ಅಥಣಿಯಲ್ಲಿ ಭೀಕರ ಅಪಘಾತ ಪ್ರಕರಣ : ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಭೇಟಿ

Athani Accident : ಅಥಣಿ ಕಾಲೇಜು ಬಸ್ ಅಪಘಾತ ಹಿನ್ನೆಲೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಗೊಂಡ ವಿದ್ಯಾರ್ಥಿಗಳ ಆರೋಯ ಸ್ಥಿತಿಯನ್ನು ಅವಲೋಕಿಸಿದರು.

Written by - Chetana Devarmani | Last Updated : Aug 20, 2022, 12:22 PM IST
  • ಅಥಣಿಯಲ್ಲಿ ಭೀಕರ ಅಪಘಾತ
  • ಕಾಲೇಜು ಬಸ್ - ಗೂಡ್ಸ್ ವಾಹನ ಡಿಕ್ಕಿ
  • ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಭೇಟಿ
ಅಥಣಿಯಲ್ಲಿ ಭೀಕರ ಅಪಘಾತ ಪ್ರಕರಣ : ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಭೇಟಿ  title=
ಭೀಕರ ಅಪಘಾತ

ಅಥಣಿ (ಬೆಳಗಾವಿ) : ಅಥಣಿ ಕಾಲೇಜು ಬಸ್ ಅಪಘಾತ ಹಿನ್ನೆಲೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಗೊಂಡ ವಿದ್ಯಾರ್ಥಿಗಳ ಆರೋಯ ಸ್ಥಿತಿಯನ್ನು ಅವಲೋಕಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ನಡೆದಿತ್ತು. ಬಸ್ಸಿನಲ್ಲಿ ಲಿಮಿಟ್‌ ಮೀರಿ ಮಕ್ಕಳನ್ನು ತುಂಬಿದ ಆರೋಪ ಕೇಳಿಬರುತ್ತಿದೆ. ಈ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂವತ್ತೊಂಬತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರಿಗೆ ನಾಲ್ಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಒಬ್ಬರು ಶಿಕ್ಷಕಿ ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆ ಗೆ ಬೆಳಗಾವಿಗೆ ರವಾನಿಸಲಾಗಿದೆ. ಸ್ಥಳೀಯ ಖಾಸಗಿ ವೈದ್ಯರು ಮತ್ತು ಸಾರ್ವಜನಿಕರು ಸಕಾಲಕ್ಕೆ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಎಸ್ಪಿ ಹೇಳಿದರು. 

ಇದನ್ನೂ ಓದಿ: ಅಥಣಿಯಲ್ಲಿ ಭೀಕರ ಅಪಘಾತ.. ಶಾಲಾ ಬಸ್ - ಗೂಡ್ಸ್ ವಾಹನ ನಡುವೆ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಬಸ್ ಹಾಗೂ ಲಾರಿಯ ಇಬ್ಬರೂ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಲೇಜು ವಾಹನದಲ್ಲಿ ಎಷ್ಟು ಜನ ಇದ್ದರು ಎನ್ನುವ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಬೇರೆಡೆ ಸ್ಥಳಾಂತರಿಸಲಿದ್ದೇವೆ ಎಂದು ಬೆಳಗಾವಿ ಎಸ್ಪಿ ಸಂಜೀವ ಪಾಟೀಲ ತಿಳಿಸಿದರು.

ಬೆಳ್ಳಂ ಬೆಳಗ್ಗೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದೆ. ವಿದ್ಯಾರ್ಥಿನಿಯರಿದ್ದ ಕಾಲೇಜು ಬಸ್‌ ಹಾಗೂ ಗೂಡ್ಸ್‌ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಲೇಜು ಬಸ್ ಹಾಗೂ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಬಣಜವಾಡ ಕಾಲೇಜಿಗೆ ಸೇರಿದ ವಾಹನ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ, ತೀವ್ರತೆಗೆ ಇಬ್ಬರೂ ಚಾಲಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಬಸ್‌ನಲ್ಲಿ 10 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನನಿಸಲಾಗಿದೆ. ಅಪಘಾತದ ಸ್ಥಳದಲ್ಲಿ ಜನಜಂಗುಳಿ ಕೂಡಿದ್ದು, ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. 

ಇದನ್ನೂ ಓದಿ: 5 ಮನೆ, ಥಿಯೇಟರ್, ಈಜುಕೊಳ & ಲಕ್ಷುರಿ ಕಾರು: ಸರ್ಕಾರಿ ನೌಕರನ ಮನೆ ನೋಡಿ ಅಧಿಕಾರಿಗಳಿಗೆ ಶಾಕ್!

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News