ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಅಥಣಿಯಲ್ಲಿ ಬುಧವಾರ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಎಂದರೆ ಬದ್ಧತೆ, ಬಸವಣ್ಣನವರು ಕಂಡ ಸಮಾನತೆಯ ಕನಸನ್ನು ನನಸು ಮಾಡುವ ಪಕ್ಷ.

Written by - Prashobh Devanahalli | Edited by - Bhavishya Shetty | Last Updated : Mar 6, 2024, 03:43 PM IST
    • ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭ
    • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
    • 1.20 ಕೋಟಿ ಮನೆಯ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ
ಕಾಂಗ್ರೆಸ್ ಅಭಿವೃದ್ಧಿ ನೋಡಿ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   title=
Lakshmi Hebbalkar

ಅಥಣಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿಯ ಜೊತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದರೂ ಬಿಜೆಪಿಯವರ ಕಣ್ಣಿಗೆ ಇದೆಲ್ಲ ಕಾಣುತ್ತಿಲ್ಲವೇ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

ಅಥಣಿಯಲ್ಲಿ ಬುಧವಾರ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಂಗ್ರೆಸ್ ಎಂದರೆ ಬದ್ಧತೆ, ಬಸವಣ್ಣನವರು ಕಂಡ ಸಮಾನತೆಯ ಕನಸನ್ನು ನನಸು ಮಾಡುವ ಪಕ್ಷ. ಆದರೆ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಬಗ್ಗೆ ಬಹಳಷ್ಟು ಕೀಳಾಗಿ ಮಾತನಾಡಿದರು. ಗ್ಯಾರಂಟಿ ಸುಳ್ಳು ಎಂದರು, ಗ್ಯಾರಂಟಿಯಿಂದ ಮಹಿಳೆಯರು ದೇವಸ್ಥಾನಗಳಿಗೆ ತಿರುಗುತ್ತಿದ್ದಾರೆ, ಗಂಡಸರು ಕುಡಿದು ಹಾಳಾಗುತ್ತಿದ್ದಾರೆ ಎಂದು ಅವಮಾನ ಮಾಡಿದರು. ಆದರೆ ಮಹಿಳಾ ಸ್ವಾವಲಂಬನೆ ಕಾಂಗ್ರೆಸ್ ಬದ್ಧತೆ. ಅದನ್ನು ಅತ್ಯಂತ ಸಮರ್ಥವಾಗಿ ಈಡೇರಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: IPL 2024ರಲ್ಲಿ ನಾಯಕತ್ವದ ಜೊತೆ ಧೋನಿಗೆ ಮತ್ತೊಂದು ಜವಾಬ್ದಾರಿ: ಸಸ್ಪೆನ್ಸ್ ರಿವೀಲ್ ಮಾಡಿದ ಮಾಹಿ

1.20 ಕೋಟಿ ಮನೆಯ ಯಜಮಾನಿಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಎಲ್ಲ 5 ಗ್ಯಾರಂಟಿಗಳನ್ನು ಈಡೇರಿಸಿ ಕಾಂಗ್ರೆಸ್ ಪಕ್ಷ ಜನಪ್ರಿಯತೆ ಪಡೆಯುತ್ತಿರುವುದನ್ನು ಬಿಜೆಪಿಯವರಗೆ ಸಹಿಸಿಕೊಳ್ಳಲು ಆಗುವುದಿಲ್ಲ. 5 ಗ್ಯಾರಂಟಿ ಯೋಜನೆಗೆ ತಿಂಗಳಿಗೆ 5 ಸಾವಿರ ಕೋಟಿ ರೂ ನೀಡಲಾಗುತ್ತಿದೆ. ಜೊತೆಗೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತಿರುವುದು ಬಿಜೆಪಿಯವರಿಗೆ ಕಣ್ಣಿಗೆ ಕಾಣುತ್ತಿಲ್ಲ. ಅವರಿಗೆ ಭ್ರಮನಿರಸನವಾಗಿದೆ ಎಂದು ಹೇಳಿದರು.

ಕೇವಲ ಶ್ರೀಮಂತರು ಶ್ರೀಮಂತರಾದರೆ ರಾಷ್ಟ್ರ ಬೆಳೆಯುವುದಿಲ್ಲ. ಬಡವರ ಹೊಟ್ಟೆ ತುಂಬಬೇಕು, ಬಡವರು ಸ್ವಾವಲಂಬಿ ಜೀವನ ನಡೆಸಬೇಕು. ಅಂತಹ ಅವಕಾಶವನ್ನು ಕಾಂಗ್ರೆಸ್ ಸರಕಾರ ನೀಡುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಲಕ್ಷ್ಮಣ ಸವದಿಯವರು ತಮ್ಮ ಕ್ಷೇತ್ರದ ಜನರಿಗೆ ನೀರಾವರಿ ಯೋಜನೆ ಬೇಕೆನ್ನುವ ಬೇಡಿಕೆಯನ್ನು ಮಾತ್ರ ಕಾಂಗ್ರೆಸ್ ಸೇರುವಾಗ ಇಟ್ಟಿದ್ದರು. ಅದರಂತೆ ಈಗ 1486 ಕೋಟಿ ರೂ.ಗಳ ಈ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಮಂಜೂರಾಗಿದೆ. ನನ್ನ ಕ್ಷೇತ್ರಕ್ಕೆ ಕೂಡ 800 ಕೋಟಿ ರೂ.ಗಳ ಯೋಜನೆ ಮಂಜೂರು ಮಾಡಲಾಗಿದೆ. 2018ರಲ್ಲೇ ಯೋಜನೆ ಮಂಜೂರಾಗಿತ್ತು. ಆದರೆ ನಂತರ ಬಂದ ಸರಕಾರ ನನಗೆ ಹೆಸರು ಬರುತ್ತದೆ ಎಂದು ಹೇಳಿ ನನ್ನ ಕ್ಷೇತ್ರದ ಯೋಜನೆ ತಡೆದಿದ್ದರು. ಈಗ ಮತ್ತೆ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರು ಯೋಜನೆಗೆ ಮಂಜೂರಾತಿ ನೀಡಿದ್ದಾರೆ. ಅವರಿಗೆ ನಾನು ಕೋಟಿ ಕೋಟಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಬರುವ ಲೋಕಸಭಾ ಚುನಾವಣೆಯಲ್ಲಿ ನಮಗೆ ಆಶೀರ್ವಾದ ಮಾಡಿ ಎಂದು ಕೋರಿದರು.

ಇದನ್ನೂ ಓದಿ: ಅಂದು ಭಾರತ ವಿಶ್ವಕಪ್ ಗೆದ್ದಿದ್ದೇ ತಡ… ವಕೀಲರ ಮಗಳನ್ನೇ ಪಟಾಯಿಸಿ ಮದುವೆಯಾದ ಟೀಂ ಇಂಡಿಯಾದ ಸ್ಟಾರ್ ಆರಂಭಿಕ ಈತ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿದರು. ಶಾಸಕರಾದ ಲಕ್ಷ್ಮಣ್ ಎಂ‌ ಸವದಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಬ ಹಟ್ಟಿಹೊಳಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಶಾಸಕ ಮಹೇಂದ್ರ ತಮ್ಮಣ್ಣವರ, ಅಶೋಕ ಮ ಪಟ್ಟಣ, ಮಹಾರಾಷ್ಟ್ರದ ಮಾಜಿ ಸಚಿವ ವಿಶ್ವಜಿತ್ ಕದಂ ಸೇರಿ ಹಲವು ನಾಯಕರು ವೇದಿಕೆಯಲ್ಲಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News