ಇಂದು ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ?

ಇನ್ನೂ 70 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಬೇಕಿರುವ ಬಿಜೆಪಿ.  

Last Updated : Apr 18, 2018, 01:05 PM IST
ಇಂದು ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ? title=

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದು ಬಿಡುಗಡೆಯಾಗುವ ಸಾಧ್ಯತೆ ಇದೆ.

ಮೊದಲ ಪಟ್ಟಿಯಲ್ಲಿ 72 ಹೆಸರು ಪ್ರಕಟಿಸಿದ್ದ ಬಿಜೆಪಿ, ಎರಡನೇ ಪಟ್ಟಿಯಲ್ಲಿ 82 ಅಭ್ಯರ್ಥಿಗಳ ಹೆಸರು ಪ್ರಕಟಿಸಿತ್ತು. 154 ಕ್ಷೇತ್ರಗಳ ಪಟ್ಟಿ ಬಿಡುಗಡೆ ನಂತರ ಬಂಡಾಯದ ಬಿಸಿ ಬೇಗೆಯಿಂದ ಬೇಸತ್ತಿರುವ ಬಿಜೆಪಿ ಇದೀಗ ತನ್ನ ಮೂರನೇ ಪಟ್ಟಿಯಲ್ಲಿ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ. 

ಈ ಸಂಬಂಧ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್‌, ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌ ಅವರು ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಸಭೆ ನಡೆಸಿದರೂ ಒಮ್ಮತಾಭಿಪ್ರಾಯಕ್ಕೆ ಬರಲು ಸಾಧ್ಯವಾಗಲಿಲ್ಲ. ಹಾಗಾಗಿ ಇಂದು ಅಮಿತ್ ಶಾ ಅವರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

Trending News