ಫೆ.12 ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ, 5000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

Written by - Zee Kannada News Desk | Last Updated : Feb 9, 2022, 07:03 PM IST
  • ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಫೆ.12 ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ, 5000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ  title=

ಕೊಪ್ಪಳ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ :  IND vs WI: ಟೀಂ ಇಂಡಿಯಾದಲ್ಲಿ 3 ಮಾರಕ ಆಟಗಾರರ ದಿಢೀರ್ ಎಂಟ್ರಿ; , ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತ

ಫೆ.12 ರಂದು ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಉದ್ಯೋಗ ಮೇಳವು ನಡೆಯಲಿದೆ.ಈ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಸುಮಾರು 5000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದ್ದು, ಬಿ.ಇ, ಬಿಕಾಂ, ಬಿ.ಎಸ್‌ಸಿ, ಬಿಎ, ಬಿಸಿಎ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೊಮಾ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಯ ನಕಲು ಪ್ರತಿ, ಇತ್ತೀಚಿನ 02 ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ರೆಸ್ಯುಮ್‌ನ 5 ಪ್ರತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತ ಉದ್ಯೋಗಾಕಾಂಕ್ಷಿಗಳು ವೆಬ್‌ಸೈಟ್ https://skillconnect.kaushalkar.com/app/gulbarga-jobfair ಲಿಂಕ್‌ನ ಮೂಲ ತಮ್ಮ ಸ್ವ-ವಿವರಗಳ ಮಾಹಿತಿಯನ್ನು ಭರ್ತಿ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು.

ಇದನ್ನೂ ಓದಿ :  IPL 2022 Mega Auction ನಲ್ಲಿ Unsold ಆಗ್ತಾರೆ ಈ 3 ಸ್ಟಾರ್ ಆಟಗಾರರು!

ಅಭ್ಯರ್ಥಿಗಳು ತಮ್ಮ ರೆಸ್ಯುಮ್‌ಗಳನ್ನು ಇ-ಮೇಲ್: ksdc.recruitment@gmail.com ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8277895931 ಗೆ ಸಂಪರ್ಕಿಸಬಹುದೆಂದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News