ಬೋನಿಗೆ ಬಿದ್ದ ಜಾಂಬವಂತ: ನಿಟ್ಟಿಸಿರು ಬಿಟ್ಟ ಗ್ರಾಮಸ್ಥರು

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಾಂಬವಂತ ಕಳೆದ ಶನಿವಾರ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದ ಪೆಟ್ಟಿಗೆ ಅಂಗಡಿಗಳ ಮೇಲೆ ದಾಳಿ ನಡೆಸಿ ಅಲ್ಲಿದ್ದ ಮೊಟ್ಟೆ, ಹಣ್ಣು ತಿಂದು, ಧ್ವಂಸ ಮಾಡಿ ಹೋಗಿತ್ತು.‌ ಅದರ, ದಾಂಧಲೆ ಸಿಸಿಟಿವಿಯಲ್ಲೂ ಸೆರೆಯಾಗಿತ್ತು.

Written by - Yashaswini V | Last Updated : Dec 14, 2023, 12:51 PM IST
  • ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಕರಡಿ.
  • ಕೆಲ ದಿನಗಳ ಹಿಂದೆ ಅಜ್ಜಿಪುರ ಸುತ್ತ ಮುತ್ತ ಕಾಣಿಸಿಕೊಂಡು, ಚಿಲ್ಲರೆ ಅಂಗಡಿ ಮೇಲೆ ದಾಳಿ ನಡೆಸಿದ್ದ ಕರಡಿ
  • ಹನೂರು ತಾಲೂಕಿನ ಜನರ ನಿದ್ದೆಗೆಡಿಸಿದ್ದ ಜಾಂಬವಂತ
ಬೋನಿಗೆ ಬಿದ್ದ ಜಾಂಬವಂತ: ನಿಟ್ಟಿಸಿರು ಬಿಟ್ಟ ಗ್ರಾಮಸ್ಥರು title=

ಚಾಮರಾಜನಗರ: ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸೆರೆಯಾಗಿರುವ ಘಟನೆ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ನಡೆದಿದೆ.

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಾಂಬವಂತ ಕಳೆದ ಶನಿವಾರ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದ ಪೆಟ್ಟಿಗೆ ಅಂಗಡಿಗಳ ಮೇಲೆ ದಾಳಿ ನಡೆಸಿ ಅಲ್ಲಿದ್ದ ಮೊಟ್ಟೆ, ಹಣ್ಣು ತಿಂದು, ಧ್ವಂಸ ಮಾಡಿ ಹೋಗಿತ್ತು.‌ ಅದರ, ದಾಂಧಲೆ ಸಿಸಿಟಿವಿಯಲ್ಲೂ ಸೆರೆಯಾಗಿತ್ತು.

ಇದನ್ನೂ ಓದಿ- ಹದಗೆಟ್ಟ ರಸ್ತೆಗೆ ಡಾಂಬಾರು... ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಈ ಮೂರು ದಿನ ನೋ ಎಂಟ್ರಿ!!

ಕಳೆದ ನಾಲ್ಕು ದಿನಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿ ಹಿಡಿಯಲು ಅಜ್ಜಿಪುರ ಗ್ರಾಮದ ಹೊರವಲಯದಲ್ಲಿ ಬೋನನ್ನು ಇಟ್ಟು ಕರಡಿ ಸೆರೆಗೆ  ಸತತ ಪ್ರಯತ್ನಪಟ್ಟಿದ್ದರು. ಅದರಂತೆ ಆಹಾರ ಅರಸಿ ಬಂದ ಜಾಂಬವಂತ ಬೋನಿನಲ್ಲಿ ಸೆರೆಯಾಗಿದೆ.

ಇದನ್ನೂ ಓದಿ- ಕುಡತಿನಿ ಭೂ ಸಂತ್ರಸ್ತರ ಪ್ರತಿಭಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದನೆ; ಡಿ.14ರಂದು ಸಿಎಂ ಸಭೆ

ನಿಟ್ಟಿಸಿರು ಬಿಟ್ಟ ಗ್ರಾಮಸ್ಥರು: 
ಕಳೆದ ಶನಿವಾರ ರಾತ್ರಿ ಕರಡಿಯು ಗ್ರಾಮದ ಪೆಟ್ಟಿಗೆ ಅಂಗಡಿಗಳಿಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ನಾಶಗೊಳಿಸಿದ ನಂತರ ಸುತ್ತಮುತ್ತಲ ಗ್ರಾಮದ ಜನರಲ್ಲಿ  ಭಯದ ವಾತಾವರಣವನ್ನು ಉಂಟು ಮಾಡಿತ್ತು. ಕರಡಿ ಗ್ರಾಮಕ್ಕೆ ಬಂದು ಪೆಟ್ಟಿಗೆ ಅಂಗಡಿಗಳ ಮೇಲೆ ದಾಳಿ ನಡೆಸುವ ಚಿತ್ರಣ ಸಿಸಿಟಿವಿಯಲ್ಲಿ ಸೆರೆಯಾದ ಚಿತ್ರಣವನ್ನು ನೋಡಿ  ರಾತ್ರಿ ವೇಳೆ ಗ್ರಾಮಸ್ಥರು ಓಡಾಡುವುದಕ್ಕೂ ಭಯಪಟ್ಟಿದ್ದರು. ಈಗ ಕರಡಿ ಬೋನಿಗೆ ಬಿದ್ದ ಹಿನ್ನೆಲೆಯಲ್ಲಿ ಭಯದ ವಾತಾವರಣದಲ್ಲಿದ್ದ  ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಯಾದ ಕರಡಿಯನ್ನು ಸುರಕ್ಷಿತವಾಗಿ ಮತ್ತೇ ಕಾಡಿಗೆ ಬಿಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News