ಬೆಂಗಳೂರು: ಜಿಂದಾಲ್‌ಗೆ ಕಂಪನಿಗೆ 3,667 ಎಕರೆ ಭೂಮಿ ನೀಡುವ ಮೈತ್ರಿ ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದಿನಿಂದ ಎರಡು ದಿನಗಳ ಕಾಲ ಬಜೆಪಿ ಅಹೋರಾತ್ರಿ ಧರಣಿ ಆರಂಭಿಸಿದೆ.
ಬೆಂಗಳೂರಿನ ಆನಂದ್ ರಾವ್ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಮಾರ್ಚನೆ ಮಾಡುವ ಮೂಲಕ ಧರಣಿಗೆ ಚಾಲನೆ ನೀಡಲಾಗಿದ್ದು, 100ಕ್ಕೂ ಅಧಿಕ ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.
Protesting against the CONgress - JD (S) Government's decision to sell 3666 Acres of mining land to Jindal Company at throw away prices.#CoJaJindalNexus is the result of this Corrupt Government that is in its last legs out to loot the State at every available opportunity. pic.twitter.com/zaVDGVbyJk
— C T Ravi 🇮🇳 ಸಿ ಟಿ ರವಿ (@CTRavi_BJP) June 14, 2019
ಕಳೆದ ಒಂದು ವರ್ಷದಿಂದ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಲೂಟಿ ಮಾಡಿದೆ.ಹಗರಣಗಳು ಕಣ್ಣೆದುರೇ ಇದ್ದರೂ ಸಿದ್ದರಾಮಯ್ಯ ಅವರು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಸಾಲ ಮನ್ನಾ ಹೆಸರಿನಲ್ಲಿ ರೈತರನ್ನು ವಂಚಿಸಲಾಗುತ್ತಿದ್ದು, ಬರನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಧರಣಿ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ನಾಯಕರಾದ ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ, ಶ್ರೀರಾಮುಲು, ಕೋಟಾ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ , ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ ಸೇರಿದಂತೆ ಅನೇಕರು ಧರಣಿಯಲ್ಲಿ ಭಾಗಿಯಾಗಿದ್ದಾರೆ.