Udupi Gang War: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕ್ರಿಮಿನಲ್‌ಗಳು ವಿಜೃಂಭಿಸುವಂತಾಗಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಉಡುಪಿ ಗ್ಯಾಂಗ್ ವಾರ್ ಘಟನೆ ಸಂಬಂಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಅವರು ಕಿಡಿಕಾರಿದ್ದಾರೆ.
ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್‌ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಉಡುಪಿ, ದಕ್ಷಿಣ ಕನ್ನಡದಂಥ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡೀ ರಾಜ್ಯದಲ್ಲಿ ಈಗ ಕಾನೂನು-ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್‌ಗಳು ವಿಜೃಂಭಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ, ದಕ್ಷಿಣ ಕನ್ನಡದಂಥ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು ವಿಜೃಂಭಿಸುವಂತಾಗಿದೆ. @siddaramaiah . (2/6)
— Sunil Kumar Karkala (Modi Ka Parivar) (@karkalasunil) May 25, 2024
ಇದನ್ನೂ ಓದಿ: ವಿದೇಶಕ್ಕೆ ನಿಮ್ಮ ಮಗ ಸಾಯಲಿ ಅಂತಲೇ ಕಳಿಸಿದ್ಧಿರಾ? ಸಿಎಂ ಸಿದ್ದರಾಮಯ್ಯನವರಿಗೆ ಹೆಚ್.ಡಿ.ಕುಮಾರಸ್ವಾಮಿ ತೀಕ್ಷ್ಣ ಪ್ರಶ್ನೆ!!
- ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಎಂದು ರಾಜೀನಾಮೆ ಪಡೆಯುತ್ತೀರಿ ?- ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ ?- ಕ್ರಿಮಿನಲ್ ಗಳಿಗೂ ನಿಮ್ಮ ಸರ್ಕಾರಕ್ಕೂ ಒಳ ಒಪ್ಪಂದ ಏರ್ಪಟ್ಟಿದ್ದರೆ ಮಾಸಿಕ ಹಫ್ತಾ ಎಷ್ಟು ನಿಗದಿ ಮಾಡಿದ್ದೀರಿ ? (4/6)
— Sunil Kumar Karkala (Modi Ka Parivar) (@karkalasunil) May 25, 2024
ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ. ಸಿಎಂ ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ನಿಮಗೆ ಸ್ವಾಗತ. ಆದರೆ ಇಲ್ಲಿಂದ ಹೊರಡುವುದಕ್ಕೆ ಮೊದಲು ಕೆಲ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿ. ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಎಂದು ರಾಜೀನಾಮೆ ಪಡೆಯುತ್ತೀರಿ? ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ? ಕ್ರಿಮಿನಲ್‌ಗಳಿಗೂ ನಿಮ್ಮ ಸರ್ಕಾರಕ್ಕೂ ಒಳ ಒಪ್ಪಂದ ಏರ್ಪಟ್ಟಿದ್ದರೆ ಮಾಸಿಕ ಹಫ್ತಾ ಎಷ್ಟು ನಿಗದಿ ಮಾಡಿದ್ದೀರಿ?ʼ ಎಂದು ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.
Very bad state of affairs
Gang War at Udupi
Incident happened recently late night, 2 groups fought on Udupi Manipal Highway near Kunjibettu
Where is the younger generation heading ???
Stringent action should be taken against all these culprits pic.twitter.com/EVAstmKumR
— Dr Durgaprasad Hegde (@DpHegde) May 25, 2024
@siddaramaiah ನವರೇ ನಿಮಗೊಂದು ನೇರ ಸವಾಲು ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟಾರ್ ಗಳನ್ನು ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ ? ಸಣ್ಣ ಕಾರಣಕ್ಕೆ ಶಾಸಕರ ನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂದಿಸುವ ಗಂಡೆದೆ ಇಲ್ಲವೇ ? (6/6)
— Sunil Kumar Karkala (Modi Ka Parivar) (@karkalasunil) May 25, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪೊಲೀಸರ ಕೈ ಕಟ್ಟಿ ಹಾಕಿದ್ದೀರಾ? ಜನರ ಶಾಂತಿ-ನೆಮ್ಮದಿ ಕಾಪಾಡಲಾರದ ಸರ್ಕಾರ ಅಧಿಕಾರದಲ್ಲಿದ್ದು ಪ್ರಯೋಜನವುಂಟೇ? ಕ್ರಿಮಿನಲ್‌ಗಳ ಅಟ್ಟಹಾಸ ನಿಲ್ಲಿಸದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಭಯವೇಕೆ? ಸಿಎಂ ಸಿದ್ದರಾಮಯ್ಯನವರೇ ನಿಮಗೊಂದು ನೇರ ಸವಾಲು ಈ ಘಟನೆಗೆ ಕಾರಣವಾದ ಗ್ಯಾಂಗ್ ಸ್ಟರ್‌ಗಳನ್ನು ಎಷ್ಟು ಗಂಟೆಯೊಳಗೆ ಬಲಿ ಹಾಕುತ್ತೀರಿ? ಸಣ್ಣ ಕಾರಣಕ್ಕೆ ಶಾಸಕರನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ರೌಡಿಸಂ ಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ: ಗೃಹ ಸಚಿವ ಪರಮೇಶ್ವರ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.