ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಎ. ರಾಮದಾಸ್ ಕಾರು ಅಪಘಾತ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಪಘಾತ.

Last Updated : Aug 23, 2019, 01:42 PM IST
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಎ. ರಾಮದಾಸ್ ಕಾರು ಅಪಘಾತ title=

ಮಂಗಳೂರು: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಎ. ರಾಮದಾಸ್ ಪ್ರಯಾಣಿಸುತ್ತಿದ್ದ ಕಾರು ದಕ್ಷಿಣ ಕನ್ನಡ ಜಿಲ್ಲೆಯ ಸೂಳ್ಯ ಬಳಿ ಅಪಘಾತಕ್ಕೀಡಾಗಿದೆ.

ಮಾಹಿತಿ ಪ್ರಕಾರ ಶಾಸಕ ರಾಮದಾಸ್ ಅವರು ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ರಾಮದಾಸ್, ಸುಳ್ಯ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಶಾಸಕ ರಾಮದಾಸ್ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

Trending News