ಮೋದಿ ಮತ್ತೆ ಪ್ರಧಾನಿಯಾಗುವುದು ತಿರುಕನ ‌ಕನಸು: ಜಯಚಂದ್ರ

ರಾಹುಲ್ ಗಾಂಧಿ ಪ್ರಧಾನಿಯಾಗುವುದು ತಿರುಕನ ಕನಸು ಎಂದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌‌. ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಜಯಚಂದ್ರ.

Last Updated : Sep 13, 2017, 02:37 PM IST
ಮೋದಿ ಮತ್ತೆ ಪ್ರಧಾನಿಯಾಗುವುದು ತಿರುಕನ ‌ಕನಸು: ಜಯಚಂದ್ರ title=
Pic Courtesy : ANI

ಬೆಂಗಳೂರು: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರುವುದು ತಿರುಕನ ಕನಸು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಧಾನಿಯಾಗುವುದು ತಿರುಕನ ಕನಸು ಎಂದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌‌. ಯಡಿಯೂರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಜಯಚಂದ್ರ, ನರೇಂದ್ರ ಮೋದಿ ಪ್ರಧಾನಿ ಆಗುವುದು ಕೂಡ ತಿರುಕನ ಕನಸು ಎಂದರು.

ಇದೇ ವಿಷಯವಾಗಿ ಮಾತನಾಡಿದ ಇಂಧನ‌ ಸಚಿವ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಎರಡು ಸಲ ಪ್ರಧಾನಿ ಸ್ಥಾನವನ್ನು ಬಿಟ್ಟುಕೊಟ್ಟರು. ಸಿಖ್ ಸಮುದಾಯದ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ರಾಹುಲ್ ಗಾಂಧಿ ಬಯಸಿದ್ದಿದ್ದರೆ ಯಾವಾಗಲೋ ಪ್ರಧಾನಿ ಆಗಬಹುದಿತ್ತು. ಆದರೆ ರಾಹುಲ್ ಗಾಂಧಿ ಈ ದೇಶಕ್ಕಾಗಿ ದುಡಿಯುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಬಗ್ಗೆ ಯಡಿಯೂರಪ್ಪ ಹೇಳಿಕೆ ಸರಿಯಲ್ಲ ಎಂದು ಖಂಡಿಸಿದರು. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಜನರ ಕರುಣೆಯೊಂದೇ ಸಾಕು ಎಂದು ಹೇಳಿದರು.

Trending News