ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾದರೆ ಬಿಜೆಪಿ ಸರ್ಕಾರವೇ ನೇರ ಹೊಣೆ: ಸಿದ್ದರಾಮಯ್ಯ

ತಮಿಳುನಾಡಿನಲ್ಲಿ ಬಿಜೆಪಿಯ ಬಲವರ್ಧನೆಗಾಗಿ ರಾಜ್ಯ ಬಿಜೆಪಿ ಸರ್ಕಾರ ಕನ್ನಡಿಗರಿಗೆ ದ್ರೋಹ ಎಸಗುತ್ತಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದೆ.

Written by - Puttaraj K Alur | Last Updated : Jan 11, 2022, 01:34 PM IST
  • ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾದರೆ ಅದಕ್ಕೆ ಬಿಜೆಪಿ ಕಾರಣವೇ ಹೊರತು ಕಾಂಗ್ರೆಸ್ ಅಲ್ಲ
  • ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಬಿಜೆಪಿ ಸರ್ಕಾರ ಸೂಕ್ತವಾಗಿ ನಿರ್ವಹಿಸಿಲ್ಲ
  • ನಮ್ಮ ಮೇಲೆ ಎಷ್ಟು ಕೇಸು ದಾಖಲಿಸುತ್ತದೋ ದಾಖಲಿಸಲಿ, ಎಲ್ಲದಕ್ಕೂ ಕಾನೂನಿನ ಮೂಲಕವೇ ಉತ್ತರ ನೀಡುತ್ತೇವೆ
ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾದರೆ ಬಿಜೆಪಿ ಸರ್ಕಾರವೇ ನೇರ ಹೊಣೆ: ಸಿದ್ದರಾಮಯ್ಯ  title=
ಬಿಜೆಪಿ ಸರ್ಕಾರದ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾದರೆ ಬಿಜೆಪಿ ಸರ್ಕಾರ(BJP Government)ವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆಯ 3ನೇ ದಿನವಾದ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಾದರೆ ಅದಕ್ಕೆ ಬಿಜೆಪಿ ಕಾರಣವೇ ಹೊರತು ಕಾಂಗ್ರೆಸ್ ಅಲ್ಲವೆಂದು ಹೇಳಿದ್ದಾರೆ.

ರಾಜ್ಯದಲ್ಲಿನ ಕೋವಿಡ್(COVID-19) ಪರಿಸ್ಥಿತಿಯನ್ನು ಸರ್ಕಾರ ಸೂಕ್ತವಾಗಿ ನಿರ್ವಹಿಸಿಲ್ಲ. ಬಿಜೆಪಿ ನಾಯಕರೇ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಈಗ ನಾವು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡುತ್ತಿರುವ ವೇಳೆ ಲಾಕ್ ಡೌನ್(Lockdown) ನಾಟಕ ಆರಂಭವಾಗಿದೆ ಅಂತಾ ಸಿದ್ದರಾಮಯ್ಯ ದೂರಿದ್ದಾರೆ.

ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಎಫೆಕ್ಟ್ :  BMTC ಗೆ ₹6 ಕೋಟಿ, KSRTC ಗೆ 10 ಕೋಟಿ ಆದಾಯ ನಷ್ಟ! 

ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಸಿದ್ದರಾಮಯ್ಯ(Siddaramaiah), ‘ಮೇಕೆದಾಟು ಯೋಜನೆ ಜಾರಿಯಾಗಿ ಎರಡೂವರೆ ಕೋಟಿ ಕನ್ನಡಿಗರಿಗೆ ಅನುಕೂಲವಾಗಲಿ ಎಂದು ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ನಮ್ಮ ಪಾದಯಾತ್ರೆಯಿಂದ ಜನ ಜಾಗೃತರಾಗುತ್ತಾರೆಂದು ಹೆದರಿ ನಾನೂ ಸೇರಿದಂತೆ ಪಕ್ಷದ 30 ಜನರ ಮೇಲೆ ರಾಜ್ಯ ಬಿಜೆಪಿ ಸರ್ಕಾರ ಪ್ರಕರಣ ದಾಖಲಿಸಿದೆ. ಕೊರೊನಾ ತಡೆಗಟ್ಟುವುದೇ ಬಿಜೆಪಿ ಸರ್ಕಾರದ ಉದ್ದೇಶವಾಗಿದ್ದರೆ ಸುಭಾಷ್ ಗುತ್ತೇದಾರ್, ಎಂ.ಪಿ.ರೇಣುಕಾಚಾರ್ಯ ಮೇಲೂ ಕೇಸು ದಾಖಲಾಗಬೇಕಿತ್ತು ಅಲ್ಲವೇ? ನಮ್ಮ ಮೇಲೆ ಮಾತ್ರ ಕಾನೂನು ಕ್ರಮ ಏಕೆ? ಸರ್ಕಾರ ಇನ್ನೂ ಎಷ್ಟು ಕೇಸು ದಾಖಲಿಸುತ್ತದೋ ದಾಖಲಿಸಲಿ, ಎಲ್ಲದಕ್ಕೂ ನಾವು ಕಾನೂನಿನ ಮೂಲಕವೇ ಉತ್ತರ ನೀಡುತ್ತೇವೆ’ ಅಂತಾ ಹೇಳಿದ್ದಾರೆ.

‘ತಮಿಳುನಾಡಿನಲ್ಲಿ ಬಿಜೆಪಿಯ ಬಲವರ್ಧನೆಗಾಗಿ ರಾಜ್ಯ ಬಿಜೆಪಿ ಸರ್ಕಾರ ಕನ್ನಡಿಗರಿಗೆ ದ್ರೋಹ ಎಸಗುತ್ತಿದೆ. ಪಾದಯಾತ್ರೆ(Mekedatu Project) ನಡೆದರೆ ತಮ್ಮ ಈ ಮೋಸ ಬಯಲಾಗಬಹುದು ಎಂಬ ಭಯ ಬಿಜೆಪಿಯವರನ್ನು ಕಾಡಲು ಆರಂಭವಾಗಿದೆ.  ಪಾದಯಾತ್ರೆ(Mekedatu Padayatra)ಯನ್ನು ತಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಬಿಜೆಪಿ ಸರ್ಕಾರದಿಂದ ನಡೆಯುತ್ತಿದೆ. ಸರ್ಕಾರದ ಯಾವುದೇ ಬೆದರಿಕೆ ತಂತ್ರಗಳಿಗೆ ನಾವು ಮಣಿಯದೆ, 11 ದಿನಗಳ ಕಾಲ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ’ ಅಂತಾ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.  

ಇದನ್ನೂ ಓದಿ: DK Shivakumar : ಸಿಎಂ ಮತ್ತು ಸಚಿವ ಸುಧಾಕರ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News