ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರೋಧಿಸಿ ಬಿಜೆಪಿಯಿಂದ ಕರಾಳ ದಿನಾಚರಣೆ

      

Last Updated : May 23, 2018, 01:10 PM IST
 ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರೋಧಿಸಿ ಬಿಜೆಪಿಯಿಂದ ಕರಾಳ ದಿನಾಚರಣೆ  title=
ಬೆಂಗಳೂರ: ಇಂದು ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರದ  ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ  ಬಿಜೆಪಿ ಬುಧುವಾರವನ್ನು ಕರಾಳ ದಿನಾಚರಣೆಯನ್ನಾಗಿ ಆಚರಿಸುತ್ತಿದೆ.
 
ನಗರದ ಆನಂದ್ ರಾವ್ ಸರ್ಕಲ್ ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಈ ದಿನವನ್ನು ಜನಮತ ವಿರೋಧಿ ದಿನವನ್ನಾಗಿ ಆಚರಿಸುತ್ತಿದ್ದಾರೆ.ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರ್ ಅಶೋಕ್ ಮತ್ತು ಇತರರು ಭಾಗವಹಿಸಿದ್ದರು.

ಈ ಬಾರಿಯ ವಿಧಾನಸಭೆಯಲ್ಲಿ ಬಿಜೆಪಿಯು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು ಈ ಕಾರಣದಿಂದಲೇ ರಾಜ್ಯಪಾಲರು ಸಹಿತ ಬಿಜೆಪಿಗೆ ಸರ್ಕಾರ ರಚಿಸಿಸಲು ಆಹ್ವಾನ ನೀಡಿದ್ದರು.ಆದರೆ ಯಡಿಯೂರಪ್ಪನವರು ಬಹುಮತ ಸಾಬೀತುಪಡಿಸದ ಹಿನ್ನಲೆಯಲ್ಲಿ ಕೇವಲ 55 ಗಂಟೆಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

 
ಇದಾದನಂತರ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಬಹುಮತ ಒಂದಾಗಿ ಸರ್ಕಾರ ರಚಿಸಲು ಹಕ್ಕು ಮಂಡನೆಗೆ ಮುಂದಾಗಿದ್ದವು.ಈ ಹಿನ್ನಲೆಯಲ್ಲಿ ಇಂದು ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಲ್ಲಿಸಲಿದ್ದಾರೆ.
 

Trending News