ಬೆಂಗಳೂರು: ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆಹೊತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಂತೂ ಆಟಕ್ಕುಂಟು ಲೆಕ್ಕಕ್ಕಿಲ್ಲ. ತಾವೊಬ್ಬ ಗೃಹ ಸಚಿವ ಎಂಬುದನ್ನೇ ಮಿನಿಸ್ಟರ್ ಸಾಹೇಬ್ರು ಮರೆತಂತಿದೆ’ ಎಂದು ಟೀಕಿಸಿದೆ.
‘ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೆ ದೇವತಾಃ’ ಎಲ್ಲಿ ನಾರಿಯನ್ನು ಪೂಜಿಸಲಾಗುವುದೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂದು ಹೇಳಿದೆ ನಮ್ಮ ಸನಾತನ ಪರಂಪರೆ. ಆದರೆ ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರವು ಮಹಿಳೆಯರನ್ನು ಪೂಜಿಸುವುದಿರಲಿ, ರಾಜ್ಯದ ಮಹಿಳೆಯರಿಗೆ ಸೂಕ್ತ ರಕ್ಷಣೆಯನ್ನು ಸಹ ನೀಡಲು ಸಂಪೂರ್ಣ ವಿಫಲ. ಕೇವಲ ತಾಲಿಬಾನ್‌ನಂತಹ ಪ್ರದೇಶದಲ್ಲಿ ನಡೆಯುತ್ತಿದ್ದ ಘಟನೆಗಳನ್ನು ಕರ್ನಾಟಕಕ್ಕೆ ವಿಸ್ತರಿದ್ದೇ ಕಾಂಗ್ರೆಸ್‌ನ ಆರೂವರೆ ತಿಂಗಳ ಆಡಳಿತದ ಸಾಧನೆ’ ಎಂದು ಬಿಜೆಪಿ ಕಿಡಿಕಾರಿದೆ.
‘ಬೆಳಗಾವಿಯ ವಂಟಮೂರಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ಅಮಾನುಷ ಘಟನೆ ಅತ್ಯಂತ ಹೇಯ ಹಾಗೂ ನಾಗರೀಕ ಸಮಾಜವೇ ತಲೆ ತಗ್ಗಿಸುವಂತಹದ್ದು. ಆದರೆ ಈ ಘಟನೆ ನಡೆದ ಮೇಲೆ ರಾಜ್ಯದ ಕಾಂಗ್ರೆಸ್ ಸರ್ಕಾರ ಈ ಪ್ರಕರಣದಲ್ಲಿ ನಡೆದುಕೊಂಡ ರೀತಿ ಮಾತ್ರ ಕಾಂಗ್ರೆಸ್‌ನ ಮಹಿಳಾ ವಿರೋಧಿ ನೀತಿಯ ಅಸಲಿ ಮುಖವಾಡವನ್ನು ಬಿಚ್ಟಿಟ್ಟಿದೆ. ವಂಟಮೂರಿ ಘಟನೆ ನಡೆದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಾದಿಯಾಗಿ, ಸಚಿವರು ಹಾಗೂ ಶಾಸಕರು ಬೆಳಗಾವಿಯಲ್ಲಿಯೇ ಬೀಡು ಬಿಟ್ಟಿದ್ದರು. ಆದರೆ ಸೌಜನ್ಯಕ್ಕೂ ಕೂಗಳತೆ ದೂರದಲ್ಲಿ ಸಂತ್ರಸ್ತೆ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಲಿಲ್ಲ, ಸರ್ಕಾರ ನಿಮ್ಮ ಜೊತೆ ಇದೆ ಎಂದು ಧೈರ್ಯ ತುಂಬಲಿಲ್ಲ. ಇದು ಕಾಂಗ್ರೆಸ್‌ನ ಅಸಲಿ ಮಹಿಳಾ ಸಬಲೀಕರಣ’ವೆಂದು ಬಿಜೆಪಿ ವ್ಯಂಗ್ಯವಾಡಿದೆ.
ವಂಟಮೂರಿ ಘಟನೆ ನಡೆದ ಸಂದರ್ಭದಲ್ಲಿ ಸಿಎಂ @siddaramaiah ಅವರಾದಿಯಾಗಿ, ಸಚಿವರು ಹಾಗೂ ಶಾಸಕರು ಬೆಳಗಾವಿಯಲ್ಲಿಯೇ ಬೀಡು ಬಿಟ್ಟಿದ್ದರು. ಆದರೆ ಸೌಜನ್ಯಕ್ಕೂ ಕೂಗಳತೆ ದೂರದಲ್ಲಿ ಸಂತ್ರಸ್ತೆ ದಾಖಲಾಗಿದ್ದ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಆರೋಗ್ಯ ವಿಚಾರಿಸಲಿಲ್ಲ, ಸರ್ಕಾರ ನಿಮ್ಮ ಜೊತೆ ಇದೆ ಎಂದು ಧೈರ್ಯ ತುಂಬಲಿಲ್ಲ. ಇದು ಕಾಂಗ್ರೆಸ್‌ನ…
— BJP Karnataka (@BJP4Karnataka) December 16, 2023
ಇದನ್ನೂ ಓದಿ: ಉದ್ಯಮಿಗೆ ವಂಚಿಸಲು ಯತ್ನಿಸಿದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್!
‘ಇನ್ನು ಬೆಳಗಾವಿಯ ವಂಟಮೂರಿ ಗ್ರಾಮ ಬರುವುದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ. ಅಲ್ಲಿನ ಸ್ಥಳೀಯ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ. ಸ್ವಕ್ಷೇತ್ರದಲ್ಲಿ ಕಂಡು ಕೇಳರಿಯದಂತಹ ಭೀಭತ್ಸ ಘಟನೆ ನಡೆದರೂ, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕುರುಡ-ಕಿವುಡ-ಮೂಗನಂತೆ ವರ್ತಿಸುತ್ತಿರುವುದು ಸಂತ್ರಸ್ತೆಗೆ ಹಾಗೂ ರಾಜ್ಯದ ಮಹಿಳಾ ಸಮುದಾಯಕ್ಕೆ ಮಾಡುತ್ತಿರುವ ಮಹಾ ಅನ್ಯಾಯ. ಇನ್ನು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರು ಸದನದಲ್ಲಿಯೂ ನಾಪತ್ತೆ, ಸಂತ್ರಸ್ತೆಯ ಆರೋಗ್ಯ ವಿಚಾರಿಸುವಲ್ಲಿಯೂ ನಾಪತ್ತೆ. ಇದು ಕಾಂಗ್ರೆಸ್ ಸರ್ಕಾರದ ಆಡಳಿತದ ಸ್ಯಾಂಪಲ್. ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ಅಮಾನುಷ ಘಟನೆ ನಡೆದಿದ್ದರೂ ಸಹ ಕಾಂಗ್ರೆಸ್ ಸಂಪೂರ್ಣ ಮೌನಕ್ಕೆ ಶರಣಾಗಿರುವುದನ್ನು ನೋಡಿದರೆ, ಕಾಂಗ್ರೆಸ್ ಆಡಳಿತವನ್ನು ದುರುಪಯೋಗಪಡಿಸಿಕೊಂಡು ಅಪರಾಧಿಗಳನ್ನು ರಕ್ಷಿಸುವ ಕೆಲಸಕ್ಕೆ ಮುಂದಾಗಿದೆಯಾ ಎಂಬ ಅನುಮಾನ ಮೂಡುವುದಂತು ನಿಶ್ಚಿತ’ವೆಂದು ಬಿಜೆಪಿ ಕುಟುಕಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಪುಂಡ ಪೋಕರಿಗಳು, ಜಿಹಾದಿಗಳು, ಮತಾಂಧರು ಕಾನೂನು ಹಾಗೂ ಪೊಲೀಸರ ಭಯವಿಲ್ಲದೇ ಮಕ್ಕಳ, ಮಹಿಳೆಯರ, ಜನಸಾಮಾನ್ಯರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ.
ಹಿರಿಯ ಮಹಿಳಾ ಭೂ ವಿಜ್ಞಾನಿಯನ್ನು ಬೆಂಗಳೂರಿನಲ್ಲಿ…
— BJP Karnataka (@BJP4Karnataka) December 16, 2023
‘ಕರ್ನಾಟಕದಲ್ಲಿ ನಡೆದ ಈ ಹೀನ ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಬಿಜೆಪಿಯ ಕೇಂದ್ರ ಮಹಿಳಾ ಸಮಿತಿಯ ಸದಸ್ಯರು ಸಂತ್ರಸ್ತೆಯ ಆರೋಗ್ಯ ವಿಚಾರಿಸಲು ಬೆಳಗಾವಿಗೆ ಬಂದಿದ್ದರೆ, ಕಾಂಗ್ರೆಸ್‌ನವರು ಮಾತ್ರ ಮೋಜು-ಮಸ್ತಿಯಲ್ಲಿ ತೊಡಗಿದ್ದಾರೆ. ಇದು ಕಾಂಗ್ರೆಸ್ ಮಹಿಳೆಯರಿಗೆ ನೀಡುವ ಅಸಲಿ ಗೌರವ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕರ್ನಾಟಕದಲ್ಲಿ ಅರಾಜಕತೆ ತಾಂಡವವಾಡುತ್ತಿದೆ. ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಪುಂಡ ಪೋಕರಿಗಳು, ಜಿಹಾದಿಗಳು, ಮತಾಂಧರು ಕಾನೂನು ಹಾಗೂ ಪೊಲೀಸರ ಭಯವಿಲ್ಲದೇ ಮಕ್ಕಳ, ಮಹಿಳೆಯರ, ಜನಸಾಮಾನ್ಯರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ’ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
‘ಹಿರಿಯ ಮಹಿಳಾ ಭೂ ವಿಜ್ಞಾನಿಯನ್ನು ಬೆಂಗಳೂರಿನಲ್ಲಿ ಹಾಡುಹಗಲೇ ಕೊಲೆಗೈಯಲಾಗಿತ್ತು. ಪ್ರತಿನಿತ್ಯ ಸರಗಳ್ಳತನವಂತೂ ಮಾಮೂಲಿಯಾಗಿದೆ. ಮಹಿಳೆಯರಿಗೆ ಸುರಕ್ಷಿತ ತಾಣವಾಗಿದ್ದ ಕರ್ನಾಟಕವನ್ನು, ಕಾಂಗ್ರೆಸ್ ತನ್ನ ದುರಾಡಳಿತದಿಂದ ಅಸುರಕ್ಷಿತ ತಾಣವನ್ನಾಗಿಸುತ್ತಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಾತ್ರ ಭಯೋತ್ಪಾದಕರಿಗೆ ಅಮಾಯಕರು, ಬ್ರದರ್ಸ್‌ಗಳು ಎಂಬ ಪಟ್ಟ ಕಟ್ಟುವಲ್ಲಿ ನಿರತವಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಂತೂ ಆಟಕ್ಕುಂಟು ಲೆಕ್ಕಕ್ಕಿಲ್ಲ. ತಾವೊಬ್ಬ ಗೃಹ ಸಚಿವ ಎಂಬುದನ್ನೇ ಮಿನಿಸ್ಟರ್ ಸಾಹೇಬ್ರು ಮರೆತಂತಿದೆ. ಘಟನೆಯ ನೈತಿಕ ಹೊಣೆಹೊತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ನೀಡಬೇಕು. ಸಂತ್ರಸ್ತ ಮಹಿಳೆಗೆ ನ್ಯಾಯ ಸಿಗುವವರೆಗೂ ಬಿಜೆಪಿ ಈ ಬಗ್ಗೆ ರಾಜ್ಯಾದ್ಯಂತ ಹೋರಾಟ ನಡೆಸಲಿದೆ’ ಎಂದು ಹೇಳಿದೆ.
ಇದನ್ನೂ ಓದಿ: ಬೆಳಗಾವಿ ಮಹಿಳೆಯ ವಿವಸ್ತ್ರ ಪ್ರಕರಣ: ಸಂತ್ರಸ್ತೆ ಭೇಟಿಯಾದ ರಾಷ್ಟ್ರ ಬಿಜೆಪಿ ನಿಯೋಗ!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.