ಚುನಾವಣೆ ನಂತರ ಬಿಜೆಪಿ ಆಪರೇಶನ್ ಕಮಲಕ್ಕೆ ಯತ್ನಿಸಬಹುದು, ಆದರೆ ಅದು ಕೈಗೂಡುವುದಿಲ್ಲ- ಸಿದ್ದರಾಮಯ್ಯ

ಸಾರ್ವತ್ರಿಕ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸರಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಪರೇಷನ್ ಕಮಲವನ್ನು ಪುನರುಜ್ಜೀವನಗೊಳಿಸುವ ಸಾಧ್ಯತೆ ಇದೆ, ಆದರೆ ಯಶಸ್ವಿಯಾಗುವುದಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. 

Last Updated : Apr 16, 2019, 02:31 PM IST
ಚುನಾವಣೆ ನಂತರ ಬಿಜೆಪಿ ಆಪರೇಶನ್ ಕಮಲಕ್ಕೆ ಯತ್ನಿಸಬಹುದು, ಆದರೆ ಅದು ಕೈಗೂಡುವುದಿಲ್ಲ- ಸಿದ್ದರಾಮಯ್ಯ  title=

ಬೆಂಗಳೂರು: ಸಾರ್ವತ್ರಿಕ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸರಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಪರೇಷನ್ ಕಮಲವನ್ನು ಪುನರುಜ್ಜೀವನಗೊಳಿಸುವ ಸಾಧ್ಯತೆ ಇದೆ, ಆದರೆ ಯಶಸ್ವಿಯಾಗುವುದಿಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. 

ಕಾಂಗ್ರೆಸ್-ಜನತಾ ದಳ (ಜಾತ್ಯತೀತ) ಸರಕಾರಕ್ಕೆ ಬೆದರಿಕೆ ಇಲ್ಲ, ಅದು ಸ್ಥಿರವಾಗಿದೆ ಮತ್ತು ಬಿಕ್ಕಟ್ಟು ಇಲ್ಲದೆ ಸಲೀಸಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸೋಮವಾರ ಪಿಟಿಐಗೆ ತಿಳಿಸಿದರು."ಅವರು (ಬಿಜೆಪಿ) ಮತ್ತೆ ಆಪರೇಷನ್ ಕಮಲಕ್ಕೆ ಪ್ರಯತ್ನಿಸಬಹುದು ಮತ್ತು ಅವರು ಯಶಸ್ವಿಯಾಗಬಹುದೆಂದು ನನಗೆ ಅನಿಸುತ್ತಿಲ್ಲ" ಎಂದು ಸಿದ್ದರಾಮಯ್ಯ ಅವರು ವಿಶೇಷ ಸಂದರ್ಶನದಲ್ಲಿ ಪಿಟಿಐಗೆ ತಿಳಿಸಿದ್ದಾರೆ. 

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಅದು ಆಪರೇಶನ್ ಕಮಲದ ಮೂಲಕ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು " ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಬಿಜೆಪಿ ಉತ್ತಮ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲಾರದ ಕಾರಣ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದ 120 ಸ್ಥಾನಗಳಲ್ಲಿ 102 ಸ್ಥಾನಗಳನ್ನು ಗೆದ್ದಿತ್ತು. ಅದೇ ಸಂಖ್ಯೆಯ ಸ್ಥಾನಗಳನ್ನು ಮತ್ತೆ ಗೆಲ್ಲಲು ಸಾಧ್ಯವೇ?  ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ನೀವು ಹೇಗೆ ಹೇಳುತ್ತೀರಿ ?, "ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

"ಗುಜರಾತ್ ನಲ್ಲಿ ಕಳೆದ ಬಾರಿ ಬಿಜೆಪಿ 26 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ ಅದು ಸಾಧ್ಯ ಎಂದು ನೀವು ಭಾವಿಸುತ್ತೀರಾ? ಮೋದಿ ಅಲೆ ಎಲ್ಲಿದೆ? ಮೋದಿ ಅಲೆಯನ್ನು ಏಕೆ ಸೃಷ್ಟಿಮಾಡಲಾಗಿದೆ? ಮೋದಿ ಅಲೆಗೆ ಯಾವ ಅಂಶಗಳು ಕಾರಣವಾಗಿವೆ ಎಂಬುದನ್ನು ನಾನು ತಿಳಿಯಬಯಸುತ್ತೇನೆ " ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

Trending News