ಬೆಂಗಳೂರು: ಇದೇ ತಿಂಗಳ 7ರಂದು ಮಂಗಳೂರಿನಲ್ಲಿ ಸಂಘ-ಪರಿವಾರದವರ ಹತ್ಯೆ ಖಂಡಿಸಿ ಬಿಜೆಪಿ ಯುವ ಮೋರ್ಚ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಸರ್ಕಾರ ನಿರ್ಬಂಧ ಹೇರಿತ್ತು. ಇದನ್ನು ಲೆಕ್ಕಿಸದ ಬಿಜೆಪಿ ಪ್ರಮುಖರು ಮತ್ತು ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರ್ಯಾಲಿಗೆ ಚಾಲನೆ ನೀಡಲು ಮುಂದಾದರು. ಇದನ್ನು ತಡೆಹಿಡಿಯಲು ಪ್ರಯತ್ನಿಸಿದ್ದಕ್ಕೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಪ್ರತಾಪ್ ಸಿಂಹ, ಮಾಜಿ ಗೃಹ ಸಚಿವ ಆರ್.ಅಶೋಕ್ ಪ್ರತಿಭಟನೆ ನಡೆಸಲು ಮುಂದಾದರು.
ಈ ಸಂದರ್ಭದಲ್ಲಿ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ನೂಕು-ನುಗ್ಗಲು, ವಾಗ್ವಾದ ಏರ್ಪಟ್ಟಿತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಯುವಮೊರ್ಚ ಅಧ್ಯಕ್ಷ ಪ್ರತಾಪ್ ಸಿಂಹ, ಶೋಭಾ, ಆರ್.ಅಶೋಕ್ ರನ್ನು ಪೋಲೀಸ್ ವಶಕ್ಕೆ ಪಡೆದಿದ್ದಾರೆ.