Road Accident: ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ, ಸ್ಥಳದಲ್ಲೇ ನಾಲ್ವರ ದುರ್ಮರಣ

ಬನ್ನೇರುಘಟ್ಟದಿಂದ ತುಮಕೂರಿನ ಕಡೆ ಹೊರಟ್ಟಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಇಬ್ಬರು ಮಹಿಳೆಯರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರ.

Written by - Malathesha M | Last Updated : Feb 24, 2022, 09:33 PM IST
  • ಬನ್ನೇರುಘಟ್ಟ - ತುಮಕೂರು ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ
  • ಬೊಮ್ಮನಹಳ್ಳಿ ಮೂಲದ ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ
  • ಅಪಘಾತದಿಂದ ನೈಸ್ ರಸ್ತೆಯಲ್ಲಿ 8 ಕಿ.ಮೀವರೆಗೂ ವಾಹನಗಳು ಸಾಲಾಗಿ ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು
Road Accident: ನೈಸ್ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ, ಸ್ಥಳದಲ್ಲೇ ನಾಲ್ವರ ದುರ್ಮರಣ title=
ನಾಲ್ವರು ಟೆಕ್ಕಿಗಳು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬನ್ನೇರುಘಟ್ಟ - ತುಮಕೂರು ನೈಸ್ ರಸ್ತೆ(Bannerghatta-Tumkur Nice Road)ಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಬನ್ನೇರುಘಟ್ಟದಿಂದ ತುಮಕೂರಿನ ಕಡೆ ಹೊರಟ್ಟಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ(Road Accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಇಬ್ಬರು ಮಹಿಳೆಯರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Mekedatu Hiking : 'ಮೇಕೆದಾಟು ನಮ್ಮ ಹಕ್ಕು ಉಳಿಸಿಕೊಳ್ಳೋದಕ್ಕೋಸ್ಕರ ಬೆಂಬಲ ಕೊಡ್ತಿವಿ'

ಘಟನೆಯ ವಿಷಯ ತಿಳಿದ ಕುಮಾರಸ್ವಾಮಿ ಲೇಔಟ್ ಪೊಲೀಸರು(Kumaraswamy Layout Police Station) ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ನೈಸ್ ರಸ್ತೆಯಲ್ಲಿ 8 ಕಿಮೀ ದೂರದವರೆಗೂ ವಾಹನಗಳು ಸಾಲಾಗಿ ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದು ಮಾಹಿತಿ ನೀಡಿದ್ದಾರೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸ್ಥಳದಲ್ಲಿ ಮೃತಪಟ್ಟಿದ್ದು, ಪೋಸ್ಟ್ ಮಾರ್ಟಮ್ ನೆಡೆಸಲು ಶವಗಳನ್ನು ರವಾನಿಸಲಾಗಿದೆ.

ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರು ಬೆಂಗಳೂರಿನ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು(Techies Dead) ಎಂದು ತಿಳಿದು ಬಂದಿದೆ. ಬೊಮ್ಮನಹಳ್ಳಿ ಮೂಲದವರಾದ ಈ ಟೆಕ್ಕಿಗಳೆಲ್ಲರೂ 30ರ ವಯೋಮಾನದವರು ಎಂದು ತಿಳಿದುಬಂದಿದೆ. ಸದ್ಯಕ್ಕೆ ಮೃತಪಟ್ಟಿರುವವರ ಹೆಸರುಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಬಂದಿಲ್ಲ. ಅಪಘಾತದ ಹೊಡೆತಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಆನ್‍ಲೈನ್ ಪಾಠ ಕೇಳಲು ಟ್ಯಾಬ್ ವಿತರಣೆ: ಇಂದೇ ಅರ್ಜಿ ಸಲ್ಲಿಸಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News