameshwara (@DrParameshwara) September 28, 2018