ಬೆಳಗಾವಿ ಲೋಕಸಭಾ ಬೈಎಲೆಕ್ಷನ್: ಬಿಜೆಪಿಯಿಂದ ಮಾಜಿ ಸಿಎಂಗೆ ಟಿಕೆಟ್..!?

ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್ ಗೆ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಹೈಕಮಾಂಡ್ 'ಬಿಗ್ ಪ್ಲಾನ್'

Last Updated : Nov 22, 2020, 02:33 PM IST
  • ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್ ಗೆ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಹೈಕಮಾಂಡ್ 'ಬಿಗ್ ಪ್ಲಾನ್'
  • ಈಗಾಗಲೇ ತೆರೆಮೆರೆಯಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದಾರೆ?
  • ಬೈಎಲೆಕ್ಷನ್ ಗೆ ಮಾಜಿ ಸಿಎಂ, ಹಾಲಿ ಸಚಿವ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ಚಿಂತನೆ
ಬೆಳಗಾವಿ ಲೋಕಸಭಾ ಬೈಎಲೆಕ್ಷನ್: ಬಿಜೆಪಿಯಿಂದ ಮಾಜಿ ಸಿಎಂಗೆ ಟಿಕೆಟ್..!? title=

ಬೆಂಗಳೂರು: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್ ಗೆ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಹೈಕಮಾಂಡ್ 'ಬಿಗ್ ಪ್ಲಾನ್' ನಡೆಸುತ್ತಿದೆ ಎನ್ನಲಾಗಿದೆ.

ಬೆಳಗಾವಿ(Belagavi) ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್ ಗೆ ಬಿಜೆಪಿಯ ಪ್ರಬಲ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡನ್ ಚಿಂತನೆ ನಡೆಸಿದ್ದು, ಈಗಾಗಲೇ ತೆರೆಮೆರೆಯಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ.

ಮಗನ ಸೋಲನ್ನು ನೆನೆದು ಕಣ್ಣೀರಿಟ್ಟ ಮಾಜಿ ಸಿಎಂ ಕುಮಾರಸ್ವಾಮಿ!

ಬಿಜೆಪಿ ಹೈಕಮಾಂಡ್ ಬೆಳಗಾವಿ ಲೋಕಸಭಾ ಕ್ಷೇತ್ರದ ಬೈಎಲೆಕ್ಷನ್ ಗೆ ಮಾಜಿ ಸಿಎಂ, ಹಾಲಿ ಸಚಿವ ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತದೆ.

BIG NEWS: ಆರಂಭವಾದ ಕಾಲೇಜುಗಳನ್ನ ಮತ್ತೆ ಮುಚ್ಚಲು ಸರ್ಕಾರ ಚಿಂತನೆ..!

4 ಬಾರಿ ಲೋಕಸಭೆ ಸಂಸದರಾಗಿ ಸುರೇಶ್ ಅಂಗಡಿ ಆಯ್ಕೆಯಾಗಿದ್ದರು. 2004, 2009, 2014 ಮತ್ತು 2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು. ಅಲ್ಲದೆ, ಜಗದೀಶ್ ಶೆಟ್ಟರ್ ಅವರ ಮಗನಿಗೆ ಸುರೇಶ್ ಅಂಗಡಿ ಅವರ ಮಗಳನ್ನ ಕೊಡಲಾಗಿದೆ. ಇಬ್ಬರು ಒಂದೇ ಜಾತಿಯವರಾದ ಕಾರಣ ಇವರಿಗೆ ಟಿಕೆಟ್ ನೀಡಿದರೆ ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ಇದೆ ಎನ್ನಲಾಗಿದೆ.

ಗ್ರಾಮ ಪಂಚಾಯತಿ ಚುನಾವಣೆ: ಹಳ್ಳಿ ಜನರ ಮನ ಗೆಲ್ಲಲು 'ಬಿಜೆಪಿ ಮಾಸ್ಟರ್ ಪ್ಲಾನ್'

Trending News