ಸಿದ್ದು ಸವದಿ ರಕ್ಷಿಸಿದ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ: ಕಾಂಗ್ರೆಸ್ ಕಿಡಿ

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಉತ್ತರಪ್ರದೇಶದ ಮಾದರಿಯಲ್ಲಿಯೇ ರಾಜ್ಯದಲ್ಲೂ ಅತ್ಯಾಚಾರ ಪ್ರಕರಣಗಳು ಘಟಿಸುತ್ತಿವೆ ಅಂತಾ ಕಾಂಗ್ರೆಸ್ ಟೀಕಿಸಿದೆ.

Written by - Puttaraj K Alur | Last Updated : Aug 26, 2021, 12:02 PM IST
  • ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಎಂದು ಕಾಂಗ್ರೆಸ್ ಕಿಡಿ
  • ಅತ್ಯಾಚಾರ ಆರೋಪಿಗಳನ್ನು ಬಂಧಿಸಲಾಗದ್ದು ಬಿಜೆಪಿ ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ
  • ಬಿಜೆಪಿ ಸದಾ ಜಪಿಸುವ 'ಯುಪಿ ಮಾಡೆಲ್'ನ್ನು ರಾಜ್ಯದಲ್ಲಿ ಈ ಮೂಲಕ ಜಾರಿಗೊಳಿಸಲು ತೀರ್ಮಾನಿಸಿದೆ ಎಂದ ಕಾಂಗ್ರೆಸ್
ಸಿದ್ದು ಸವದಿ ರಕ್ಷಿಸಿದ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ: ಕಾಂಗ್ರೆಸ್ ಕಿಡಿ title=
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ (Photo Courtesy: @Zee News)

ಬೆಂಗಳೂರು: ತೇರದಾಳ ಬಿಜೆಪಿ ಶಾಸಕ ಸಿದ್ದು ಸವದಿ(Siddu Savadi)ಯನ್ನು ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ ಎಂದು ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ಗುರುವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

‘ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ರಾಜ್ಯ ಬಿಜೆಪಿ ಸರ್ಕಾರ(BJP Govt.) ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ! ಸಿದ್ದು ಸವದಿಯನ್ನು ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ’ ಅಂತಾ ಟೀಕಿಸಿದೆ.

ಇದನ್ನೂ ಓದಿ: Work From Home : ಡಿಸೆಂಬರ್ 2022ರವರೆಗೆ 'ವರ್ಕ್ ಫ್ರಮ್ ಹೋಂ' ವಿಸ್ತರಿಸಲು ಕಂಪನಿಗಳಿಗೆ ಸಲಹೆ ನೀಡಿದ ಸರ್ಕಾರ, ಹೊಸ ಅಡ್ವೈಸರಿ ಜಾರಿ

‘ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ(Gangrape) ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದಿದ್ದರೂ ಆರೋಪಿಗಳನ್ನು ಬಂಧಿಸಲಾಗದ್ದು ಬಿಜೆಪಿ ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ. ಇದುವರೆಗೂ ಗೃಹಸಚಿವರು, ಬಿಜೆಪಿಯ ಮಹಿಳಾ ನಾಯಕಿಯರು ಸಂತ್ರಸ್ತೆಯನ್ನು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ’ ಅಂತಾ ಕಾಂಗ್ರೆಸ್ ಕುಟುಕಿದೆ.

‘ಬಿಜೆಪಿ(BJP) ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿಯೇ ರಾಜ್ಯದಲ್ಲೂ ಅತ್ಯಾಚಾರ ಪ್ರಕರಣಗಳು ಘಟಿಸುತ್ತಿವೆ. ಬಿಜೆಪಿ ಸದಾ ಜಪಿಸುವ 'ಯುಪಿ ಮಾಡೆಲ್'ನ್ನು ರಾಜ್ಯದಲ್ಲಿ ಈ ಮೂಲಕ ಜಾರಿಗೊಳಿಸಲು ತೀರ್ಮಾನಿಸಿದೆ. ಚಾಮುಂಡಿ ಬೆಟ್ಟದಂತಹ ಪ್ರವಾಸಿ ತಾಣದಲ್ಲೂ ಪೊಲೀಸ್ ರಕ್ಷಣೆ, ಗಸ್ತು ಇಲ್ಲದಿರುವುದು ಸರ್ಕಾರದ ವೈಫಲ್ಯವಲ್ಲವೇ ಗೃಹಸಚಿವರೇ?’ ಎಂದು ಕಾಂಗ್ರೆಸ್(Congress) ಪ್ರಶ್ನಿಸಿದೆ.

ಇದನ್ನೂ ಓದಿ: NEP : 'ದೇಶದಲ್ಲಿ 'ಹೊಸ ರಾಷ್ಟ್ರೀಯ ಶಿಕ್ಷಣ ನೀತಿ' ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ'

‘ಸಾಂಸ್ಕೃತಿಕ ನಗರಿ ಎನಿಸಿಕೊಂಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ಅತ್ಯಾಚಾರ ಪ್ರಕರಣವು ಬಿಜೆಪಿ ಸರ್ಕಾರದ ಕಳಪೆ ಕಾನೂನು ಸುವ್ಯವಸ್ಥೆಗೆ ಕನ್ನಡಿ. ಹಿಂದೊಮ್ಮೆ ಮಾಧ್ಯಮ ವರದಿಗಾರ್ತಿಗೆ ಸಚಿವ ಕೆ.ಎಸ್.ಈಶ್ವರಪ್ಪನವರು ಆಡಿದ ಅಸಂಬದ್ಧ ಮಾತುಗಳೇ ಬಿಜೆಪಿಯ ಮಹಿಳಾ ವಿರೋಧಿ ಧೋರಣೆ ಹಾಗೂ ಮಹಿಳಾ ರಕ್ಷಣೆಯ ಬಗೆಗೆ ಇರುವ ಉದಾಸೀನತೆ ತೋರುತ್ತದೆ’ ಅಂತಾ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News