"ಬಿಜೆಪಿ ಸರ್ಕಾರ ಮತ್ತು ಮೋದಿಯವರು ಅಂಬಾನಿ-ಅದಾನಿಗಳ ಜೇಬಿಗೆ ಹಣ ಹಾಕುತ್ತಿದ್ದಾರೆ"

ನಾವು ಬಡವರ ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕುವ ಕಾರ್ಯಕ್ರಮಗಳನ್ನು ರೂಪಿಸಿದೆವು‌. ಕೇಂದ್ರದ ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯವರು ಅಂಬಾನಿ-ಅದಾನಿಗಳ ಜೇಬಿಗೆ ಹಣ ಹಾಕುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ

Written by - Manjunath N | Last Updated : Sep 8, 2023, 12:17 AM IST
  • ದಲಿತರು, ಹಿಂದುಳಿದವರು, ಅಲ್ಪ ಸಂಖ್ಯಾತರು, ಮಹಿಳೆಯರು, ದುಡಿಯುವ ವರ್ಗಗಳು, ಶ್ರಮಿಕರು ಆತಂಕ, ಅಭದ್ರತೆಯಲ್ಲಿ ಬದುಕುವಂಥಾ ಸ್ಥಿತಿಗೆ ದೇಶವನ್ನು ದೂಡಿದ್ದರು.
  • ಬೆವರಿನ ಸಂಸ್ಕೃತಿಯ ಎಲ್ಲರನ್ನೂ ಒಟ್ಟುಗೂಡಿಸುವ ಸಲುವಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯಿತು
  • ಇಬ್ಬರೂ ಬಿಜೆಪಿಯವರೇ. ಜಿಲ್ಲೆಗೆ ಅನ್ಯಾಯ ಆಗಿದ್ದು ಇದೇ ಬಿಜೆಪಿಯವರಿಂದ. ಇವರ ಜತೆ ಕೈ ಜೋಡಿಸಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ
"ಬಿಜೆಪಿ ಸರ್ಕಾರ ಮತ್ತು ಮೋದಿಯವರು ಅಂಬಾನಿ-ಅದಾನಿಗಳ ಜೇಬಿಗೆ ಹಣ ಹಾಕುತ್ತಿದ್ದಾರೆ" title=

ಬೆಂಗಳೂರು: ನಾವು ಬಡವರ ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕುವ ಕಾರ್ಯಕ್ರಮಗಳನ್ನು ರೂಪಿಸಿದೆವು‌. ಕೇಂದ್ರದ ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿಯವರು ಅಂಬಾನಿ-ಅದಾನಿಗಳ ಜೇಬಿಗೆ ಹಣ ಹಾಕುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ

ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರು ಜೋಡಣೆ ಮಾಡುವ ಸಲುವಾಗಿ ನಡೆದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ರಾಮನಗರದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಹೆಜ್ಜೆಹಾಕಿ, ನಂತರ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಇದನ್ನೂ ಓದಿ : ದೇವಾಲಯಗಳ ಸ್ವಚ್ಛತೆಗೆ ಮುಜರಾಯಿ ಇಲಾಖೆ ಖಡಕ್ ನಿರ್ಧಾರ..!!

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶದವರು.

ಅತ್ಯಂತ ಧರ್ಮವಂತರಾಗಿ ಬದುಕುತ್ತಿದ್ದ ಪುಣ್ಯಾತ್ಮ ಮಹಾತ್ಮ ಗಾಂಧಿಯನ್ನು ಗುಂಡಿಟ್ಟು ಕೊಲ್ಲುವಂಥಾದ್ದು ಏನಾಗಿತ್ತು ? ಗಾಂಧಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದೇ ತಪ್ಪಾಯ್ತಾ? ಗಾಂಧಿ ಬ್ರಿಟಿಷರನ್ನು ವಿರೋಧಿಸಿದರು ಎನ್ನುವ ಕಾರಣಕ್ಕೆ ಗಾಂಧಿಯನ್ನು ಕೊಂದರೆ? ಎಂದು ಅವರು ಪ್ರಶ್ನಿಸಿದ್ದಾರೆ.

ಮೋದಿ ಅವರು ಪ್ರಧಾನಿ ಆದ ಬಳಿಕ ಭಾರತೀಯರ ಭಾವನೆಗಳನ್ನು ಕೆರಳಿಸಿ, ಭಾರತೀಯ ಸಮಾಜವನ್ನು ವಿಭಜಿಸಿ, ಭಾರತೀಯರ ಹೃದಯಗಳನ್ನು ಒಡೆಯುವ ಮೂಲಕ ಎಷ್ಟಾಗುತ್ತೋ ಅಷ್ಟು ಮತ ಗಿಟ್ಟಿಸಲು ಯತ್ನಿಸುತ್ತಿದ್ದಾರೆ. ಭಾರತೀಯರನ್ನು ವಿಭಜಿಸಿ, ಹಿಂಸಿಸಿ ಮತ ಗಳಿಸುವ ದುರ್ಗತಿ ಬಿಜೆಪಿಗೆ ಬಂದಿದೆ.

ದಲಿತರು, ಹಿಂದುಳಿದವರು, ಅಲ್ಪ ಸಂಖ್ಯಾತರು, ಮಹಿಳೆಯರು, ದುಡಿಯುವ ವರ್ಗಗಳು, ಶ್ರಮಿಕರು ಆತಂಕ, ಅಭದ್ರತೆಯಲ್ಲಿ ಬದುಕುವಂಥಾ ಸ್ಥಿತಿಗೆ ದೇಶವನ್ನು ದೂಡಿದ್ದರು. ಭಾರತವನ್ನು ಕಟ್ಟಿದ ಸಮುದಾಯಗಳನ್ನು ಛಿದ್ರಗೊಳಿಸುವುದನ್ನು ವಿರೋಧಿಸಿ ಬೆವರಿನ ಸಂಸ್ಕೃತಿಯ ಎಲ್ಲರನ್ನೂ ಒಟ್ಟುಗೂಡಿಸುವ ಸಲುವಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯಿತು.

ರಾಮನಗರ ಜಿಲ್ಲೆಯ ಇವತ್ತಿನ ದುಸ್ಥಿತಿಗೆ ಯಾರು ಕಾರಣ? ಇಷ್ಟು ವರ್ಷ ರಾಮನಗರ ಜಿಲ್ಲೆ ಯಾರ ಹಿಡಿತದಲ್ಲಿತ್ತು? ಎಂದು ತಮಗೆಲ್ಲ ಗೊತ್ತಿದೆ. ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ರಾಮನಗರ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವಕ್ಕೆ ಜಿಲ್ಲೆಯ ಜನ ಸಾಕ್ಷಿಯಾಗುತ್ತಾರೆ. ಸಂಸದ ಡಿ.ಕೆ.ಸುರೇಶ್ ಅವರು ಬಹಳ ಕೆಲಸ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಒಟ್ಟಾದರೂ ಡಿ.ಕೆ.ಸುರೇಶ್ ಅವರನ್ನು ಸೋಲಿಸಲು ಸಾಧ್ಯವಿಲ್ಲ. ರಾಮನಗರದ ಅಭಿವೃದ್ಧಿ ಪರ್ವವನ್ನು ವೇಗಗೊಳಿಸುವ ಜವಾಬ್ದಾರಿ ನಮ್ಮ ಸರ್ಕಾರದ್ದು. ನಾವು ಇದನ್ನು ಮಾಡಿ ತೋರಿಸ್ತೇವೆ. ಜನವರಿ ವೇಳೆಗೆ ರಾಮನಗರಕ್ಕೆ ವಿಶೇಷ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ : 60 ಲಕ್ಷ‌ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ : ಸಚಿವೆ ಲಕ್ಷ್ಮೀ ಹಬ್ಬಾಳ್ಕರ್ ಮಾಹಿತಿ

ಹಿಂದಿನ ಸರ್ಕಾರದ ಸಚಿವ ಅಶ್ವಥ್ ನಾರಾಯಣ್ ಜಿಲ್ಲೆಗೆ ಏಕೆ ಮೆಡಿಕಲ್ ಕಾಲೇಜು ಕೊಡಲಿಲ್ಲ? ಜಿಲ್ಲೆಗೆ ಬಂದಿದ್ದ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಗೊಂಡು ಹೋದದ್ದು ಸಚಿವ ಸುಧಾಕರ್. ಇಬ್ಬರೂ ಬಿಜೆಪಿಯವರೇ. ಜಿಲ್ಲೆಗೆ ಅನ್ಯಾಯ ಆಗಿದ್ದು ಇದೇ ಬಿಜೆಪಿಯವರಿಂದ. ಇವರ ಜತೆ ಕೈ ಜೋಡಿಸಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ಇಬ್ಬರಿಗೂ ನೈತಿಕತೆ ಇಲ್ಲ. ರಾಮನಗರದಲ್ಲಿ, ಕನಕಪುರದಲ್ಲಿ ಎರಡೂ ಕಡೆ ಮೆಡಿಕಲ್ ಕಾಲೇಜು ಬೇಕು ಎಂದರೆ ಎರಡೂ ಕಡೆ ಮಾಡಲು ನಾವು ಸಿದ್ಧ ಎಂದು ಭರವಸೆ ನೀಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News