ಆಧಾರ್ - ಪ್ಯಾನ್ ಲಿಂಕ್ ಮಾಡದಿದ್ದರೆ ಎದುರಾಗುವ ಸಮಸ್ಯೆಗಳೇನು ಗೊತ್ತೆ..? ತಪ್ಪದೆ ತಿಳಿಯಿರಿ

Pan Aadhar Link : ಹಲವು ವರ್ಷಗಳಿಂದ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಗಡುವನ್ನು ವಿಸ್ತರಿಸುತ್ತಾ ಬಂದಿರುವ ಆದಾಯ ತೆರಿಗೆ ಇಲಾಖೆ ಈ ಬಾರಿ ಆ ಅವಕಾಶವನ್ನೇ ನೀಡಿಲ್ಲ. ಇದರೊಂದಿಗೆ ಕೇಂದ್ರ ಹಣಕಾಸು ಇಲಾಖೆ ಹೇಳಿರುವಂತೆ ಜೂನ್ 30ಕ್ಕೆ ಅಂತಿಮ ಗಡುವು ಮುಕ್ತಾಯಗೊಂಡಿದೆ. ಜುಲೈ 1 ರಿಂದ, ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯವಾಗಿವೆ. ಈಗ ಅವರ ಪರಿಸ್ಥಿತಿ ಏನು..? ಎಂಬುವುದರ ಕುರಿತು ತಿಳಿಯೋಣ..

Written by - Krishna N K | Last Updated : Jul 12, 2023, 06:59 PM IST
  • ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ನೀಡಿದ್ದ ಗಡುವ ಮುಕ್ತಾಯವಾಗಿದೆ.
  • ಜುಲೈ 1 ರಿಂದ, ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್‌ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ನಿಷ್ಕ್ರಿಯವಾಗಿವೆ.
  • ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಜೂನ್ 30ರ ಗಡುವು ವಿಧಿಸಿತ್ತು.
ಆಧಾರ್ - ಪ್ಯಾನ್ ಲಿಂಕ್ ಮಾಡದಿದ್ದರೆ ಎದುರಾಗುವ ಸಮಸ್ಯೆಗಳೇನು ಗೊತ್ತೆ..? ತಪ್ಪದೆ ತಿಳಿಯಿರಿ title=

Pan Aadhar Link : ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಜೂನ್ 30ರ ಗಡುವು ವಿಧಿಸಿತ್ತು. ಇದೀಗ ಲಿಂಕ್ ಮಾಡದವರ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಈ ಗಡುವನ್ನು ಹಲವು ಬಾರಿ ವಿಸ್ತರಿಸುತ್ತಾ ಬಂದಿರುವ ಆದಾಯ ತೆರಿಗೆ ಇಲಾಖೆ ಈ ಬಾರಿ ಅವಕಾಶ ನೀಡಿಲ್ಲ. ಕೇಂದ್ರದ ಘೋಷಣೆಯಂತೆ, ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದ ಪ್ಯಾನ್ ಕಾರ್ಡ್‌ಗಳು ಜುಲೈ 1 ರಿಂದ ನಿಷ್ಕ್ರಿಯಗೊಂಡಿವೆ. 

ಪ್ಯಾನ್ ಕಾರ್ಡ್ ಕಡ್ಡಾಯ : ವ್ಯಕ್ತಿಯ ಆಸ್ತಿ, ಸಾಲ, ಹೂಡಿಕೆ ಮತ್ತು ವ್ಯಾಪಾರ ಚಟುವಟಿಕೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸಿದ್ದಾರೆಯೇ ಅಥವಾ ಇಲ್ಲವೇ? ಅಥವಾ ಯಾವುದೇ ತೆರಿಗೆ ವಂಚಿಸಲಾಗಿದೆಯೇ ಎಂಬುದನ್ನು ತಿಳಿಯಲು ಈ ಪ್ಯಾನ್ ಕಾರ್ಡ್ ಸಂಖ್ಯೆ ಉಪಯುಕ್ತವಾಗಿದೆ. 

ಆಧಾರ್ ಕಾರ್ಡ್ - ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಏನಾಗುತ್ತದೆ.? 

  • ಯಾವುದೇ ಬ್ಯಾಂಕ್ ನಲ್ಲಿ ಬ್ಯಾಂಕ್ ಖಾತೆ ತೆರೆಯಲು ಪ್ಯಾನ್ ಕಾರ್ಡ್ ಕಡ್ಡಾಯ ಎಂಬುದು ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ನಿಷ್ಕ್ರಿಯವಾಗಿರುವ ಪ್ಯಾನ್ ಕಾರ್ಡ್ ಮೂಲಕ ಬ್ಯಾಂಕ್ ಖಾತೆ ತೆರೆಯಲು ಸಾಧ್ಯವಿಲ್ಲ. 
  • ನೀವು ಕ್ರೆಡಿಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದರೆ, ಅರ್ಜಿದಾರರ CIBIL ಸ್ಕೋರ್ ಅನ್ನು ಪ್ಯಾನ್ ಕಾರ್ಡ್ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ. ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಿದ್ದರೆ ನಿಮಗೆ ಕ್ರೆಡಿಕ್‌ ಕಾರ್ಡ್ ಸಿಗುವುದಿಲ್ಲ. ಡೆಬಿಟ್ ಕಾರ್ಡ್ ವಿತರಣೆಯ ಸಂದರ್ಭದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.
  • ಸಾಲಕ್ಕಾಗಿ ಅರ್ಜಿ ಸಲ್ಲಿಸುವಾಗ ತಮ್ಮ ಪಾನ್ ಕಾರ್ಡ್‌ನ ಆಧಾರದ ಮೇಲೆ ತಮ್ಮ CIBIL ಸ್ಕೋರ್ ಅನ್ನು ಪರಿಶೀಲಿಸಲೇಬೇಕು ಮತ್ತು ಅದರ ಆಧಾರದ ಮೇಲೆ ಸಾಲವನ್ನು ನೀಡಲಾಗುತ್ತದೆ. ಪ್ಯಾನ್‌ ಕಾರ್ಡ್‌ ನಿಷ್ಕ್ರಿಯಗೊಂಡಿದ್ದರೆ ಸಾಲದ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ. 
  • ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಡಿಮ್ಯಾಟ್ ಖಾತೆ ಅತ್ಯಗತ್ಯ. ಪ್ಯಾನ್ ಕಾರ್ಡ್ ಇಲ್ಲದೆ ಡಿಮ್ಯಾಟ್ ಖಾತೆಯ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಏಕೆಂದರೆ ನಾವು ಮೊದಲೇ ಹೇಳಿದಂತೆ PAN ಕಾರ್ಡ್ ಹೂಡಿಕೆಗಳನ್ನು ಟ್ರ್ಯಾಕ್ ಮಾಡಲು ಸಹಾಯ ಮಾಡುತ್ತದೆ. ಪ್ಯಾನ್ ಕಾರ್ಡ್ ಇಲ್ಲದೆ ಹೂಡಿಕೆ ಸಾಧ್ಯವಿಲ್ಲ. 
  • ಬ್ಯಾಂಕ್‌ ಖಾತೆಯ ಮೂಲಕ ಕೆಲವು ಸಂದರ್ಭಗಳಲ್ಲಿ ರೂ 50,000 ಕ್ಕಿಂತ ಹೆಚ್ಚಿ ಹಣವನ್ನು ಪಾವತಿ ಮಾಡಬೇಕಾದರೆ ನಿಮ್ಮ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಬೇಕಿರುತ್ತದೆ. ಆ ಸಂದರ್ಭದಲ್ಲಿ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಿದ್ದರೆ, ಪಾವತಿ ಸಾಧ್ಯವಾಗುವುದಿಲ್ಲ. ಅದರಲ್ಲೂ ಬ್ಯಾಂಕಿಂಗ್ ವಲಯದಲ್ಲಿ ಈ ನಿಯಮ ಅನಾದಿ ಕಾಲದಿಂದಲೂ ಜಾರಿಯಲ್ಲಿದೆ.
  • ವಿದೇಶಕ್ಕೆ ಪ್ರಯಾಣಿಸುವಾಗ ಅಥವಾ ವಿದೇಶಿ ಕರೆನ್ಸಿಯನ್ನು ವಿನಿಮಯ ಮಾಡಿಕೊಳ್ಳಲು ಪ್ಯಾನ್ ಕಾರ್ಡ್ ಅತ್ಯಗತ್ಯವಾಗಿರುತ್ತದೆ. ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಲು ಪ್ಯಾನ್ ಕಾರ್ಡ್ ಕಡ್ಡಾಯವಾಗುತ್ತದೆ. ವಿಶೇಷವಾಗಿ ನಿಮ್ಮ ಹೂಡಿಕೆ ರೂ. 50 ಸಾವಿರ ದಾಟಿದರೆ ಪ್ಯಾನ್ ಕಾರ್ಡ್ ಅತ್ಯವಶ್ಯಕ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News