ನಮ್ಮ ಸರ್ಕಾರ ಬಂದರೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್

ಮುಸಲ್ಮಾನರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇಲ್ಲ. ಧರ್ಮಾಧಾರಿತ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಸಾಧ್ಯವಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

Written by - Ranjitha R K | Last Updated : Apr 26, 2024, 12:57 PM IST
  • ಕಾಂಗ್ರೆಸ್ ವಿರುದ್ದ ಯತ್ನಾಳ್ ಕಿಡಿ
  • ಬಿಜೆಪಿ ಸರ್ಕಾರ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಆದೇಶ
  • ಹುಬ್ಬಳ್ಳಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ
ನಮ್ಮ ಸರ್ಕಾರ ಬಂದರೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್  title=

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗುವುದು ಎಂದು ವಿಜಯಪುರ ಶಾಸಕ ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್  ಹೇಳಿದರು. ನಮ್ಮ ಸರ್ಕಾರ ಬಂದರೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು ಮಾಡಿ ಅದೇ ಮೀಸಲಾತಿಯನ್ನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಿಗೆ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದರು. 

ಮುಸಲ್ಮಾನರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇಲ್ಲ. ಧರ್ಮಾಧಾರಿತ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಸಾಧ್ಯವಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಾವು ಮುಸ್ಲಿಂ  ಮೀಸಲಾತಿ ರದ್ದು ಮಾಡಿಯೇ ಮಾಡುತ್ತೇವೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : Loksabha Electon 2024 : ಮೈಸೂರಿನಲ್ಲಿ ಮತದಾನ‌ ಮಾಡಿ ಬಂದ ವೃದ್ದೆ ಸಾವು
 
ನೇಹಾ ಕೊಲೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಉತ್ತರ ಕೊಟ್ಟ ಅವರು, ಒಂದು ವಾರಗಳ ಕಾಲ ಎಲ್ಲಿ ಹೋಗಿದ್ದರು?  ಅದು ವೈಯಕ್ತಿಕ, ಆಕಸ್ಮಿಕ ಎನ್ನುವಂಥ ಹೇಳಿಕೆ ಯಾಕೆ ನೀಡಿದ್ದರು ಎಂದು ಪ್ರಶ್ನಿಸಿದ್ದಾರೆ.ರಾಹುಲ್ ಗಾಂಧಿ ವಿಜಯಪುರ ಬಂದಾಗ ಹುಬ್ಬಳ್ಳಿಗೂ ಬರಬೇಕಾಗಿತ್ತು, ಸಾಂತ್ವನ ಹೇಳಿ ಹೋಗಬೇಕಾಗಿತ್ತು  ಎಂದಿದ್ದಾರೆ. 

ಇನ್ನು ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಮತದಾನ ಚುರುಕುನಿಂದ ನಡೆದಿದೆ. ಬೆಳಿಗ್ಗೆ 6 ಗಂಟೆಯಿಂದಲೇ ಜನರು ಮತಗಟ್ಟಿಗೆ ಬರುತ್ತಿದ್ದು, ಬೆಂಗಳೂರು ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಮತದಾನ ಆಗಲಿದೆ. 
ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಹೆಚ್ಚು ಮತದಾನ ಆಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು

ಇದನ್ನೂ ಓದಿ : Lok Sabha Election 2024: ಹಸೆಮಣೆ ಏರುವ ಮುನ್ನ ವೋಟ್​ ಮಾಡಿ ಹಕ್ಕು ಚಲಾಯಿಸಿದ ವಧು!!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News