ನೇಹಾ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹ

ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದ ನಡ್ಡಾ ಅವರು, ನೇಹಾಳ ಮನೆಗೆ ತೆರಳಿ ತಂದೆ, ಕಾರ್ಪೋರೇಟರ್ ನಿರಂಜನ್ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿದರು.

Written by - Prashobh Devanahalli | Last Updated : Apr 21, 2024, 08:31 PM IST
    • ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದ ನಡ್ಡಾ
    • ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹ
    • ನೇಹಾಳ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ
ನೇಹಾ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹ title=
File Photo

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಿಸಿದರು.

ಇದನ್ನೂ ಓದಿ: KKR vs RCB: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿಗೆ 1 ರನ್ ಗಳ ಅಂತರದ ಸೋಲು

ಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದ ನಡ್ಡಾ ಅವರು, ನೇಹಾಳ ಮನೆಗೆ ತೆರಳಿ ತಂದೆ, ಕಾರ್ಪೋರೇಟರ್ ನಿರಂಜನ್ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿದರು.

ನೇಹಾಳಿಗಾದ ದುಸ್ಥಿತಿ, ಅನ್ಯಾಯ ಇನ್ಯಾವ ವಿದ್ಯಾರ್ಥಿನಿ, ಯುವತಿಯರಿಗೂ ಆಗಬಾರದು. ಆ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಶಾಂತಿ ಕಾಪಾಡಬೇಕು ಎಂದು ನಡ್ಡಾ ಒತ್ತಾಯಿಸಿದರು.

ರಾಜ್ಯದಲ್ಲಿ ಇಂದು ಇಂಥ ಮತಾಂಧ ಯುವಕರಿಂದ ಹಿಂದೂ ಹೆಣ್ಣುಮಕ್ಕಳನ್ನು ರಕ್ಷಿಸಿಕೊಳ್ಳುವಂಥ ಪರಿಸ್ಥಿತಿ ತಲೆದೋರಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸೂಪರ್ಮ್ಯಾನ್ ಥರ ಹಾರಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಪಡೆದ ಕ್ಯಾಮರೂನ್ ಗ್ರೀನ್: ಈ ವಿಡಿಯೋ ನೋಡಿ

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ್, ಮಹೇಶ ತೆಂಗಿನಕಾಯಿ, ಮಾಜಿ ಶಾಸಕ ಅಶೋಕ ಕಾಟವೇ, ಸಿಮಾ ಮಸೂತಿ, ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ, ಲಿಂಗರಾಜ ಪಾಟೀಲ್ ಮತ್ತಿತರರು ಇದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News