ಸಾಲು ಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ

ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.

Written by - Zee Kannada News Desk | Last Updated : Jun 22, 2022, 10:54 PM IST
  • ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು.
ಸಾಲು ಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಿವೇಶನ ಹಂಚಿಕೆ title=

ಬೆಂಗಳೂರು: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ನೀಡಲಾಯಿತು.ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ನಲ್ಲಿರು ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು.ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಪರಿಸರ ಪ್ರೇಮಿ, ಶತಾಯುಷಿ ತಿಮ್ಮಕ್ಕ ಅವರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು.

ಇದನ್ನೂ ಓದಿ : Maharashtra Political Crisis: ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸಿಎಂ ಉದ್ಧವ್ ಠಾಕ್ರೆಗೆ ಕೋವಿಡ್ ದೃಢ

ಈ ಸಂದರ್ಭದಲ್ಲಿ ಮಾತನಾಡಿದ ಸಾಲುಮರದ ತಿಮ್ಮಕ್ಕ, ನನಗೆ ಬಿಡಿಎ ವತಿಯಿಂದ ನಿವೇಶನವನ್ನು ನೀಡಿರುವುದಕ್ಕೆ ಸಂತಸವಾಗುತ್ತಿದೆ.ಎಲ್ಲರೂ ಪರಿಸರ ರಕ್ಷಣೆಯತ್ತ ಕಾಳಜಿ ವಹಿಸಬೇಕು ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರಲ್ಲಿ ಪರಿಸರ ಕಾಳಜಿ ಮೂಡುವಂತೆ ಮಾಡಬೇಕೆಂದು ಹಾರೈಸಿದರು.No description available.

ಇದನ್ನೂ ಓದಿ : Maharashtra Political Crisis : ಉದ್ಧವ್ ಠಾಕ್ರೆ ಇಂದು ಸಂಜೆಯೊಳಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ!?

ಇದೇ ವೇಳೆ ಮಾತನಾಡಿದ ವಿಶ್ವನಾಥ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸೂಚನೆ ಮೇರೆಗೆ ಬಿಡಿಎ ವತಿಯಿಂದ ನಮ್ಮೆಲ್ಲರ ಮಾರ್ಗದರ್ಶಿಯಾಗಿರುವ ಸಾಲು ಮರದ ತಿಮ್ಮಕ್ಕ ಅವರಿಗೆ ನಿವೇಶನ ನೀಡಿರುವುದು ಸಂತೋಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

ಬಿಡಿಎ ಅಧ್ಯಕ್ಷ ಎಸ್. ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್ ಗೌಡ ಅವರು ಬಿಡಿಎ ವತಿಯಿಂದ ನೀಡಲಾದ ನಿವೇಶನದ ನೋಂದಣಿ ಪತ್ರವನ್ನು ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ವಿತರಿಸಿದರು.ಈ ಸಂದರ್ಭದಲ್ಲಿ ಕಾರ್ಯದರ್ಶಿ ಆನಂದ್, ಉಪಕಾರ್ಯದರ್ಶಿ ಡಾ.ಮಧು, ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

 

 

Trending News