ವಿದ್ಯಾರ್ಥಿಗಳ ಗಮನಕ್ಕೆ : 2023-24 ನೇ ಸಾಲಿನ ಬಸ್‌ ಪಾಸ್ ವಿತರಣೆಗೆ ಅರ್ಜಿ ಆಹ್ವಾನ..!

Karnataka student bus pass 2023-24 : 2023-24ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 07.07.2023 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಸ್ಮಾರ್ಟ್ಕಾರ್ಡ್ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು. ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Written by - Manjunath Hosahalli | Edited by - Krishna N K | Last Updated : Jul 7, 2023, 06:33 PM IST
  • 2023-24ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ಅರ್ಜಿ ಆಹ್ವಾನ.
  • ದಿನಾಂಕ 07.07.2023 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕಾರ.
  • ಬೆಂಗಳೂರು ಒನ್ ಕೇಂದ್ರಗಳ ಮೂಲಕ ಪಾಸ್‌ ವಿತರಣೆ.
ವಿದ್ಯಾರ್ಥಿಗಳ ಗಮನಕ್ಕೆ : 2023-24 ನೇ ಸಾಲಿನ ಬಸ್‌ ಪಾಸ್ ವಿತರಣೆಗೆ ಅರ್ಜಿ ಆಹ್ವಾನ..! title=

ಬೆಂಗಳೂರು : ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. ಅದರಂತೆ 2023-24ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 07.07.2023 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಸ್ಮಾರ್ಟ್ಕಾರ್ಡ್ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು. 

2023-24ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಹಾಗೂ ಬೆಂ.ಮ.ಸಾ.ಸಂಸ್ಥೆಯ ವೆಬ್ಸೈಟ್ https://mybmtc.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಇತಿಹಾಸದಲ್ಲೇ ಇದು ಅಪರೂಪದ ಬಜೆಟ್ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಣ್ಣನೆ  

ವಿದ್ಯಾರ್ಥಿ ಪಾಸುಗಳನ್ನು ಬೆಳಿಗ್ಗೆ 08:00 ಗಂಟೆಯಿಂದ ಸಂಜೆ 18:30 ಗಂಟೆಯವರೆಗೆ ವಾರದ ಎಲ್ಲಾ ದಿನಗಳಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂ.ಮ.ಸಾ.ಸಂಸ್ಥೆಯ ಕೆಂಪೇಗೌಡ ಬಸ್ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ-19, ಶಾಂತಿನಗರ ಟಿಟಿಎಂಸಿ, ಕರಾರಸಾ ನಿಗಮದ ಆನೇಕಲ್ ಬಸ್ ನಿಲ್ದಾಣ ವಿತರಿಸಲಾಗುವುದು. 

ಮುಂದುವರೆದು, ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರು ಉಚಿತ ಪ್ರಯಾಣ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಸಹಾಯವಾಣಿ ಸಂಖ್ಯೆ – 08022483777 ಗೆ ಸಂಪರ್ಕಿಸಬಹುದಾಗಿದೆ ಹಾಗೂ ಸಂಸ್ಥೆಯ ವೆಬ್ಸೈಟ್ ಮೂಲಕ ಪಡೆಯಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News