BESCOM UG Transformer: ದೇಶದಲ್ಲೇ ಪ್ರಥಮ 500KVA ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ

BESCOM UG Transformer: ಈ ಯೋಜನೆಯಡಿ ವಿತರಣ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್‍ಗಳು, ಫಿಡರ್ ಪಿಲ್ಲರ್ ಬಾಕ್ಸ್‍ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದ್ದು, ಇದರಿಂದ  ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್‌ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ.

Written by - Bhavya Sunil Bangera | Edited by - Puttaraj K Alur | Last Updated : Sep 5, 2023, 07:12 PM IST
  • ದೇಶದಲ್ಲೇ ಪ್ರಪ್ರಥಮ 500KVA ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ
  • ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಿರ್ಮಿಸಿರುವ ಭೂಗತ ಪರಿವರ್ತಕ ಕೇಂದ್ರ ಉದ್ಘಾಟಿಸಿದ ಕೆ.ಜೆ.ಜಾರ್ಜ್
  • ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ 1.97 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಕೇಂದ್ರ
BESCOM UG Transformer: ದೇಶದಲ್ಲೇ ಪ್ರಥಮ 500KVA ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ title=
500KVA ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣೆ

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಿರ್ಮಿಸಿರುವ 500 ಕೆವಿಎ ಭೂಗತ ಪರಿವರ್ತಕ ಕೇಂದ್ರದ ಲೋಕಾರ್ಪಣಾ ಕಾರ್ಯಕ್ರಮವು ಮಂಗಳವಾರ(ಸೆಪ್ಟೆಂಬರ್ 5) ನಡೆಯಿತು. ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ 1.97 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ವಿಭಾಗದಲ್ಲಿ ಈ ಭೂಗತ ಪರಿವರ್ತಕ ಕೇಂದ್ರವನ್ನು ಸ್ಥಾಪಿಸಲಾಗಿದೆ. 

ಇದರಡಿ ಬೆಸ್ಕಾಂ 1.33 ಕೋಟಿ ರೂ. ವೆಚ್ಚದಲ್ಲಿ 500 ಕೆವಿಎ ತೈಲರಹಿತ ಪರಿವರ್ತಕ, 8ವೇ ಸಾಲಿಡ್ ಸ್ಟೇಟ್ ರಿಂಗ್ ಮೈನ್ ಯುನಿಟ್, 5ವೇ ಎಲ್.ಟಿ.ವಿತರಣಾ ಪೆಟ್ಟಿಗೆ, 2 ಕೆವಿಎ ಯುಪಿಎಸ್, 1 ಹೆಚ್‍ಪಿ ವಾಟರ್ ಪಂಪ್ (ಸ್ವಯಂಚಾಲಿತ), ಹವಾನಿಯಂತ್ರಣ ವ್ಯವಸ್ಥೆ (ಸ್ವಯಂಚಾಲಿತ), ವಿದ್ಯುತ್ ದೀಪಗಳು, ಅಗ್ನಿಶಾಮಕ ಉಪಕರಣಗಳು ಸೇರಿದಂತೆ ಭೂಗತ ಪರಿವರ್ತಕ ಕೇಂದ್ರಕ್ಕೆ ಅವಶ್ಯವಿರುವ ಎಲ್ಲಾ ವಿದ್ಯುತ್ ಉಪಕರಣಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: ಸಿಎಸ್ಆರ್ ಅನುದಾನದಿಂದ ಕನಿಷ್ಠ 3 ಸಾವಿರ ಶಾಲೆಗಳ ನಿರ್ಮಾಣ: ಡಿಸಿಎಂ ಡಿ.ಕೆ.ಶಿವಕುಮಾರ್

ಈ ಯೋಜನೆಯ ಸಿವಿಲ್‌ ಕಾಮಗಾರಿಗೆ ಬಿಬಿಎಂಪಿ 64 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ. ಅಲ್ಲದೇ ಈ ಯೋಜನೆಯಡಿ ವಿತರಣ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್‍ಗಳು, ಫಿಡರ್ ಪಿಲ್ಲರ್ ಬಾಕ್ಸ್‍ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದ್ದು, ಇದರಿಂದ  ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್‌ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ. ಗುಣಮಟ್ಟದ ವಿದ್ಯುತ್ ಪೂರೈಸಲು ಕೂಡ ಈ ಯೋಜನೆ ಸಹಕಾರಿಯಾಗಲಿದೆ.

ಮಾಜಿ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: ಚುನಾವಣೆ ವೇಳೆ ಹಿಂದೂಗಳಾಗುವ ಕಾಂಗ್ರೆಸ್ ನಾಯಕರಿಂದ ಹಿಂದೂ ಧರ್ಮದ ಅವಹೇಳನ: ಬಿಜೆಪಿ ಆಕ್ರೋಶ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News